ಕಾರ್ಕಳ: ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಅನಿಲ್ ಪೂಜಾರಿ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ನಿಟ್ಟೆ ಗ್ರಾಮದ ಬಜರಂಗದಳದ ತಾಲೂಕು ಸಂಚಾಲಕ ಸುನಿಲ್, ವಲಯ ಸಂಚಾಲಕ ಶರತ್ ಹಾಗೂ ತಾಲೂಕು ಗೋರಕ್ಷಾ ಪ್ರಮುಖ್ ಪ್ರಸಾದ್ ಬಂಧಿತ ಆರೋಪಿಗಳು.
ಇವರು ಭಾನುವಾರ ರಾತ್ರಿ ನಿಟ್ಟೆ ಗ್ರಾಮದ ಅನಿಲ್ ಪೂಜಾರಿ ಅವರ ಮನೆಗೆ ನುಗ್ಗಿ ತಲವಾರಿನಿಂದ ಹಲ್ಲೆ ನಡೆಸಿದ್ದರು. ಆರೋಪಿಗಳ ಪೈಕಿ ಇನ್ನಿಬ್ಬರ ಪತ್ತೆ ಕಾರ್ಯ ಮುಂದುವರಿದಿದೆ ಎಂದು ತಿಳಿದುಬಂದಿದೆ.