HomeTrendingಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಆರೋಪ: ಸಮಗ್ರ ತನಿಖೆಗೆ ಎಸ್ಪಿ ಆದೇಶ

ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಆರೋಪ: ಸಮಗ್ರ ತನಿಖೆಗೆ ಎಸ್ಪಿ ಆದೇಶ

ಕಾರ್ಕಳ: ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ವಿಚಾರ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕ ಆರೋಪ- ಪ್ರತ್ಯಾರೋಪಕ್ಕೆ ಕಾರಣವಾಗಿದೆ.

ಈ ಹಿಂದೆ ರಾಧಾಕೃಷ್ಣ ಅವರು ಫೇಸ್ಬುಕ್ ನಲ್ಲಿ ದೇಶದ ಯೋಧರ ವಿರುದ್ಧ ಪೋಸ್ಟ್ ಹಾಕಿದ್ದರು ಎಂಬ ವಿಚಾರಕ್ಕೆ ಸಂಬಂಧಿಸಿ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ತನ್ನ ಹೆಸರಿನಲ್ಲಿ ನಕಲಿ ಅಕೌಂಟ್ ಮಾಡಿ ಈ ಪೋಸ್ಟ್ ಹಾಕಲಾಗಿದೆ ಎಂದು ರಾಧಾಕೃಷ್ಣ ವಾದಿಸುತ್ತಾ ಬಂದಿದ್ದರು. ತನಿಖೆಗೆ ಹಾಜರಾದ ವೇಳೆ ಎಸ್ಐ ಮಧು ಅವರು ಹಲ್ಲೆ ನಡೆಸಿದ್ದಾಗಿ ರಾಧಾಕೃಷ್ಣ ದೂರಿದ್ದರು.

ಇದೀಗ ಈ ಪ್ರಕರಣ ರಾಜಕೀಯ ಬಣ್ಣ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಸಮಗ್ರ ತನಿಖೆಗೆ ಎಸ್ಪಿ ವಿಷ್ಣುವರ್ಧನ ಆದೇಶ ನೀಡಿದ್ದಾರೆ. ಕುಂದಾಪುರ ಡಿಎಸ್ಪಿಗೆ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದ್ದಾರೆ.

error: Content is protected !!