ಬೆಂಗಳೂರು : ಪಿಎಸ್ ಐ ನೇಮಕಾತಿ ಪರೀಕ್ಷೆ ಹಗರಣ ಸಂಬಂಧ ಮಾಜಿ ಸಚಿವ ಪ್ರಿಯಾಂಕ ಖರ್ಗೆ ಬಿಡುಗಡೆ ಮಾಡಿರುವ ಹೊಸ ಆಡಿಯೋ ಟೇಪ್ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ ಖರ್ಗೆ ಬಿಡುಗಡೆ ಮಾಡಿರುವ ಹೊಸ ಆಡಿಯೋ ಟೇಪ್ ಬಗ್ಗೆಯೂ ತನಿಖೆ ನಡೆಸಲಾಗುವುದು. ನಾನು ಆ ಆಡಿಯೋ ಕೇಳಿಲ್ಲ. ಆಡಿಯೋದಲ್ಲಿ ಇಬ್ಬರ ನಡುವೆ ಮಾತುಕತೆ ನಡೆದಿದೆ. ಆ ಇಬ್ಬರು ಯಾರು? ಎಲ್ಲವೂ ತನಿಖೆ ಆಗುತ್ತದೆ. ತಪ್ಪಿತಸ್ಥರು ಯಾರಾಗಿದ್ದರೂ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಬೆಂಗಳೂರಿನ ಶಾಲೆಗಳಿಗೆ ಹುಸಿ ಬಾಂಬ್ ಕರೆ ಬಂದಿರುವ ಪ್ರಕರಣ ನನಗೆ ಗೊತ್ತಿಲ್ಲ, ನಾನು ಕಮಿಷನರ್ ಜೊತೆಗೆ ಮಾತನಾಡುತ್ತೇನೆ. ಪ್ರಕರಣವನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಕೂಲಂಕಷ ತನಿಖೆ ಮಾಡುತ್ತೇವೆ ಎಂದು ಈ ಸಂದರ್ಭದಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.