ಮುಂಬೈ: ಆಸ್ಟ್ರೇಲಿಯಾದ ಕ್ರಿಕೆಟ್ ದಿಗ್ಗಜ ಡೀನ್ ಜೋನ್ಸ್ (59) ಅವರು ಗುರುವಾರ ಮುಂಬೈನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.
ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2020 ಕ್ರಿಕೆಟ್ ವಿಶ್ಲೇಷಕರಾಗಿ ಸ್ಟಾರ್ ಸ್ಫೋರ್ಟ್ ಕಾಮೆಂಟೆಂಟರಿ ತಂಡದಲ್ಲಿದ್ದ ಮಾಜಿ ಕ್ರಿಕೆಟಿಗ ಡೀನ್ ಜೋನ್ಸ್ ಅವರು ಇಂದು ಖಾಸಗಿ ಹೋಟೆಲ್ ನಲ್ಲಿದ್ದಾಗಲೇ ಹೃದಯಾಘಾತವಾಗಿದೆ ಎನ್ನಲಾಗಿದೆ.
ಪ್ರೊ ಡೀನೋ ಹೆಸರಿನಲ್ಲಿ ಹಾಸ್ಯಭರಿತವಾಗಿ ಕ್ರಿಕೆಟ್ ವಿಶ್ಲೇಷಣೆ ಮಾಡುತ್ತಿದ್ದ ಜೋನ್ಸ್ ಅವರು ಭಾರತದಲ್ಲಿ ಜನಪ್ರಿಯರಾಗಿದ್ದರು.
ಆಸ್ಟ್ರೇಲಿಯಾ ಪರ 52 ಟೆಸ್ಟ್, 164 ಏಕದಿನ ಅಂತಾರಾಷ್ಟ್ರೀಯ ಪಂದ್ಯ ಹಾಗೂ 245 ಪ್ರಥಮದರ್ಜೆ ಪಂದ್ಯ, 285 ಲಿಸ್ಟ್ ಎ ಪಂದ್ಯಗಳನ್ನು ಆಡಿದ್ದಾರೆ.