ಮಂಗಳೂರು: ಮಳೆಯಿಂದ ಹಾನಿ ಉಂಟಾದ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಆ. 12ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭೇಟಿ ನೀಡಲಿದ್ದಾರೆ.
ಬೆಳ್ಳಗೆ 11.20 ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, 11.30ಕ್ಕೆ ರಸ್ತೆ ಮಾರ್ಗವಾಗಿ ಬಂಟ್ವಾಳ, ಬೆಳ್ತಂಗಡಿ ಭಾಗಗಳಲ್ಲಿ ಮಳೆಯಿಂದ ಉಂಟಾದ ಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.
ಮಧ್ಯಾಹ್ನ 1 ಗಂಟೆಗೆ ಧರ್ಮಸ್ಥಳ ಮಂಜುನಾಥನ ದರ್ಶನ, 2.30ಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಂಸದರು, ಹಾಗೂ ಶಾಸಕರ ಜತೆ ಚರ್ಚೆ ನಡೆಸಲಿದ್ದಾರೆ. 3.15ಕ್ಕೆ ರಸ್ತೆ ಮಾರ್ಗದ ಮೂಲಕ ಮಂಗಳೂರು ವಿಮಾನ ನಿಲ್ದಾಣ ಪ್ರಯಾಣ ಬೆಳೆಸಲಿದ್ದು, 4.10 ವಿಶೇಷ ವಿಮಾನ ಮೂಲಕ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ.