ಉಡುಪಿ: ಪ್ರಸಕ್ತ ಸಾಲಿನ ಡಿ.ದೇವರಾಜ ಅರಸುರವರ 107ನೇ ಜನ್ಮ ದಿನಾಚರಣೆ ಸಂದರ್ಭದಲ್ಲಿ ಜಿಲ್ಲೆಗಳಲ್ಲಿ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಿರುವ ವ್ಯಕ್ತಿ/ಸಂಘ ಸಂಸ್ಥೆಗಳಿಗೆ ಜಿಲ್ಲಾ ಮಟ್ಟದ ಡಿ ದೇವರಾಜ ಅರಸು ಪ್ರಶಸ್ತಿ ನೀಡಲು ಅರ್ಹರನ್ನು ಆಯ್ಕೆ ಮಾಡಲು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿದ್ದು, ಪ್ರಶಸ್ತಿಗೆ ಆಯ್ಕೆಯಾದ ವ್ಯಕ್ತಿ ಸಂಘ ಸಂಸ್ಥೆಗಳಿಗೆ ರೂ.50,000/- ನಗದು ಹಾಗೂ ಫಲಕದೊಂದಿಗೆ ಪ್ರಶಸ್ತಿ ನೀಡಲಾಗುವುದು.
ಅರ್ಜಿ ಸಲ್ಲಿಸಲು ಆಗಸ್ಟ್ 17 ಕೊನೆಯ ದಿನವಾಗಿದ್ದು, ಅರ್ಹ ಸಾಧಕರು ಮತ್ತು ಸಂಘ ಸಂಸ್ಥೆಗಳು ತಮ್ಮ ಅರ್ಜಿಗಳನ್ನು ನೇರವಾಗಿ ಅಥವಾ ಅವರ ಪರವಾಗಿ ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಚೇರಿಗೆ ಸಲ್ಲಿಸುವಂತೆ ತಿಳಿಸಿದೆ.