ಹೊರಗುತ್ತಿಗೆ ಮೇಲೆ ನೇಮಕ: ಅರ್ಜಿ ಆಹ್ವಾನ

ಉಡುಪಿ ಜುಲೈ 22: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 2020-21ನೇ ಸಾಲಿಗೆ ಡಿ ಗ್ರೂಪ್ ನೌಕರರು, ಗಣಕಯಂತ್ರ ನಿರ್ವಾಹಕರು ಮತ್ತು ಮಾಹಿತಿ ಸಲಹೆಗಾರರು ಸಿಬ್ಬಂದಿ ಸೇವೆಯನ್ನು ಹೊರ ಸಂಪನ್ಮೂಲ ಏಜೆನ್ಸಿ ಮುಖಾಂತರ ಪಡೆಯಲು ಅರ್ಹ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ವೆಬ್‌ಸೈಟ್ www.eproc.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು  ಆಗಸ್ಟ್ 4 ಕೊನೆಯ ದಿನವಾಗಿದ್ದು, ಹೆಚ್ಚಿನ ವಿವರಗಳಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಧಿಕಾರಿ ಕಛೇರಿ, ರಜತಾದ್ರಿ, ಮಣಿಪಾಲ ಉಡುಪಿ […]

ಜಿಲ್ಲಾಧಿಕಾರಿಗಳಿಂದ ದಿಢೀರ್ ಕಾರ್ಯಾಚರಣೆ: ಮಾಸ್ಕ್ ಹಾಕದ, ಸಾಮಾಜಿಕ ಅಂತರ ಪಾಲನೆಯಾಗದವರಿಂದ ದಂಡ ವಸೂಲಿ

ಉಡುಪಿ ಜುಲೈ 21:  ಕೋವಿಡ್ -19 ನಿಯಂತ್ರಿಸುವಲ್ಲಿ ಮಹತ್ವದ ಪಾತ್ರ ವಹಿಸುವ ಮಾಸ್ಕ್ ಧರಿಸುವಿಕೆ  ಮತ್ತು ಸಾಮಾಜಿಕ ಅಂತರ ಪಾಲನೆ ಕುರಿತಂತೆ ಸಾರ್ವಜನಿಕರು ಈ ನಿಯಮಗಳ ಪಾಲನೆ ಮಾಡುತ್ತಿರುವ ಬಗ್ಗೆ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಜಿ.ಜಗದೀಶ್ ಮಂಗಳವಾರ, ಉಡುಪಿ ನಗರದಲ್ಲಿ ದಿಡೀರ್ ದಾಳಿ ನಡೆಸಿ, ನಿಮಯಗಳ ಪಾಲನೆ ಮಾಡದವರಿಗೆ ದಂಡ ವಿಧಿಸುವ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ರವಾನಿಸಿದರು. ಮಂಗಳವಾರ ಜಿಲ್ಲೆಯ ಎಲ್ಲಾ ನಗರಸ್ಥಳಿಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ ಗಳಲ್ಲಿ ಏಕಕಾಲಕ್ಕೆ ನಡೆಸಲಾದ ಈ ಕಾರ್ಯಾಚರಣೆಯಲ್ಲಿ, ನಿಯಮಗಳನ್ನು […]

ಐಟಿ ಉದ್ಯೋಗಿಗಳಿಗೆ ಡಿಸೆಂಬರ್ 31ರ ವರೆಗೆ ವರ್ಕ್ ಫರ್ಮ್ ಹೋಮ್: ದೂರಸಂಪರ್ಕ ಇಲಾಖೆಯಿಂದ ಮಹತ್ವದ ನಿರ್ಧಾರ

