ನಾಡದೋಣಿ ಮೀನುಗಾರಿಕೆಯನ್ನು ಆಗಸ್ಟ್ 30ರ ವರೆಗೆ ವಿಸ್ತರಿಸಿ: ಮೀನುಗಾರರ ಆಗ್ರಹ

ಮಲ್ಪೆ: ಮಳೆಗಾಲ ಋತುವಿನ ನಾಡದೋಣಿ ಮೀನುಗಾರಿಕೆಯ ಅವಧಿಯನ್ನು ಒಂದು ತಿಂಗಳು ವಿಸ್ತರಿಸುವಂತೆ ಮಲ್ಪೆ ಸಾಂಪ್ರಾದಾಯಿಕ ನಾಡದೋಣಿ ಸಂಘ, ನಾಡಟ್ರಾಲ್‌ದೋಣಿ ಸಂಘ ಹಾಗೂ ಸಾಂಪ್ರಾದಾಯಿಕ ಕಂತು ಬಲೆ ದೋಣಿ ಸಂಘ ಆಗ್ರಹಿಸಿದೆ. ನಾಡದೋಣಿ ಮೀನುಗಾರರ ನಿಯೋಗವು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಕೆ. ರಘುಪತಿ ಭಟ್‌, ಜಿಲ್ಲಾಧಿಕಾರಿ ಜಿ. ಜಗದೀಶ್‌, ಮೀನುಗಾರಿಕಾ ಜಂಟಿ ನಿರ್ದೇಶಕ, ಮೀನುಗಾರಿಕಾ ಸಹಾಯಕ ನಿರ್ದೇಶಕರು, ಮಲ್ಪೆ ಮೀನುಗಾರರ ಸಂಘ ಮತ್ತು ಆಳಸಮುದ್ರ ತಾಂಡೇಲರ ಸಂಘಕ್ಕೆ ಮನವಿ ನೀಡಿ ಒತ್ತಾಯಿಸಿದೆ. ಈ ಹಿಂದೆ […]

ದ.ಕ. ಜಿಲ್ಲೆ: ಗುರುವಾರದಿಂದ ದಕ್ಷಿಣ ಕನ್ನಡ ಜಿಲ್ಲೆ ಅನ್ ಲಾಕ್

ಮಂಗಳೂರು: ಗುರುವಾರದಿಂದ ದಕ್ಷಿಣ ಕನ್ನಡ ಜಿಲ್ಲೆ ಅನ್ ಲಾಕ್ ಆಗಲಿದ್ದು, ಗುರುವಾರ ಬೆಳಗ್ಗೆ 5 ಗಂಟೆ ತನಕ ಮಾತ್ರ ಲಾಕ್ ಡೌನ್ ಇರಲಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ. ಈ ಹಿಂದೆ ಅವಕಾಶ ನೀಡಿದ್ದ ಎಲ್ಲಾ ಕ್ಷೇತ್ರಗಳೂ ಚಟುವಟಿಕೆ ನಡೆಸಬಹುದು ಎಂದು ಅವರು ತಿಳಿಸಿದ್ದಾರೆ.

ಉಡುಪಿಯಲ್ಲಿ ಇಂದು 84 ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಇಂದು 84 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2405ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರ ಅಲ್ಲ: ರಾಜ್ಯದಲ್ಲಿ ಇನ್ನಿಲ್ಲ ಲಾಕ್ ಡೌನ್: ಸಿ.ಎಂ. ಯಡಿಯೂರಪ್ಪ

ಬೆಂಗಳೂರು: ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಇನ್ನು ಲಾಕ್ ಡೌನ್ ಮಾಡುವ ಪ್ರಶ್ನೆ ಇಲ್ಲ. ಜಿಲ್ಲಾಧಿಕಾರಿಗಳು ಇನ್ನು ಮುಂದೆ ಲಾಕ್ ಡೌನ್ ಬಗ್ಗೆ ಮಾತಾಡಬಾರದು. ಕಂಟೋನ್ಮೆಂಟ್ ಝೋನ್‌ಗಳಲ್ಲಿ ಮಾತ್ರ ಅತ್ಯಂತ ಕಠಿಣ ಕ್ರಮಗಳು ಜಾರಿಯಲ್ಲಿರುತ್ತವೆ. ಸಾಮಾಜಿಕ ಅಂತರ ಕಾಪಾಡಿ, ಮಾಸ್ಕ್ ಧರಿಸಿ ಕೋವಿಡ್ ನಿಯಂತ್ರಿಸಲು ಸಹಾಯ ಮಾಡಿ ಎಂದು ಸ್ಪಷ್ಟಪಡಿಸಿದ್ದಾರೆ ಎಂದು  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರ ಅಲ್ಲ. ಜನತೆ ಎಂದಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು, ಆರ್ಥಿಕವಾಗಿ ರಾಜ್ಯವನ್ನು ಪುನಶ್ಚೇತನಗೊಳಿಸಲು ಸಹಕರಿಸಬೇಕು. ರಾಜ್ಯದಲ್ಲಿ […]

ಉಡುಪಿ ಎಸ್ಪಿ ಕಚೇರಿಯ ಮಹಿಳಾ ಸಿಬ್ಬಂದಿಗೆ ಕೊರೊನಾ ಪಾಸಿಟಿವ್

ಉಡುಪಿ: ಉಡುಪಿ ಎಸ್ಪಿ ಕಚೇರಿಯ ಮಹಿಳಾ ಸಿಬ್ಬಂದಿಯೊಬ್ಬರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಎಸ್ಪಿ ಕಚೇರಿಯ ವಿಭಾಗವೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿಯನ್ನು ಜುಲೈ 17ರಂದು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಅದರ ವರದಿ ಬಂದಿದ್ದು, ಸಿಬ್ಬಂದಿಗೆ ಕೊರೊನಾ ಸೋಂಕು ಇರುವುದು ಖಚಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಇಡೀ ಕಚೇರಿಯನ್ನು ಸ್ಯಾನಿಟೈಸ್ ಮಾಡಿ ಶುಚಿಗೊಳಿಸಲಾಗುವುದು ಎಂದು ಎಸ್ಪಿ ವಿಷ್ಣುವರ್ಧನ ತಿಳಿಸಿದ್ದಾರೆ.