ಉಡುಪಿ: ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರ ವೇದಿಕೆ ಹಾಗೂ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಸಹಯೋಗದಲ್ಲಿ ಪುನಶ್ಚೇತನ ಕಾರ್ಯಾಗಾರ ಉಡುಪಿ ಎಂಜಿಎಂ ಕಾಲೇಜಿನ ಆವರಣದಲ್ಲಿರುವ ಧ್ವನ್ಯಾಲೋಕದಲ್ಲಿ ಆಗಸ್ಟ್ 16ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಉಡುಪಿ ಪಿಪಿಸಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಬಿ. ಜಗದೀಶ ಶೆಟ್ಟಿ ಕಾರ್ಯಾಗಾರ ಉದ್ಘಾಟಿಸುವರು. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ನಿರ್ದೇಶಕ ಪ್ರೊ. ವರದೇಶ ಹಿರೇಗಂಗೆ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟನೆ ತಿಳಿಸಿದೆ.