udupixpress
Home Trending ಯಡಿಯೂರಪ್ಪರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿಯಲ್ಲೇ ಪ್ರಯತ್ನ ನಡೆಯುತ್ತಿದೆ: ಸಿದ್ದರಾಮಯ್ಯ

ಯಡಿಯೂರಪ್ಪರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿಯಲ್ಲೇ ಪ್ರಯತ್ನ ನಡೆಯುತ್ತಿದೆ: ಸಿದ್ದರಾಮಯ್ಯ

ಬಾಗಲಕೋಟೆ: ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿಯಲ್ಲೇ ಪ್ರಯತ್ನ ನಡೆದಿರುವುದು ನಿಜ. ಆದರೆ ಯಾವಾಗ ಇಳಿಸ್ತಾರೆ, ಯಾರನ್ನು ಸಿಎಂ ಮಾಡ್ತಾರೆ ಅಂತ ನನಗೆ ಗೊತ್ತಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಯಡಿಯೂರಪ್ಪ ಜಾಸ್ತಿ ದಿನ ಸಿಎಂ ಸ್ಥಾನದಲ್ಲಿ ಇರೊಲ್ಲ ಎಂದು ಶಾಸಕ ಬಸನಗೌಡ ಯತ್ನಾಳ್ ಹೇಳಿಕೆಗೆ ಬಾದಾಮಿ ಪಟ್ಟಣದಲ್ಲಿ ಮಂಗಳವಾರ ಪ್ರತಿಕ್ರಿಯಿಸಿದರು. ನಾವಂತೂ (ಕಾಂಗ್ರೆಸ್) ಸರ್ಕಾರ ಬೀಳಿಸೋಕೆ ಹೋಗೊಲ್ಲ. ಬಿಜೆಪಿಯವರ ಆಂತರಿಕ ತಿಕ್ಕಾಟದಿಂದ ಸಕಾ೯ರ ಬಿದ್ದು ಹೋದರೆ ನಾವು ಚುನಾವಣೆ ಎದುರಿಸಲು ಸಿದ್ಧ ಎಂದರು.

ಶಿರಾ, ರಾಜರಾಜೇಶ್ವರಿ ನಗರ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ಈಗಾಗಲೇ ಗೆದ್ದಾಗಿದೆ. ಫಲಿತಾಂಶವೊಂದೇ ಬಾಕಿ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಆ ಎರಡೂ ಕ್ಷೇತ್ರಗಳು ಯಡಿಯೂರಪ್ಪ ಅವರ ಜೇಬಿನಲ್ಲಿವೆಯೇ ಎಂದು ಪ್ರಶ್ನಿಸಿದರು.

error: Content is protected !!