ಸರ್ಕಾರಿ ನೌಕರರು ಮತ್ತು ಐಷಾರಾಮಿ ಕಾರು ಮಾಲೀಕರ ಬಳಿಯೂ ಬಿಪಿಎಲ್ ಕಾರ್ಡ್‌? ಇಲಾಖಾ ಕಾರ್ಯಾಚರಣೆಯಲ್ಲಿ ಗೋಲ್ ಮಾಲ್ ಬಯಲು!!

ಬೆಂಗಳೂರು: ಕಳೆದ ಎರಡು ವರ್ಷಗಳಲ್ಲಿ ಅಕ್ರಮ ಪಡಿತರ ಚೀಟಿದಾರರ ವಿರುದ್ಧ ರಾಜ್ಯಾದ್ಯಂತ ನಡೆಸಿದ ಕಾರ್ಯಾಚರಣೆಯಲ್ಲಿ ಸರ್ಕಾರಿ ನೌಕರರು ಮತ್ತು ಐಷಾರಾಮಿ ಕಾರು ಮಾಲೀಕರು ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿರುವುದು ಕಂಡುಬಂದಿದೆ. ಜನವರಿ 2021 ರಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಪ್ರಾರಂಭಿಸಿದ ಕಾರ್ಯಾಚರಣೆಯಲ್ಲಿ 13 ಕೋಟಿ ರೂ ದಂಡವನ್ನು ಸಂಗ್ರಹಿಸಿದೆ, ಇದರಲ್ಲಿ 11 ಕೋಟಿ ರೂ.ಗಳನ್ನು 17,521 ಸರ್ಕಾರಿ ನೌಕರರಿಂದಲೇ ಸಂಗ್ರಹಿಸಲಾಗಿದೆ. ತಾವು ಫಲಾನುಭವಿಗಳಾಗಲು ಅನರ್ಹವಾಗಿದ್ದರೂ ಅಂತ್ಯೋದಯ ಅನ್ನ ಯೋಜನೆ (ಎವೈವೈ) ಮತ್ತು ಆದ್ಯತಾ […]

ಜೂ.1 ರಿಂದ BPL ಕಾರ್ಡ್ ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು: ಆದ್ಯತಾ ಕುಟುಂಬಗಳ (ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್) ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಲು ಜೂನ್ 1 ರಿಂದ ಅವಕಾಶ ಕಲ್ಪಿಸಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ತೀರ್ಮಾನಿಸಿದೆ. ಚುನಾವಣಾ ನೀತಿ ಸಂಹಿತೆ ಕಾರಣದಿಂದ ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಕೆ ಮತ್ತು ಪಡಿತರ ಚೀಟಿಗಳ ವಿತರಣೆ ಸ್ಥಗಿತಗೊಳಿಸಲಾಗಿತ್ತು. ವೆಬ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆ ವಿಭಾಗವನ್ನು ಲಾಕ್ ಮಾಡಲಾಗಿತ್ತು. ಕಾಂಗ್ರೆಸ್ ಪಕ್ಷವು ಚುನಾವಣೆಯಲ್ಲಿ ನೀಡಿರುವ ಐದು ಗ್ಯಾರಂಟಿ ಭರವಸೆಗಳ ಅನುಷ್ಠಾನದಲ್ಲಿ ಫಲಾನುಭವಿಗಳನ್ನು ಗುರುತಿಸಲು […]

ಕಲಾವಿದ ಪ್ರೊ. ಎಂ. ಎಲ್. ಸಾಮಗ ಅವರಿಗೆ ಯಕ್ಷದ್ರುವ ಪಟ್ಲ ಪ್ರಶಸ್ತಿ

ಮಂಗಳೂರು: ಮೇ 28 ರಂದು ಮಂಗಳೂರಿನಲ್ಲಿ ಜರಗಿದ ‘ಯಕ್ಷದ್ರುವ ಪಟ್ಲ ಸಂಭ್ರಮ – 2023’ರಲ್ಲಿ ಸಂಸ್ಥೆಯ ಕಾರ್ಯಕಾರಿ ಸಮಿತಿಯ ಸದಸ್ಯ ಹಾಗೂ ಕಲಾವಿದ ಪ್ರೊ. ಎಂ. ಎಲ್. ಸಾಮಗ ಅವರಿಗೆ ‘ಯಕ್ಷದ್ರುವ ಪಟ್ಲ ಪ್ರಶಸ್ತಿ – 2023’ ನೀಡಿ ಗೌರವಿಸಲಾಯಿತು. ‘ಯಕ್ಷಗಾನ ಕಲಾರಂಗ’ ಸಂಸ್ಥೆಗೆ ‘ಯಕ್ಷಗಾನ ಕಲಾ ಗೌರವ – 2023’ ನೀಡಿ ಗೌರವಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಪ್ರಶಸ್ತಿಯನ್ನು ಸ್ವೀಕರಿಸಿದರು.

