ಉಡುಪಿ: ಪೊಲೀಸ್ ಹಾಗೂ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಸಹಿತ ಜಿಲ್ಲೆಯಲ್ಲಿ ಇಂದು 14 ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇಂದಿನ ಸೋಂಕಿತರ ಪೈಕಿ ಎಂಟು ಮಂದಿ ಮುಂಬೈನಿಂದ ಬಂದವರಾಗಿದ್ದು, ಇಬ್ಬರ ಸೋಂಕಿನ ಸಂಪರ್ಕವನ್ನು ಪತ್ತೆ ಮಾಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1077ಕ್ಕೆ ಏರಿಕೆ ಆಗಿದೆ. ಈವರೆಗೆ ಜಿಲ್ಲೆಯಲ್ಲಿ 961 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 114 ಸಕ್ರಿಯ ಸೋಂಕು ಪ್ರಕರಣಗಳಿವೆ ಎಂದು ತಿಳಿದುಬಂದಿದೆ.