ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ಮುಖಂಡ ಅರುಣ್ ಜೇಟ್ಲಿ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅರುಣ್ ಜೇಟ್ಲಿ ಅವರನ್ನು ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಏಮ್ಸ್ ಆಸ್ಪತ್ರೆಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಈ ಹಿಂದೆ 2014ರ ನರೇಂದ್ರ ಮೋದಿ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದರು. ಆದ್ರೆ ಅನಾರೋಗ್ಯದ ಕಾರಣ 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರಲಿಲ್ಲ.