ಐದನೇ ಬಾರಿಗೆ ಐಪಿಎಲ್ ಕಪ್ ಎತ್ತಿದ ಚೆನ್ನೈ ಸೂಪರ್ ಕಿಂಗ್ಸ್: ರವೀಂದ್ರಾ ಜಡೇಜಾ ರೋಚಕ ಬ್ಯಾಟಿಂಗ್ ನಿಂದ ಸಿ.ಎಸ್.ಕೆ ಗೆ ಒಲಿದ ವಿಜಯಮಾಲೆ!

ಅಹಮದಾಬಾದ್: ಗುಜರಾತ್ ಟೈಟಾನ್ಸ್ ವಿರುದ್ಧ ರೋಚಕ ಫೈನಲ್‌ನಲ್ಲಿ ಚೆನ್ನೈ ಸುಪರ್ ಕಿಂಗ್ಸ್ ನ ರವೀಂದ್ರ ಜಡೇಜಾ ಅವರ ಐತಿಹಾಸಿಕ ಪ್ರದರ್ಶನದ ಬಳಿಕ ತಂಡವು ಐದನೇ ಬಾರಿಗೆ ಕಪ್ ಎತ್ತಿ ಬೀಗಿದೆ. ಮುಂಬೈ ಇಂಡಿಯನ್ಸ್ ನಂತರ 5 ಐಪಿಎಲ್ ಪ್ರಶಸ್ತಿಗಳನ್ನು ಗೆದ್ದ ಎರಡನೇ ತಂಡವಾಗಿದೆ. ಜಡೇಜಾ ಕೊನೆಯ ಎರಡು ಎಸೆತಗಳಲ್ಲಿ ಒಂದು ಸಿಕ್ಸರ್ ಮತ್ತು ಬೌಂಡರಿಗಳನ್ನು ಹೊಡೆದು ಈ ಐತಿಹಾಸಿಕ ಗೆಲುವು ದಾಖಲಿಸಿದರು. ಅಹಮದಾಬಾದಿನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆದ 2023 ರ ಇಂಡಿಯನ್ ಪ್ರೀಮಿಯರ್ ಲೀಗ್‌ನ […]

ಬಿಜೆಪಿ ನಾಯಕರು ನಿದ್ದೆಯ ಮಂಪರಿನಲ್ಲೂ ಕಾಂಗ್ರೆಸ್ ಪಕ್ಷದ ಗ್ಯಾರಂಟಿಯ ಬಗ್ಗೆ ಕನವರಿಸುತ್ತಿದ್ದಾರೆ: ರಮೇಶ್ ಕಾಂಚನ್

ಉಡುಪಿ: ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದಂತಹ ಮತದಾರರೆ ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ನೀಡಿದ ಗ್ಯಾರಂಟಿಯ ಬಗ್ಗೆ ಮಾತನಾಡುತ್ತಿಲ್ಲ, ಏಕೆಂದರೆ ಅವರಿಗೆ ಕಾಂಗ್ರೆಸ್ ಪಕ್ಷವು ನೀಡಿದ ಭರವಸೆ ಹಾಗೂ ಗ್ಯಾರಂಟಿಯನ್ನು ಖಂಡಿತವಾಗಿಯೂ ನೀಡುತ್ತಾರೆ ಎಂಬ ನಂಬಿಕೆ ಇದೆ. ಆದರೆ ಈ ಲಂಚಕೋರ ಹಾಗೂ ಸುಳ್ಳುಗಳ ಭರವಸೆಯನ್ನು ನೀಡಿದಂತಹ ಬಿಜೆಪಿಯವರಿಗೆ ಕಾಂಗ್ರೆಸ್ ಪಕ್ಷ ನೀಡಿದ ಗ್ಯಾರಂಟಿಯ ಬಗ್ಗೆ ಯೋಚನೆ ಯಾಗಿದೆ. ನಾವು ಈ ಗ್ಯಾರಂಟಿಯನ್ನು ಅನುಷ್ಠಾನಕ್ಕೆ ತಂದಾಗ ರಾಜ್ಯದಲ್ಲಿ ಬಿಜೆಪಿ ಕಣ್ಮರೆಯಾಗೋದು ಸಹಜ ಅದಕ್ಕಾಗಿ ಈ ಬಿಜೆಪಿ ನಾಯಕರುಗಳು ನಿದ್ದೆಯಲ್ಲಿ ಕೂಡ […]