ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹರಡುವಿಕೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜಿಮ್ ಮತ್ತು ಈಜುಕೊಳ ಸದ್ಯಕ್ಕೆ ತೆರೆಯುವ ವಿಚಾರ ಇಲ್ಲ ಎಂದು ಪ್ರವಾಸೋದ್ಯಮ ಮತ್ತು ಕ್ರೀಡಾ ಸಚಿವ ಸಿ.ಟಿ. ರವಿ ಹೇಳಿದ್ದಾರೆ.
ಅವರು ಸುದ್ದಿಗಾರರೊಂದಿಗೆ ಮಾತನಾಡಿ ಕೇಂದ್ರ ಸರ್ಕಾರ ನೀಡುವ ಮಾರ್ಗಸೂಚಿಯ ಪ್ರಕಾರ ನಡೆದುಕೊಳ್ಳಬೇಕಾಗುತ್ತದೆ. ಜಿಮ್ ಹಾಗೂ ಈಜುಕೊಳ ತೆರೆಯುವ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.