ಎಂಟು ಪೊಲೀಸರನ್ನು ಹತ್ಯೆಗೈದಿದ್ದ ರೌಡಿ ವಿಕಾಸ್ ದುಬೆ ದೇವಾಲಯದಲ್ಲಿ ಬಂಧನ

ಭೋಪಾಲ್: ಎಂಟು ಮಂದಿ ಪೊಲೀಸರ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ವಿಕಾಸ್ ದುಬೆಯನ್ನು ಮಧ್ಯಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಮಧ್ಯಪ್ರದೇಶದ ಉಜ್ಜಯನಿ ದೇವಾಲಯವೊಂದರಲ್ಲಿ ವಿಕಾಸ್ ದುಬೆಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ. ನಿನ್ನೆ ಪೊಲೀಸರ ಕಾರ್ಯಾಚರಣೆಯಲ್ಲಿ ವಿಕಾಸ್ ದುಬೆಯ ಇಬ್ಬರು ಸಹಚರರನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದರು.