ಪರಿಶಿಷ್ಟ ಜಾತಿಯ ಕಾನೂನು ಪದವೀಧರರ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿಯ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ಸೌಲಭ್ಯ ಪಡೆಯಲು ಇಲಾಖಾ ವೆಬ್‌ಸೈಟ್ www.sw.kar.nic.inನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಅಥವಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು […]

ಮಳೆಗಾಲದ ತುರ್ತು ಸಂದರ್ಭಕ್ಕಾಗಿ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆಗಳು ಇಂತಿವೆ

ಉಡುಪಿ: ಜಿಲ್ಲೆಯಲ್ಲಿ ಮಳೆಗಾಲದ ಸಂದರ್ಭದಲ್ಲಿ ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿ, ತಾಲೂಕು ಮಟ್ಟ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಂಟ್ರೋಲ್ ರೂಂ ಅನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಉಡುಪಿ ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 0820-2520417, ಬ್ರಹ್ಮಾವರ ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 0820-2560494, ಕಾಪು ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 0820-2551444, ಕುಂದಾಪುರ ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 08254-230357, ಬೈಂದೂರು ತಹಶೀಲ್ದಾರರ ಕಚೇರಿ ಕಂಟ್ರೋಲ್ […]

ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಸಾಧ್ಯತೆ: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ

ಉಡುಪಿ: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಉಂಟಾಗುವ ಸಂಭವವಿದ್ದು, ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 4 ದಿನಗಳಲ್ಲಿ ಸಮುದ್ರದ ಅಲೆಗಳಲ್ಲಿ ಏರಿಳಿತ ಉಂಟಾಗುವ ಹಾಗೂ ಮಳೆಯಾಗುವ ಸಾಧ್ಯತೆ ಇರುತ್ತದೆ. ಈ ಸಂದರ್ಭದಲ್ಲಿ ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳುವುದನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ಸಮುದ್ರ ಹಾಗೂ ನದಿ ತೀರ ಪ್ರದೇಶಗಳಲ್ಲಿ ಇಳಿಯಬಾರದು. ಮಕ್ಕಳು ಮತ್ತು ಸಾರ್ವಜನಿಕರು ಸಮುದ್ರ ತೀರ, ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ ಹಾಗೂ ಮರಗಳ ಕೆಳಗೆ ನಿಲ್ಲಬಾರದು. […]

ಸಿಎ ಭವನಕ್ಕೆ ಭೇಟಿ ನೀಡಿದ ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆ ಉಪಾಧ್ಯಕ್ಷ ಸಿ.ಎ.ರಂಜಿತ್ ಕುಮಾರ್

ಉಡುಪಿ: ಕುಂಜಿಬೆಟ್ಟುವಿನ ಸಿಎ ಭವನಕ್ಕೆ ಮಂಗಳವಾರದಂದು ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಎ.ರಂಜಿತ್ ಕುಮಾರ್ ಅಗರ್ವಾಲ್ ಭೇಟಿ ನೀಡಿ ಸಂಸ್ಥೆಯ ಅಭಿವೃದ್ಧಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಭಾರತ ದೇಶದ ಅಭಿವೃದ್ಧಿಯಲ್ಲಿ ಲೆಕ್ಕಪರಿಶೋಧಕರ ಪಾತ್ರ ಮಹತ್ವದಾಗಿದೆ. ದೇಶದಲ್ಲಿ ಹೊಸದಾಗಿ ಸಿಎ ತೇರ್ಗಡೆ ಮಾಡಿದ ಯುವ ಲೆಕ್ಕಪರಿಶೋಧಕರ ಅವ್ಯಶಕತೆ ಇದ್ದು ಈ ನಿಟ್ಟಿನಲ್ಲಿ ಕಾರ್ಯ ರೂಪಿಸುವಂತೆ ಅವರು ಕರೆ ನೀಡಿದರು. ಬಳಿಕ ವಿದ್ಯಾರ್ಥಿಗಳ ಜೊತೆ ಸಂವಾದ ಕಾರ್ಯ ನಡೆಸಿದರು. ಸಮಾರಂಭದಲ್ಲಿ ಸಂಸ್ಥೆ ವತಿಯಿಂದ ಸಿಎ ರಂಜಿತ್ ಕುಮಾರ್ ಅಗರ್ವಾಲ್ […]

ಮಧ್ಯಪ್ರದೇಶದಲ್ಲಿ 300 ಅಡಿ ಆಳದ ಕೊಳವೆ ಬಾವಿಗೆ ಬಿದ್ದ 2.5 ವರ್ಷದ ಮಗು: ರಕ್ಷಣಾ ಕಾರ್ಯ ಜಾರಿ

ಭೋಪಾಲ್: ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯ ಹೊಲವೊಂದರಲ್ಲಿ ಆಟವಾಡುತ್ತಿದ್ದ 2.5 ವರ್ಷದ ಮಗು 300 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದು, ಮಂಗಳವಾರ ಮಧ್ಯಾಹ್ನದಿಂದ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೋರ್‌ವೆಲ್‌ನಲ್ಲಿ ಗಂಟೆಗಟ್ಟಲೆ ಸಿಲುಕಿರುವ ಮಗುವನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಮುಂಗೋಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಗು ಹೊಲದಲ್ಲಿ ಆಟವಾಡುತ್ತಿದ್ದ ವೇಳೆ ಕೊಳವೆ ಬಾವಿಯೊಳಗೆ ಬಿದ್ದಿದೆ. 50 ಅಡಿ ಕೆಳಗೆ ಬಿದ್ದಿರುವ ಮಗುವನ್ನು ರಕ್ಷಿಸಲು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ ಎಂದು ಸೆಹೋರ್ ಜಿಲ್ಲಾಧಿಕಾರಿ […]