ಉಡುಪಿ:ವಿವಿಧ ಹುದ್ದೆ : ಅರ್ಜಿ ಆಹ್ವಾನ
ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 21 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕು.ಕ.ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ:’ಸಖಿ’ ಒನ್ ಸ್ಟಾಪ್ ಸೆಂಟರ್ ವಾಹನಕ್ಕೆ ಇಂದು ಚಾಲನೆ
ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ ಯೋಜನೆಯ ಸಂಬಾಲ್ ಉಪಯೋಜೆಯಡಿ ಕಾರ್ಯನಿರ್ವಹಿಸುತ್ತಿರುವ ‘ಸಖಿ’ ಒನ್ ಸ್ಟಾಪ್ ಸೆಂಟರ್ ಯೋಜನೆಯು ಸಂಕಷ್ಟದಲ್ಲಿರುವ ಹಾಗೂ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ಚಿಕಿತ್ಸೆ, ಕಾನೂನು ಮತ್ತು ಪೊಲೀಸ್ ನೆರವು, ತಾತ್ಕಾಲಿಕ ಆಶ್ರಯ ಹಾಗೂ ಆಪ್ತ ಸಮಾಲೋಚನೆ, ಅಗತ್ಯ ತುರ್ತು ಸೇವೆಗಳನ್ನು ನಗರದ ನಿಟ್ಟೂರಿನ ರಾಜ್ಯ ಮಹಿಳಾ ನಿಲಯದ ಆವರಣದಲ್ಲಿ 24*7ರಂತೆ ಒದಗಿಸಲಾಗುತ್ತಿದೆ. ತುರ್ತು ಸೇವೆಗಾಗಿ ಸರಕಾರವು ವಾಹನ ವ್ಯವಸ್ಥೆಯನ್ನು ಕಲ್ಪಿಸಿದ್ದು ಸದರಿ ವಾಹನಕ್ಕೆ ಇಂದು ನಗರದ […]
ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್‌ಗೆ ದೇಶದ ಸರ್ವೋತ್ತಮ ಜಿ.ಪಂ ಪ್ರಶಸ್ತಿ ಪ್ರಧಾನ
ಉಡುಪಿ: ರಾಷ್ಟ್ರೀಯ ಪಂಚಾಯತ್ ಪುರಸ್ಕಾರ 2024 ರ ಪ್ರಶಸ್ತಿಗಳ ಪ್ರಧಾನ ಕಾರ್ಯಕ್ರಮವು ನವದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ನಡೆಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮುರವರಿಂದ “ನಾನಾಜಿ ದೇಶ್ಮುಖ್ ಸರ್ವೋತ್ತಮ ಪಂಚಾಯತ್ ಸತತ್ ವಿಕಾಸ್ ಪುರಸ್ಕಾರ್” ಪ್ರಶಸ್ತಿಯನ್ನು ಹಾಗೂ ಎರಡು ಕೋಟಿ ರೂಪಾಯಿ ಮೊತ್ತದ ಚೆಕ್ ಅನ್ನು ಉಡುಪಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್ ಅವರು ಪಡೆದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಯೋಜನ ನಿರ್ದೇಶಕ ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು. ಸಂಪನ್ಮೂಲ ಕ್ರೋಢೀಕರಣಕ್ಕೆ ಒತ್ತು ನೀಡಿ […]
ರೋಟರಿ ಕ್ಲಬ್ ಮಣಿಪಾಲವು ಇಂದ್ರಾಳಿ ರುದ್ರಭೂಮಿಗೆ 15 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿಕೊಟ್ಟ ಸುಸಜ್ಜಿತ ಅಂತ್ಯಸಂಸ್ಕಾರ ಧಾಮದ ಲೋಕಾರ್ಪಣೆ.
ಉಡುಪಿ: ಮಣಿಪಾಲ್ ಟೌನ್ ರೋಟರಿ ಕ್ಲಬ್ ನ ದಶಮಾನೋತ್ಸವ ಸಂಧರ್ಭದಲ್ಲಿ, ಸಂಸ್ಥೆಯ ಮಾಜೀ ಅಧ್ಯಕ್ಷ ರೋ. ಬೆಲ್ಪತ್ರೆ ಗಣೇಶ ನಾಯಕ್ ಮತ್ತು ಶ್ರೀಮತಿ ಶೈಲಾ ಜಿ. ನಾಯಕ್ ಅವರ ವೈವಾಹಿಕ ಜೀವನದ 50 ವರ್ಷಾಚರಣೆಯ ಸಂದರ್ಭದಲ್ಲಿ ಇಂದ್ರಾಳಿ ರುದ್ರಭೂಮಿಗೆ ರೂ. 15.00ಲಕ್ಷ ವೆಚ್ಚದಲ್ಲಿ ಅಂತ್ಯ ಸಂಸ್ಕಾರ ಧಾಮ ಕಟ್ಟಿಸಿ ಕೊಟ್ಟಿರುವುದು ಅತ್ಯಂತ ಪ್ರಶಂಸನೀಯ ಸಮಾಜಸೇವೆಯಂದು ಮಾಹೆ ಸಹ ಕುಲಾಧಿಪತಿ ಡಾ. ಎಚ್.ಎಸ್.ಬಲ್ಲಾಳ್‌ಅವರು ನುಡಿದರು. ಸರಕಾರವೇ ಎಲ್ಲವನ್ನು ನೀಡುತ್ತದೆ ಎಂದು ಕಾಯುವುದಕ್ಕಿಂತ; ಖಾಸಗಿ ಸಂಸ್ಥೆಗಳು ಮತ್ತು ಸಾರ್ವಜನಿಕರು ಸರಕಾರದೊಂದಿಗೆ […]
ಸುಮೊಟೋ ಕೇಸ್: ಹಿಂದೂ ಮುಖಂಡರಿಗೆ ಜಾಮೀನು ಮಂಜೂರು
ಉಡುಪಿ; ಧರ್ಮದಂಗಲ್ ನ ಕಾರಣಕ್ಕೆ ಉಡುಪಿಯಲ್ಲಿ ಸದ್ದು ಮಾಡಿದ್ದ ಪ್ರಕರಣ ಸಂಬಂಧ ಹಿಂದೂ ಮುಖಂಡರಿಗೆ ಜಾಮೀನು ಮಂಜೂರಾಗಿದೆ. ಕಾರ್ಕಳದ ಶ್ರೀ ವೆಂಕಟರಮಣ ದೇವಸ್ಥಾನದ ಲಕ್ಷ ದೀಪೋತ್ಸವ ಸಂದರ್ಭ ಹಿಂದೂ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಮೊದಲು ಪ್ರಾಶಸ್ಯ ನೀಡಬೇಕು ಎಂದು ಹೇಳಿದ ಕಾರಣಕ್ಕೆ ಪೊಲೀಸರಿಂದ ಸೋಮೋಟೋ ಕೇಸ್ ದಾಖಲಾಗಿತ್ತು. ಹಿಂದೂ ಜಾಗರಣ ವೇದಿಕೆಯ ರಮೇಶ್ ತೆಳ್ಳಾರು ಹಾಗೂ ಹಿಂದೂ ಮುಖಂಡ ಶ್ರೀಕಾಂತ ಶೆಟ್ಟಿ ಮೇಲೆ ಕೇಸು ದಾಖಲಾಗಿತ್ತು. ಸೋಮೋಟೋ ಕೇಸ್ ಖಂಡಿಸಿ ಪ್ರತಿಭಟನೆಗೆ ಕರೆ ನೀಡಿದ್ದರು ಎಂಬ ಕಾರಣಕ್ಕೆ […]