ಹಿರಿಯಡಕ: ಉಡುಪಿ ತಾಲೂಕು ಆತ್ರಾಡಿ ಗ್ರಾಮದ ನಿವಾಸಿ ನಿಶ್ಮಿತಾ (19) ಎಂಬುವವರು ಅಕ್ಟೋಬರ್ 22 ರಿಂದ ನಾಪತ್ತೆಯಾಗಿದ್ದಾರೆ.
ಚಹರೆ: 152 ಸೆಂ.ಮೀ ಎತ್ತರವಿದ್ದು, ಬಿಳಿ ಮೈಬಣ್ಣ, ಸಾಧಾರಣ ಶರೀರ, ದುಂಡು ಮುಖ ಹೊಂದಿದ್ದು, ಕನ್ನಡ ತುಳು ಭಾಷೆ ಬಲ್ಲವರಾಗಿದ್ದಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡಕ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.