ಮಣಿಪಾಲ: ಮಣಿಪಾಲದ ವಿದ್ಯಾರ್ಥಿಗಳಿಗೆ ಡ್ರಗ್ ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದು, ಆತನಿಂದ ಸುಮಾರು 15 ಲಕ್ಷ ರೂ. ಮೌಲ್ಯದ ಎಂಡಿಎಂಎ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದಾರೆ.
ಉತ್ತರ ಭಾರತ ಮೂಲದ ಹಿಮಾಂಶು ಜೋಷಿ (20) ಬಂಧಿತ ಆರೋಪಿ. ಈತ ಮಣಿಪಾಲ ಎಂಐಟಿ ಕಾಲೇಜಿನ ಇನ್ಸ್ಟ್ರುಮೆಂಟೇಶನ್ ಆ್ಯಂಡ್ ಕಂಟ್ರೋಲ್ ವಿಭಾಗದ 7ನೇ ಸೆಮಿಸ್ಟರ್ನ ವಿದ್ಯಾರ್ಥಿ ಎಂದು ತಿಳಿದುಬಂದಿದೆ.
ಈತ ಬೈಕ್ನಲ್ಲಿ ಮಣಿಪಾಲ ಸಮೀಪದ ಶೀಂಬ್ರಾ ಸೇತುವೆ ಬಳಿ ನಿಷೇಧಿತ ಮಾತ್ರೆಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ.