ಬೆಂಗಳೂರಿನ ವಿದ್ಯಾರ್ಥಿಯನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ

ನವದೆಹಲಿ: ಪರಿಸರ ಕಾಳಜಿ ವ್ಯಕ್ತಪಡಿಸಿರುವ ಬೆಂಗಳೂರಿನ ವಿದ್ಯಾರ್ಥಿಯೊಬ್ಬನನ್ನು ಪ್ರಧಾನಿ ನರೇಂದ್ರ ಮೋದಿ ಹಾಡಿ ಹೊಗಳಿದ್ದಾರೆ. ಈ ಸಂಬಂಧ ಅವರು ಸಾಮಾಜಿಕ ಜಾಲ ತಾಣದಲ್ಲಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ವೈದ್ಯರಾಗಿರುವ ದೀಪಕ್ ಕೃಷ್ಣಮೂರ್ತಿ ತಮ್ಮ ಮಗನ ಚಟುವಟಿಕೆ ಕುರಿತಂತೆ ಒಂದು ಪೋಸ್ಟ್ ಹಂಚಿಕೊಂಡಿದ್ದರು. ಶೈಕ್ಷಣಿಕ ವರ್ಷ ಕೊನೆಗೊಂಡ ಕೂಡಲೇ ನೋಟ್ ಪುಸ್ತಕದಲ್ಲಿ ಉಳಿದಿರುವ ಹಾಳೆಗಳನ್ನು ಬಳಸಿ ಅಭ್ಯಾಸ ಪುಸ್ತಕ ಮಾಡುವ ಮಗನ ಆಸಕ್ತಿಯನ್ನು ಪ್ರಸ್ತಾಪಿಸಿದ್ದರು. ಮರ ಉಳಿಸುವ ನಿಟ್ಟಿನಲ್ಲಿ ಮಗ ಈ ರೀತಿ ಮಾಡುತ್ತಿದ್ದಾನೆ ಎಂದು ಹೇಳಿದ್ದರು. ದೀಪಕ್ […]

ಉಡುಪಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಅಧ್ಯಕ್ಷರಾಗಿ ಮೊಹಮ್ಮದ್ ನಾಸಿರ್ ಯಾಕೋಬ್ ನೇಮಕ

ಉಡುಪಿ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮತ್ತು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಇವರ ಆದೇಶದ ಮೇರೆಗೆ ಉಡುಪಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಅಧ್ಯಕ್ಷರಾಗಿ ಮೊಹಮ್ಮದ್ ನಾಸಿರ್ ಯಾಕೋಬ್ ಇವರನ್ನು ನೇಮಿಸಲಾಗಿದೆ.

ನಾಳೆ ‘ಕಾಂಗ್ರೆಸ್’ನಿಂದ ಕರೆ ನೀಡಿದ್ದ ‘ಕರ್ನಾಟಕ ಬಂದ್’ ವಾಪಾಸ್: ಡಿ.ಕೆ ಶಿವಕುಮಾರ್

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಸೇರಿದಂತೆ ರಾಜ್ಯಾದ್ಯಂತ ಶಾಲಾ- ಕಾಲೇಜುಗಳ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಒತ್ತಡದ ಮೇರೆಗೆ ನಾಳೆ ನಡೆಸಬೇಕಿದ್ದ ಸಾಂಕೇತಿಕ ಕರ್ನಾಟಕ ಬಂದ್ ಅನ್ನು ವಾಪಸ್ ತೆಗೆದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕರ ಜತೆ ಸಮಾಲೋಚನೆ ನಡೆಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಶಿವಕುಮಾರ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.‘ಬಿಜೆಪಿ ಸರ್ಕಾರದ ಮಿತಿಮೀರಿದ ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಮುಖ್ಯಮಂತ್ರಿಗಳ ರಾಜೀನಾಮೆಗೆ […]

ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ರಥೋತ್ಸವ ಸಂಭ್ರಮ

ಉಡುಪಿ: ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ, ಶ್ರೀ ಮಹಿಷಮರ್ದಿನಿ ದೇವಿಯ ವಾರ್ಷಿಕ ರಥೋತ್ಸವವು ಮಾ. 7ರಂದು ಪಾಡಿಗಾರು ಶ್ರೀನಿವಾಸ ತಂತ್ರಿಯವರ ನೇತೃತ್ವದಲ್ಲಿ ಜರಗಿತು. ರಥಾರೋಹಣ, ಸಾರ್ವಜನಿಕ ಅನ್ನ ಸಂತರ್ಪಣೆ, ದಾಮೋದರ ಸೇರಿಗಾರ್ ಇವರಿಂದ ಸ್ಯಾಕ್ಸೋಫೋನ್ ವಾದನ, ಮನ್ಮಹಾರಥೋತ್ಸವ, ವೈವಿಧ್ಯಮಯ ಯಕ್ಷಗಾನ ವೇಷಗಳ ಮೆರವಣಿಗೆ, ಹಚ್ಚಡ ಸೇವೆ, ಉಂಡಾರು ಚೆಂಡೆ ಬಳಗದವರಿಂದ ಚೆಂಡೆ ವಾದನ, ಕ್ರೇಜಿ ಕಿಡ್ಸ್, ಸ್ಥಳೀಯರಿಂದ ನೃತ್ಯ ವೈಭವ, ಸನ್ನಿಧಿ ಕಲಾವಿದರಿಂದ ತುಳು ನಾಟಕ ಅಪ್ಪೆ ಮಂತ್ರ ದೇವತೆ ನಡೆಯಿತು. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ […]

ಕೈವಾರ ತಾತಯ್ಯ, ಜಗದ್ಗುರು ರೇಣುಕಾಚಾರ್ಯ ಜಯಂತಿ

ಉಡುಪಿ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಜಗದ್ಗುರು ರೇಣುಕಾಚಾರ್ಯ ಮತ್ತು ಕೈವಾರ ತಾತಯ್ಯ ಜಯಂತಿ ಆಚರಣೆಯು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಇಲಾಖೆ ವತಿಯಿಂದ ಆಚರಿಸಲಾಗುವ ಎಲ್ಲಾ ಮಹನೀಯರು, ದಾರ್ಶನಿಕರು, ತತ್ವ ಜ್ಞಾನಿಗಳು, ವಚನಕಾರರ ಬದುಕು ಹಾಗೂ ಮಾರ್ಗದರ್ಶನಗಳು ನಮ್ಮೆಲ್ಲರ ಜೀವನಕ್ಕೆ ಪ್ರೇರಣೆ ಎಂದರು. ಜಂಗಮ ಮಠದ ಡಾ. […]