ಅಶಕ್ತ ಕಲಾವಿದರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆರ್ಥಿಕ ಸಹಾಯ

ಉಡುಪಿ ಏ.22: ಪ್ರಸ್ತುತ ಕೋವಿಡ್-19 ರೋಗಾಣುವಿನಿಂದ ಇಡೀ ರಾಜ್ಯ ಲಾಕ್ ಡೌನ್ ಆಗಿದ್ದು, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು, ಸಾಹಿತಿಗಳಿಗೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆರ್ಥಿಕ ಸಹಾಯ ಮಾಡಲು ನಿರ್ಧರಿಸಲಾಗಿದೆ.

ಆರ್ಥಿಕವಾಗಿ ಸಂಕಷ್ಟದಲ್ಲಿರುವ ಎಲ್ಲಾ ಕಲಾ ಪ್ರಕಾರದ ಕಲಾವಿದರು/ಸಾಹಿತಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವೃತ್ತಿ ನಿರತರಾಗಿದ್ದು ಕನಿಷ್ಠ 10 ವರ್ಷ ಕಲಾಸೇವೆ ಮಾಡಿರಬೇಕು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಸಾಶನ ಪಡೆಯುತ್ತಿರಬಾರದು ಮತ್ತು ಯಾವುದೇ ಸರಕಾರಿ (ರಾಜ್ಯ/ಕೇಂದ್ರ/ನಿಗಮ/ಮಂಡಳಿ/ಸರ್ಕಾರಿ ಅನುದಾನಿತ ಸಂಸ್ಥೆಗಳು ಮತ್ತು ಅರೆ ಸರ್ಕಾರಿ ಸಂಸ್ಥೆಗಳು.) ನೌಕರರರಾಗಿರಬಾರದು

ಕಲಾವಿದರು, ಸಾಹಿತಿಗಳು ತಮ್ಮ ಹೆಸರು, ವಿಳಾಸ, ಕಲಾ ಪ್ರಕಾರ, ಆಧಾರ್ ಸಂಖ್ಯೆ, ದೂರವಾಣಿ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ವಿವರಗಳನ್ನೊಳಗೊಂಡ ಅರ್ಜಿಯನ್ನು ಬಿಳಿ ಹಾಳೆಯ ಮೇಲೆ ಸ್ವ ವಿವರಗಳೊಂದಿಗೆ , ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರಗತಿ ನಗರ, ಅಲೆವೂರು ಗ್ರಮ, ಉಡುಪಿ , ಈ ಮೇಲ್ dkc.udupi@gmail.com  ಅಥವಾ ಮೊ. 9945731062 ಗೆ ವಾಟ್ಸಾಪ್ ಮೂಲಕ ಏಪ್ರಿಲ್ 27 ರ ಒಳಗೆ ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ ತಿಳಿಸಿದ್ದಾರೆ.