ಚಾಮರಾಜನಗರ: ದೆಹಲಿಯ ಪರಿಸ್ಥಿತಿಯೇ ಇದೀಗ ಕರ್ನಾಟಕಕ್ಕೂ ತಟ್ಟಿದ್ದು, ಕಳೆದ 24 ಗಂಟೆಗಳಲ್ಲಿ 24 ಕೊರೊನಾ ಸೋಂಕಿತ ರೋಗಿಗಳು ಆಕ್ಸಿಜನ್ ಕೊರತೆ ಮತ್ತು ಇತರ ಸಮಸ್ಯೆಗಳಿಂದ ಮೃತಪಟ್ಟಿರುವ ಘಟನೆ ಜಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಕಳೆದ ರಾತ್ರಿ 16 ಮಂದಿ ರೋಗಿಗಳು ಮೃತಪಟ್ಟಿದ್ದರೆ, ಇಂದು ನಸುಕಿನ ಜಾವ 4ಕ್ಕೂ ಹೆಚ್ಚು ಕೋವಿಡ್ ರೋಗಿಗಳು ಆಕ್ಸಿಜನ್ ಇಲ್ಲದೆ ನರಳಾಡಿ ಪ್ರಾಣ ಕಳೆದುಕೊಂಡಿದ್ದಾರೆ. ಆಕ್ಸಿಜನ್ ಸಿಲಿಂಡರ್ ಬರುವ ಹೊತ್ತಿಗೆ ರೋಗಿಗಳ ಪ್ರಾಣಪಕ್ಷಿ ಹಾರಿಹೋಗಿತ್ತು.
ಮೈಸೂರಿನಿಂದ ನಮಗೆ ಸೂಕ್ತ ಸಮಯಕ್ಕೆ ಆಕ್ಸಿಜನ್ ಪೂರೈಕೆಯಾಗಲಿಲ್ಲ, ಇದರಿಂದ ರೋಗಿಗಳು ಮೃತಪಟ್ಟಿದ್ದಾರೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಎಂ ಆರ್ ರವಿ ತಿಳಿಸಿದ್ದಾರೆ.