ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಉಲ್ಲಂಘಿಸಿದಲ್ಲಿ ಕಾರಾಗೃಹ ವಾಸ ನಿಶ್ಚಿತ: ನ್ಯಾ.ಶರ್ಮಿಳಾ

ಉಡುಪಿ: ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆಯ ಕಟ್ಟುನಿಟ್ಟಿನ ಅನುಷ್ಠಾನ ಕುರಿತಂತೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಜಿಲ್ಲೆಯ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲಿಸುವ ಬಗ್ಗೆ ಶೀಘ್ರದಲ್ಲಿ ಆದೇಶ ಬರುವ ಸಾಧ್ಯತೆಗಳಿದ್ದು, ಕಾಯಿದೆಯ ಅಂಶಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸುವವರಿಗೆ ಕಾರಾಗೃಹ ವಾಸ ಮತ್ತು ದಂಡದ ಶಿಕ್ಷೆಯನ್ನು ವಿಧಿಸಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಹೇಳಿದರು. ಅವರು ಶುಕ್ರವಾರದಂದು ಜಿಲ್ಲಾ ಆರೋಗ್ಯ […]

ನಾಪತ್ತೆಯಾಗಿ ಮೂರು ತಿಂಗಳು ಕಳೆದರೂ ಪತ್ತೆಯಾಗಿಲ್ಲ ಉಡುಪಿ ಪಬ್ಲಿಕ್ ಪ್ರಾಸಿಕ್ಯೂಟರ್ ತಾಯಿ

ಉಡುಪಿ: ಸಾರ್ವಜನಿಕರಿಗೆ ನ್ಯಾಯ ದೊರಕಿಸಿಕೊಡಲು ಹಗಲಿರುಳು ಶ್ರಮಿಸುವ ಉಡುಪಿಯ ಪಬ್ಲಿಕ್ ಪ್ರಾಸಿಕ್ಯೂಟರ್ ಜಯರಾಮ ಶೆಟ್ಟಿ ಅವರ ತಾಯಿ ಕಳೆದ ಮೂರು ತಿಂಗಳಿನಿಂದ ನಾಪತ್ತೆಯಾಗಿದ್ದು, ಇವರ ಬಗ್ಗೆ ಸುಳಿವು ಇನ್ನೂ ಲಭ್ಯವಾಗಿಲ್ಲ. ಉಡುಪಿ ಜಿಲ್ಲಾ ನ್ಯಾಯಾಲಯದ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿರುವ ಜಯರಾಮ ಶೆಟ್ಟಿಯವರ ತಾಯಿ ವನಜಾ ಶೆಡ್ತಿಯವರು ಬ್ರಹ್ಮಾವರದ ವರಂಬಳ್ಳಿಯಲ್ಲಿ ತಮ್ಮ ಇನ್ನೊಬ್ಬ ಮಗನ ಮನೆಯಲ್ಲಿ ವಾಸವಾಗಿದ್ದು, ನವೆಂಬರ್ 14, 2022 ರಂದು, ಆಕೆ ಏಕಾಏಕಿ ಮನೆಯಿಂದ ಕಾಣೆಯಾಗಿದ್ದಾರೆ. ಜಯರಾಮ್ ಶೆಟ್ಟಿ ಮತ್ತು ಮನೆಯವರು ಆಕೆಗಾಗಿ ಎಲ್ಲಾ ಕಡೆ […]

ಭೂಕಂಪ ಪೀಡಿತ ಟರ್ಕಿ ಸಿರಿಯಾದಲ್ಲಿ ಅಪಾಯಕ್ಕೆ ಸಿಲುಕಿರುವ ರಾಜ್ಯದ ನಾಗರಿಕರಿಗಾಗಿ ಸಹಾಯವಾಣಿ

ಉಡುಪಿ: ಟರ್ಕಿ ಮತ್ತು ಸಿರಿಯಾ ದೇಶದಲ್ಲಿ ಫೆಬ್ರವರಿ 6 ರಂದು ಸಂಭವಿಸಿದ ಭೂಕಂಪದಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಸ್ತಿ-ಪ್ರಾಣಹಾನಿ ಉಂಟಾಗಿದ್ದು, ಸಂಪರ್ಕ ಹಾಗೂ ಸಾರಿಗೆ ವ್ಯವಸ್ಥೆಯು ಸಂಪೂರ್ಣವಾಗಿ ಅಸ್ತವ್ಯಸ್ತವಾಗಿರುವ ಹಿನ್ನೆಲೆ, ರಾಜ್ಯ ಸರಕಾರವು ಅಪಾಯಕ್ಕೆ ಸಿಲುಕಿರುವ ಟರ್ಕಿ ಮತ್ತು ಸಿರಿಯಾದಲ್ಲಿ ವಾಸವಿರುವ ರಾಜ್ಯದ ಸಾರ್ವಜನಿಕರ ನೆರವಿಗೆ 24*7 ರಾಜ್ಯ ಸಹಾಯವಾಣಿ ಸಂಖ್ಯೆ: 080-1070, 080-22340676 ಮತ್ತು ಇ-ಮೇಲ್ seockarnataka@gmail.com, revenuedmkar@gmail.com ಅನ್ನು ಆರಂಭಿಸಿದ್ದು, ಸಾರ್ವಜನಿಕರು ಅವಶ್ಯಕತೆಯಿದ್ದಲ್ಲಿ ಸದ್ರಿ ಸಹಾಯವಾಣಿಯ ಸೇವೆಯನ್ನು ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ತುರ್ತು ವಿಪತ್ತು […]

ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಿಗೆ ಬೇಡಿಕೆ ಸಲ್ಲಿಸಿದ ಕುಪ್ಮಾ ಆಡಳಿತ ಮಂಡಳಿ ಪದಾಧಿಕಾರಿಗಳು

ಬೆಂಗಳೂರು: ಕರ್ನಾಟಕ ರಾಜ್ಯ ಖಾಸಗಿ ಅನುದಾನ ರಹಿತ ಪ.ಪೂ ಕಾಲೇಜುಗಳ ಆಡಳಿತ ಮಂಡಳಿಗಳ ಸಂಘದ ಪದಾಧಿಕಾರಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವ ಬಿ.ಸಿ.ನಾಗೇಶ್ ಅವರ ಅಧ್ಯಕ್ಷತೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಮಾಡಬೇಕಾದ ಕೆಲವು ಬದಲಾವಣೆಗಳು ಹಾಗೂ ಇನಿತರ ವಿಷಯಗಳ ಕುರಿತಂತೆ ಬೆಂಗಳೂರಿನ ಸಮಗ್ರ ಶಿಕ್ಷಣದ ಸಭಾಂಗಣದಲ್ಲಿ ಸುದೀರ್ಘ ಚರ್ಚೆಯನ್ನು ನಡೆಸಿದರು. ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿಂಧೂ ರೂಪೇಶ್, ಹೆಚ್ಚುವರಿ ಕಾರ್ಯದರ್ಶಿ ಚಂದ್ರಶೇಖರ್, ಪಪೂ ಶಿಕ್ಷಣಾ ಇಲಾಖೆಜಂಟಿ […]

ಕರಾವಳಿ ತೀರದ ಮೇರು ಕಲೆ ಯಕ್ಷಗಾನಕ್ಕೆ ಮೊದಲ ರಾಷ್ಟ್ರಪ್ರಶಸ್ತಿಯನ್ನು ತಂದಿತ್ತವರು ಹಾರಾಡಿ ರಾಮಗಾಣಿಗರು

ಉಡುಪಿ ಜಿಲ್ಲೆಯ ಬ್ರಹ್ಮಾವರದ ಬಳಿಯ ಹಾರಾಡಿಯಲ್ಲಿ 1902 ಮೇ 27 ರಂದು ಸುಬ್ಬಣ್ಣ ಗಾಣಿಗ ಮತ್ತು ಕೊಲ್ಲು ದಂಪತಿಗಳ 2 ನೇ ಪುತ್ರನಾಗಿ ಜನಿಸಿದ ರಾಮ ಗಾಣಿಗರ ವಿದ್ಯಾಭ್ಯಾಸ ಬೈಕಾಡಿಯ ಐಗಳ ಮಠದಲ್ಲಿ 2 ನೇ ತರಗತಿಯವರೆಗೆ ಮಾತ್ರ . ತನ್ನ 14 ನೇ ವಯಸ್ಸಿನಲ್ಲಿ ಮಾರಣಕಟ್ಟೆ ಮೇಳದಲ್ಲಿ ಬಾಲಗೋಪಾಲನಾಗಿ ಮೊದಲು ಗೆಜ್ಜೆ ಕಟ್ಟಿ, ಯಕ್ಷಗಾನ ರಂಗಕ್ಕೆ ಪಾದಾರ್ಪಣೆ ಮಾಡಿದ ಇವರು, ಒಂದು ವರ್ಷದ ತಿರುಗಾಟದ ಬಳಿಕ ಇತಿಹಾಸ ಪ್ರಸಿದ್ಧ ಮಂದಾರ್ತಿ ಮೇಳಕ್ಕೆ ಸೇರ್ಪಡೆಗೊಂಡರು. ಆ ಮೇಳವೊಂದರಲ್ಲಿ […]