ಉಡುಪಿ: ಕೇರಳದ ಯುವಕ ಕೊರೊನಾ ಸೋಂಕಿಗೆ ಬಲಿ

ಉಡುಪಿ: ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೂತ್ರಪಿಂಡ ಸಮಸ್ಯೆಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಕೇರಳದ ಕಣ್ಣೂರು ಜಿಲ್ಲೆಯ 35 ವರ್ಷದ ವ್ಯಕ್ತಿ ಸೋಮವಾರ ರಾತ್ರಿ ಮೃತಪಟ್ಟಿದ್ದು, ಆತನಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಈ ಮೃತ ವ್ಯಕ್ತಿ ಕಳೆದ 15 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದಾರೆ. ಆ ಬಳಿಕ ಕೊರೊನಾ ಪರೀಕ್ಷೆಯಲ್ಲಿ ಸೋಂಕು ಇರುವುದು ದೃಢಪಟ್ಟಿತ್ತು ಎಂದು ಆರೋಗ್ಯ ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ

ಕುಂದಾಪುರ ವೆಂಕಟರಮಣ ಪದವಿಪೂರ್ವ ಕಾಲೇಜು ಶೇ.100 ಫಲಿತಾಂಶ

ಕುಂದಾಪುರ ಕಳೆದ ಮೂರು ವರ್ಷಗಳಿಂದ ಸತತವಾಗಿ ಶೇ.100 ಫಲಿತಾಂಶ ದಾಖಲಿಸುವಲ್ಲಿ ಯಶಸ್ವಿಯಾಗಿರುವ ಕುಂದಾಪುರದ ಶ್ರೀವೆಂಕಟರಮಣ ಪದವಿಪೂರ್ವ ಕಾಲೇಜು ಈ ಬಾರಿಯೂ ಅದೇ ಸ್ಥಾನ ಕಾಯ್ದುಕೊಂಡಿದೆ. ವಾಣಿಜ್ಯ ವಿಭಾಗದಲ್ಲಿ ಕುಂದಾಪುರದ ಸ್ವಾತಿ ಪೈ(594) ಅಂಕಗಳಿಸಿ ರಾಜ್ಯಕ್ಕೆ 4ನೇ ಸ್ಥಾನ ಗಳಿಸುವುದರೊಂದಿಗೆ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಸೋಹನ್ ಕುಮಾರ್ ಶೆಟ್ಟಿ(589) ಅಂಕಗಳಿಸಿ ರಾಜ್ಯಕ್ಕೆ 7ನೇ ಸ್ಥಾನ ಮತ್ತು ಭುವನ್(588) ಅಂಕಗಳಿಸಿ 8ನೇ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 84 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 45 […]

ಮೂಡಬಿದಿರೆ ಆಳ್ವಾಸ್ ಪಿಯು ಕಾಲೇಜಿಗೆ ಶೇ.99.06 ಫಲಿತಾಂಶ: ಟಾಪ್ ಟೆನ್ ನಲ್ಲಿ ಆಳ್ವಾಸ್ ನ 21 ವಿದ್ಯಾರ್ಥಿಗಳು

ಮೂಡುಬಿದಿರೆ: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನಿಂದ 2779 ಮಂದಿ ಪರೀಕ್ಷೆಗೆ ಹಾಜರಾಗಿದ್ದು, 2753 ಮಂದಿ ಉತ್ತೀರ್ಣರಾಗಿ ಶೇ.99.06 ಫಲಿತಾಂಶ ಲಭಿಸಿದೆ. ರಾಜ್ಯದ ಟಾಪ್ 10 ಸ್ಥಾನದಲ್ಲಿ ಆಳ್ವಾಸ್ 21 ಮಂದಿ ಸ್ಥಾನ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಅನರ್ಘ್ಯ(592), ರಘುವೀರ್ ಮಠದ್(592), ಲಿಶನ್(592) ಅಂಕಗಳಿಸಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಅನಿಲ್ ಬನ್ನಿ ಶೆಟ್ಟಿ(589), ಬಗೇಶ್ ಕೊಡಗನೂರು(588) ವಿನಾಯಕ ಗ್ಯಾನಪ್ಪ ಗಡ್ಡಿ(588), ಸುವೀಕ್ಷ್ ಹೆಗ್ಡೆ(588), ಮಹೇಶ್ವರಿ(588), ಸ್ವಾತಿ ಬಿ. ಮಳಿಮಠ್(587), ಪಿ.ಎಸ್. […]

ಪೆಟ್ರೊಲ್ ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಕುಂದಾಪುರ ಬ್ಲಾಕ್ ಕಾಂಗ್ರೆಸ್  ಪ್ರತಿಭಟನೆ 

ಕುಂದಾಪುರ: ಅಂತರಾಷ್ಟ್ರಿಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾಗಿದೆ. ಆದರೂ ದೇಶದ ಜನ ಕೋವಿಡ್ -19  ನಿಂದ ಸಂಕಷ್ಟದಲ್ಲಿರುವ ಇಂತಹ ಸಂದರ್ಭದಲ್ಲಿ ಡಿಸೇಲ್, ಪೆಟ್ರೊಲ್ ಬೆಲೆ ನಿರಂತರವಾಗಿ ಎರಿಸಿರುವುದು ಕೇಂದ್ರದ ಬಿಜೆಪಿ ಸರಕಾರದ ರಾಕ್ಷಸಿ  ಪ್ರವೃತ್ತಿಯ ಸಂಕೇತ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ ಹೇಳಿದರು. ಬ್ಲಾಕ್ ಕಾಂಗ್ರೆಸ್ ವತಿಯಿಂದ  ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿ ಎದುರು ನಡೆದ ಪ್ರತಿಭಟನಾ ಸಭೆಯ ನೇತ್ರತ್ವ ವಹಿಸಿ ಮಾತನಾಡಿ ಹಿಂದೆ ಮನಮೋಹನ ಸಿಂಗ್ ಪ್ರಧಾನ ಮಂತ್ರಿಯಾಗಿದ್ದಾಗ […]

ಕೊರೊನಾಗೆ ದೇಶದಲ್ಲಿ ಒಂದೇ ದಿನ 24,850 ಪ್ರಕರಣ ದಾಖಲು

ಬೆಂಗಳೂರು: ದೇಶಾದ್ಯಂತ ಕೊರೊನಾ ಆರ್ಭಟ ಹೆಚ್ಚುತ್ತಿದ್ದು, ಕಳೆದ 24 ಗಂಟೆಗಳಲ್ಲಿ  24,850 ಸೋಂಕು ಪ್ರಕರಣಗಳು ದಾಖಲಾಗಿದೆ. ಕೊರೊನಾ ಸೋಂಕಿನಿಂದ 613 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಒಂದೇ ದಿನ ಅತಿ ಹೆಚ್ಚು ಪ್ರಕರಣಗಳು ವರದಿಯಾಗುವ ಮೂಲಕ ದೇಶದಲ್ಲಿ ಒಟ್ಟುಸೋಂಕಿತರ ಸಂಖ್ಯೆ 6,73,165ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ 4,09,083 ಮಂದಿ ಗುಣಮುಖರಾಗಿದ್ದು, 2,44,814 ಮಂದಿ ಜನರು ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 19,268 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ.