ಮಲ್ಪೆ: ಆಕಸ್ಮಿಕವಾಗಿ ಬೋಟ್ ನಿಂದ ಸಮುದ್ರಕ್ಕೆ ಬಿದ್ದ ಮೀನುಗಾರ; 14 ಗಂಟೆಗಳ ಬಳಿಕ ರಕ್ಷಣೆ

ಮಲ್ಪೆ: ಆಕಸ್ಮಿಕವಾಗಿ ಪರ್ಸೀನ್ ಬೋಟ್ ನಿಂದ ಸಮುದ್ರಕ್ಕೆ ಬಿದ್ದ ಮೀನುಗಾರರನ್ನು 14 ಗಂಟೆಗಳ ಬಳಿಕ ಜೀವಂತವಾಗಿ ರಕ್ಷಿಸಿದ ಘಟನೆ ಮಲ್ಪೆಯಲ್ಲಿ ನಡೆದಿದೆ. ರಕ್ಷಿಸಲ್ಪಟ್ಟ ಮೀನುಗಾರನನ್ನು ಆಂಧ್ರಪ್ರದೇಶದ ಪುಕಾಲು ಕಾಮೆಯಾ ಎಂದು ಗುರುತಿಸಲಾಗಿದೆ. 35 ಸದಸ್ಯರ ಮೀನುಗಾರರ ತಂಡವು ತಮ್ಮ ಮೀನುಗಾರಿಕೆ ಚಟುವಟಿಕೆ ಮುಗಿಸಿ ಪರ್ಸೀನ್ ಬೋಟ್ ನಲ್ಲಿ ಹಿಂದಿರುಗುತ್ತಿದ್ದಾಗ ಹಿಂದೆ ಕುಳಿತಿದ್ದ ಕಾಮೆಯಾ ಆಕಸ್ಮಿಕವಾಗಿ ದೋಣಿಯಿಂದ ಸಮುದ್ರಕ್ಕೆ ಬಿದ್ದಿದ್ದಾರೆ. ಸ್ವಲ್ಪ ದೂರ ಕ್ರಮಿಸಿದ ಬಳಿಕ ಅದೇ ದೋಣಿಯಲ್ಲಿದ್ದ ಇತರ ಮೀನುಗಾರರಿಗೆ ಕಾಮೆಯಾ ಕಾಣೆಯಾಗಿರುವುದು ತಿಳಿದು ಬಂದು ಕೂಡಲೇ […]

ಉಡುಪಿ: ವೃದ್ಧ ನಾಪತ್ತೆ

ಉಡುಪಿ: ನಗರದ ಎಂ.ಜಿ.ಎಂ ಕಾಲೇಜು ಕ್ಯಾಂಟೀನ್‌ನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಕೆ.ವೀರಭದ್ರ ಶೆಟ್ಟಿಗಾರ್ (61) ಎಂಬ ವ್ಯಕ್ತಿಯು ಏಪ್ರಿಲ್ 8 ರಂದು ಪುಣ್ಯಕ್ಷೇತ್ರಗಳಿಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬೈಂದೂರು: ಕಾಂಗ್ರೆಸ್ ಕೈ ಹಿಡಿದ ಕಮಲ ಕಾರ್ಯಕರ್ತರು

ಬೈಂದೂರು: ಕಾಂಗ್ರೆಸ್ ಪಕ್ಷದ ತತ್ವ, ಸಿದ್ದಾಂತಗಳನ್ನು ಒಪ್ಪಿ ಬೈಂದೂರು ವಿಧಾನಸಭಾ ಕ್ಷೇತ್ರದ ಅನೇಕ ಬಿಜೆಪಿ ಮುಖಂಡರು ಕಾಂಗ್ರೆಸ್‌ ಕುಟುಂಬಕ್ಕೆ ಸೇರ್ಪಡೆಗೊಳ್ಳುತ್ತಿದ್ದು, ಕಳೆದೊಂದು ತಿಂಗಳಿನಿಂದ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಮುಖಂಡರು ಪಕ್ಷದ ಬಾವುಟಗಳನ್ನು ಹಿಡಿದಿದ್ದಾರೆ. ಕಟ್‌ ಬೇಲ್ತೂರಿನ ಬಿಜೂರು 3ನೇ ಹಾಗೂ 4ನೇ ವಾರ್ಡ್ ನ ಸಕ್ರಿಯ ಬಿಜೆಪಿಯ ಕಾರ್ಯಕರ್ತರು ಬಿಜೂರು ವಜ್ರದುಂಬಿ ಸಂಸ್ಥೆಯ ಅಧ್ಯಕ್ಷ ರಾಘವೇಂದ್ರ ದೇವಾಡಿಗ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು. ಸರಳ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಕಾಂಗ್ರೆಸ್‌ ಪಕ್ಷದ ಬಾವುಟ ನೀಡಿ, ಪಕ್ಷದ […]

ದೊಡ್ಡಣ್ಣಗುಡ್ಡೆ: ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾಆದಿಶಕ್ತಿಕ್ಷೇತ್ರ ಕುಬೇರ ಲಕ್ಷ್ಮಿ ಪ್ರತಿಷ್ಠ ವರ್ಧಂತಿ ಸಂಪನ್ನ

ದೊಡ್ಡಣ್ಣಗುಡ್ಡೆ: ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾಆದಿಶಕ್ತಿ ಕಾರಣಿಕ ಕ್ಷೇತ್ರದ ವಿಶೇಷ ಸಾನಿಧ್ಯವಾದ ಕುಬೇರ ಚಿತ್ರಲೇಖ ಸಹಿತ ಮಹಾಲಕ್ಷ್ಮಿಯ ಸನ್ನಿಧಾನದ ಪ್ರಥಮ ಪ್ರತಿಷ್ಠ ವಾರ್ಷಿಕ ಮಹೋತ್ಸವ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವೇದಮೂರ್ತಿ ಕೃಷ್ಣಮೂರ್ತಿ ತಂತ್ರಿಗಳ ನೇತೃತ್ವದಲ್ಲಿ ಸಂಪನ್ನಗೊಂಡಿತು. ಆ ಪ್ರಯುಕ್ತ ಕ್ಷೇತ್ರದಲ್ಲಿ ಕಪಿಲ ಮಹರ್ಷಿಗಳ ಸನ್ನಿದಾನದಲ್ಲಿ ಸ್ನಪನ ಕಳಶಾಭಿಷೇಕ, ಕುಬೇರ ಲಕ್ಷ್ಮಿ ಸನ್ನಿಧಿಯಲ್ಲಿ ಲಕ್ಷ್ಮಿ ಸಹಸ್ರನಾಮ, ಪಾಯಸ ಹೋಮ, ಕುಬೇರ ಮಂತ್ರ ಹೋಮ, ಪಂಚವಂಶತಿ ಕಲಶ ಅಭಿಷೇಕ ನೆರವೇರಿತು. ಯಾಗದ ಅಂಗವಾಗಿ ಬ್ರಾಹ್ಮಣ ಸುವಾಸಿನಿ […]

ಭಾರತೀಯ ಜನತಾ ಪಕ್ಷದ ಅಂತಿಮ ಪಟ್ಟಿ ಬಿಡುಗಡೆ: ಜಗದೀಶ್ ಶೆಟ್ಟರ್ ವಿರುದ್ದ ಮಹೇಶ್ ತೆಂಗಿನಕಾಯಿ

ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ 10 ಅಭ್ಯರ್ಥಿಗಳ ಮೂರನೇ ಮತ್ತು ಕೊನೆಯ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. ಮೇ 10 ರಂದು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಎರಡನೇ ಪಟ್ಟಿಯಲ್ಲಿ 23 ಅಭ್ಯರ್ಥಿಗಳು ಮತ್ತು ಮೊದಲ ಪಟ್ಟಿಯಲ್ಲಿ 189 ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಪಕ್ಷವು ತನ್ನ ಅನುಭವಿ ನಾಯಕ ಅರವಿಂದ ಲಿಂಬಾವಳಿಯನ್ನು ಮಹದೇವಪುರ ಕ್ಷೇತ್ರದಿಂದ ಕೈಬಿಟ್ಟಿದ್ದು ಈ ಸ್ಥಾನದಲ್ಲಿ ಅವರ ಪತ್ನಿ ಮಂಜುಳಾ ಅರವಿಂದ್ ಲಿಂಬಾವಳಿಯನ್ನು ಕಣಕ್ಕಿಳಿಸಿದೆ. ಮಾಜಿ ಮುಖ್ಯಮಂತ್ರಿ ಜಗದೀಶ […]