ಶಿವಪಾಡಿ: ಇಲ್ಲಿನ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗದ ಮೊದಲನೆ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಯಾಗದ ಪ್ರಧಾನ ಅರ್ಚಕ ವಿನಾಯಕ ಉಡುಪ ದೀಪ ಬೆಳಗಿಸಿ ಉದ್ಘಾಟಿಸಿದರು.
ಕು. ಅಕ್ಷಯ ಗೋಖಲೆ ಧಾರ್ಮಿಕ ಉಪನ್ಯಾಸ ನೀಡಿದರು. ಜಂಸಾಲೆ ರಾಘವೇಂದ್ರ ಆಚಾರ್ಯ ಸಾರಥ್ಯದಲ್ಲಿ “ಯಕ್ಷಗಾನ ವೈಭವ” ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.
ಈ ಸಂದರ್ಭದಲ್ಲಿ ಆರ್.ಎಸ್.ಎಸ್ ಹಿರಿಯರಾದ ಶಂಭು ಶೆಟ್ಟಿ, ಶಾಸಕ ರಘುಪತಿ ಭಟ್, ಯಾಗದ ರೂವಾರಿ ವಾಗೇಶ್ ಶಾಸ್ತ್ರಿ, ಸಹಕಾರಿ ರಂಗದ ಧುರೀಣ ಬೋಳ ಸದಾಶಿವ ಶೆಟ್ಟಿ, ದ.ಕ ಮೋಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್, ಸಮಿತಿ ಸಂಚಾಲಕ ನಾರಾಯಣ ಶೆಣೈ, ಪಾಂಡುರಂಗ ಲಾಘವಾಂಕರ್, ಮಂಜುನಾಥ ಉಪಾಧ್ಯಾಯ, ಉದ್ಯಮಿ ಪುರುಷೋತ್ತಮ ಶೆಟ್ಟಿ ಉಪಸ್ಥಿತರಿದ್ದರು.