ಮಂಗಳೂರು: ಇಲ್ಲಿನ ಎಸ್‌ಸಿಡಿಸಿಸಿ ಬ್ಯಾಂಕ್‌ನ ಕಾಪು ಶಾಖೆಯು ಗ್ರಾಹಕರ ಹೆಚ್ಚಿನ ಅನುಕೂಲಕ್ಕಾಗಿ ಈಗ ಇರುವ ಕಟ್ಟಡದಿಂದ ಕಾಪು ರಾ. ಹೆ. 66ರ ಬಳಿಯ ಶ್ರೀ ನಾರಾಯಣ ಗುರು ಕಾಂಪ್ಲೆಕ್ಸ್‌ನ ಪ್ರಥಮ ಮಹಡಿಗೆ ಆ.26ರಂದು ಸ್ಥಳಾಂತರಗೊಳ್ಳಲಿದೆ.
ಆ ದಿನ ಬೆಳಗ್ಗೆ 10.30ಕ್ಕೆ ಕಚೇರಿಯ ಉದ್ಘಾಟನಾ ಸಮಾರಂಭ ಜರಗಲಿದೆ.
ಶಾಸಕ ಲಾಲಾಜಿ ಆರ್. ಮೆಂಡನ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಾಸುದೇವ ಶೆಟ್ಟಿ ಉದ್ಘಾಟಿಸಲಿದ್ದಾರೆ.
ಬ್ಯಾಂಕಿನ ಅಧ್ಯಕ್ಷರು ಮತ್ತು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಬೆಂಗಳೂರು ಇದರ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕಾಪು ಸಹಕಾರಿ ವ್ಯವಸಾಯಿಕ ಸಂಘ ನಿ. ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ, ಕಾಪು ಕ್ಷೇತ್ರ ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳ ವಿವಿಧೋದ್ದೇಶ ಸಹಕಾರಿ ಸಂಘ ನಿ. ಅಧ್ಯಕ್ಷೆ ಶೋಭಾ ಪೂಜಾರ್ತಿ ಮತ್ತು ಕಾಪು ಬಿಲ್ಲವರ ಸಹಾಯಕ ಸಂಘದ ಅಧ್ಯಕ್ಷ ವಿಕ್ರಂ ಕಾಪು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಬ್ಯಾಂಕಿನ ನೂತನ ಶಾಖೆಯು ಸಂಪೂರ್ಣ ಗಣಕೀಕೃತ ಹಾಗೂ ಏಕಗವಾಕ್ಷಿ ಕೋರ್‌ಬ್ಯಾಂಕಿಂಗ್ ಸೇವೆ ಹಾಗೂ ಸೌಲಭ್ಯದೊಂದಿಗೆ ಕಾರ್ಯಾರಂಭಗೊಳ್ಳಲಿದೆ ಎಂದು ಬ್ಯಾಂಕ್ ನ ಪ್ರಕಟನೆ ತಿಳಿಸಿದೆ.