ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿಅತಿರುದ್ರ ಮಹಾಯಾಗ ಪ್ರಾರಂಭ

ಶಿವಪಾಡಿ: ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಬುಧವಾರದಂದು ಋತ್ವಿಜರಿಂದ ಪೂಜೆಯೊಂದಿಗೆ ಅತಿರುದ್ರ ಮಹಾಯಾಗ ಶುಭಾರಂಭಗೊಂಡಿತು. ಬೆಳಿಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ಶತಚಂಡಿಕಾ ಯಾಗಮಂಟಪದಲ್ಲಿ ಶತಚಂಡಿಕಾ ಯಾಗ ಪ್ರಾರಂಭಗೊಂಡಿತು.

ಈ ಸಂದರ್ಭದಲ್ಲಿ ಅತಿರುದ್ರ ಮಹಾಯಾಗ ಸಮಿತಿಯ ಅಧ್ಯಕ್ಷ ಶಾಸಕ ರಘುಪತಿ ಭಟ್, ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಮಹೇಶ್ ಠಾಕೂರ್, ಬೆಂಗಳೂರಿನ ಮಾಜಿ ವಿಧಾನಸಭಾ ಸದಸ್ಯ ದಯಾನಂದ ರೆಡ್ಡಿ, ಡಾ. ಜಿ. ಶಂಕರ್, ನಟ ರಕ್ಷಿತ್ ಶೆಟ್ಟಿ ಮತ್ತು ಕುಂದಾಪುರ ಗುತ್ತಿಗೆದಾರ ಕಾರ್ತಿಕ್ ಆರ್. ನಾಯಕ್ ಉಪಸ್ಥಿತರಿದ್ದರು.