HomeTrendingಅಭಿಮಾನಿಗಳಿಗೆ ಪ್ರೀತಿಯ ಪತ್ರ: ಪತ್ರದಲ್ಲಿ ಪುನೀತ್ ರಾಜಕುಮಾರ್ ಪತ್ನಿ ಹೇಳಿದ್ದೇನು?

ಅಭಿಮಾನಿಗಳಿಗೆ ಪ್ರೀತಿಯ ಪತ್ರ: ಪತ್ರದಲ್ಲಿ ಪುನೀತ್ ರಾಜಕುಮಾರ್ ಪತ್ನಿ ಹೇಳಿದ್ದೇನು?

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾದಾಗಿನಿಂದಲೂ ಮೌನಕ್ಕೆ ಶರಣಾಗಿದ್ದ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಇದೀಗ ಪತ್ರದ ಮೂಲಕ ತಮ್ಮ ಭಾವನೆಯನ್ನು ನಾಡಿನ ಜನರೊಂದಿಗೆ ಹಂಚಿಕೊಂಡಿದ್ದಾರೆ. ರಾಘವೇಂದ್ರ ರಾಜ್ ಕುಮಾರ್  ತಮ್ಮ ಟ್ವೀಟರ್ ಖಾತೆಯಲ್ಲಿ ಈ ಪತ್ರವನ್ನು ಹಂಚಿಕೊಂಡಿದ್ದಾರೆ.

ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಅಗಲಿಕೆ ನಮಗಷ್ಟೇ ಅಲ್ಲದೇ, ಇಡೀ ರಾಜ್ಯಕ್ಕೆ ಆಘಾತಕಾರಿ ವಿಷಯ. ನಿಷ್ಕಲ್ಮಶ ಪ್ರೀತಿಯಿಂದ, ಅಕ್ಕರೆಯ ಅಭಿಮಾನದಿಂದ ಅವರನ್ನು ಪವರ್ ಸ್ಚಾರ್ ಆಗಿ ರೂಪಿಸಿದ್ದ ನಿಮ್ಮೆಲ್ಲರಿಗೆ ಅವರ ವಿದಾಯ ತಂದಿತ್ತ ದು:ಖ ಎಷ್ಟಿರಬಹುದೆಂದು ಊಹಿಸಲು ಸಾಧ್ಯವಿಲ್ಲ. ಆದರೂ, ಇಂತಹ ಸಂದರ್ಭದಲ್ಲಿ ಎಲ್ಲಿಯೂ ಸಂಯಮ ಕಳೆದುಕೊಳ್ಳದೇ. ಅಹಿತಕರ ಘಟನೆಗಳು ನಡೆಯದಂತೆ ಅತ್ಯಂತ ಗೌರವಯುತವಾಗಿ ಪುನೀತ್ ರಾಜ್ ಕುಮಾರ್ ಬೀಳ್ಗೋಡುಗೆ ನೀಡುವಲ್ಲಿ ಸಹಕರಿಸಿದ ನಾಡಿನ ಎಲ್ಲ ಅಭಿಮಾನಿ ದೇವರುಗಳು ಹಾಗೂ ಸಾರ್ವಜನಿಕರಿಗೆ ನಮ್ಮ ಇಡೀ ಕುಟುಂಬದ ಪರವಾಗಿ ಧನ್ಯವಾದಗಳು ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

error: Content is protected !!