ಬೆಂಗಳೂರು: ದೂರಸಂಪರ್ಕ ಇಲಾಖೆ (ಡಿಒಟಿ) ಐಐಟಿ ಹಾಗೂ ಬಿಪಿಒ ನೌಕರರಿಗೆ ಡಿಸೆಂಬರ್ 31ರ ವರೆಗೆ ಮನೆಯಿಂದ ಕೆಲಸ ಮಾಡಲು ಅನುಕೂಲವಾಗುವಂತೆ ನಿಯಮಗಳನ್ನು ಜಾರಿಗೊಳಿಸಿದೆ. ಇದರಿಂದ ಬಹುತೇಕ ಐಟಿ ಉದ್ಯೋಗಿಗಳಿಗೆ ವರದಾನವಾಗಿದೆ. ಈ ಕ್ರಮವನ್ನು ಸ್ವಾಗತಿಸಿದ ಸಾಫ್ಟ್‌ವೇರ್ ಲಾಬಿ ನಾಸ್ಕಾಮ್ ಅಧ್ಯಕ್ಷ ಡೆಬ್ಜಾನಿ ಘೋಷ್ ಟೆಲಿಕಾಂ ಮತ್ತು ಐಟಿ ಸಚಿವ ರವಿಶಂಕರ್ ಪ್ರಸಾದ್ ಮತ್ತು ಡಿಒಟಿ ಕಾರ್ಯದರ್ಶಿಗೆ ಧನ್ಯವಾದ ಅರ್ಪಿಸಿದ್ದಾರೆ. ಭಾರತದ ಅತಿದೊಡ್ಡ ಐಟಿ ಕಂಪನಿ ಟಿಸಿಎಸ್ ವಾಸ್ತವವಾಗಿ 2025 ರ ವೇಳೆಗೆ ತಮ್ಮ ಉದ್ಯೋಗಿಗಳ ಪೈಕಿ ಕೇವಲ […]

ಉಡುಪಿಯಲ್ಲಿ ನಾಳೆಯಿಂದ ಬಸ್ ಸಂಚಾರ ಪುನರಾರಂಭ: ಅನಾವಶ್ಯಕವಾಗಿ ಓಡಾಡುವವರ ವಿರುದ್ಧ ಕ್ರಮ: ಡಿಸಿ ಜಿ. ಜಗದೀಶ್

ಉಡುಪಿ: ಸಿಎಂ ಯಡಿಯೂರಪ್ಪನವರು ರಾಜ್ಯದಲ್ಲಿ ಇನ್ಮುಂದೆ ಲಾಕ್ ಡೌನ್ ಮಾಡಲ್ಲವೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಬುಧವಾರ (ಜುಲೈ 22)ದಿಂದ ಮತ್ತೆ ಬಸ್ ಸಂಚಾರ ಪುನರಾರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಇಂದು ವಿಡಿಯೋ ಹೇಳಿಕೆ ಮೂಲಕ ಮಾಹಿತಿ ನೀಡಿದರು. ಬಸ್ ಅನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿ ಓಡಿಸಬೇಕು. ಪ್ರಯಾಣಿಕರು ಕೂಡ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜತೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸೂಚಿಸಿದ್ದಾರೆ. ಜಿಲ್ಲೆಯ ಗಡಿಗಳಲ್ಲಿ ಚೆಕ್ ಪೋಸ್ಟ್ ಕಾರ್ಯನಿರ್ವಹಿಸಲಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ […]

ಮಂಗಳೂರು: ಎಕ್ಸ್ ಪರ್ಟ್ ವಿದ್ಯಾರ್ಥಿಗಳ ಇನ್ನೊಂದು ವಿಶೇಷ ಸಾಧನೆ

ಮಂಗಳೂರು: ಶಿಕ್ಷಣ ಸಂಸ್ಥೆಯಲ್ಲಿ ವೈಜ್ಞಾನಿಕ ರೀತಿಯಲ್ಲಿ ಬೋಧನೆ, ಸೂಕ್ತ ಮಾರ್ಗದರ್ಶನ ಹಾಗೂ ವಿದ್ಯಾರ್ಥಿಗಳ ಕಠಿಣ ಪರಿಶ್ರಮ ಪಟ್ಟರೆ ಯಾವುದೂ ಅಸಾಧ್ಯವಲ್ಲ ಎಂಬುದನ್ನು ಈ ಭಾರಿಯೂ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮಂಗಳೂರಿನ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮತ್ತೊಮ್ಮೆ ಸಾಭೀತು ಪಡಿಸಿದ್ದಾರೆ. ಎಸ್‍ಎಸ್‍ಎಲ್‍ಸಿಯಲ್ಲಿ ಶೇ. 95 ಅಂಕ ಪಡೆದದವರು ಪಿಯುಸಿಯಲ್ಲಿ ಶೇ. 99, ಎಸ್‍ಎಸ್‍ಎಲ್‍ಸಿಯಲ್ಲಿ ಶೇ. 90 ಅಂಕ ಪಡೆದದವರು ಪಿಯುಸಿಯಲ್ಲಿ ಶೇ. 95 ಪಡೆಯುವುದು ಒಂದು ರೀತಿಯ ಸಾಧನೆಯಾದರೆ, ಎಸ್‍ಎಸ್‍ಎಲ್‍ಸಿಯಲ್ಲಿ ಕಡಿಮೆ ಅಂಕ ಪಡೆದರೂ […]