ನಿಟ್ಟೂರು ಅಡ್ಕದಕಟ್ಟೆ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ವಿತರಣೆ ಪ್ರಾರಂಭ

ಉಡುಪಿ: ಉಡುಪಿ ತಾಲೂಕಿನ ನಗರ ವ್ಯಾಪ್ತಿಯ ಗುಂಡಿಬೈಲು ಹಾಗೂ ಅಂಬಾಗಿಲು ಪ್ರದೇಶದ ಪಡಿತರದಾರರಿಗೆ ಅನುಕೂಲವಾಗುವಂತೆ ನಿಟ್ಟೂರು ಗ್ರಾಮದ ಅಡ್ಕದಕಟ್ಟೆಯ ಶ್ರೀ ಗುರು ರಾಘವೇಂದ್ರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲಾಗಿದ್ದು, ಗುಂಡಿಬೈಲು ಹಾಗೂ ಅಂಬಾಗಿಲು ಪ್ರದೇಶದ ಪಡಿತರದಾರರು ಜನವರಿ ತಿಂಗಳಿಂದ ಸದ್ರಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರವನ್ನು ಪಡೆಯಬಹುದಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾ ಮಟ್ಟದ ಯುವ ವಿದ್ಯಾರ್ಥಿ ಸಮ್ಮೇಳನ ಸಂಪನ್ನ

ಉಡುಪಿ: ಶುಕ್ರವಾರ ಉಡುಪಿ ಚರ್ಚಿನಲ್ಲಿ, ನೆಹರೂ ಯುವಕೇಂದ್ರ ಸಂಘಟನೆ ಉಡುಪಿ ಜಿಲ್ಲೆ, ಯುವ ವಿದ್ಯಾರ್ಥಿ ಸಂಚಲನ, ಉಡುಪಿ ಧರ್ಮಕ್ಷೇತ್ರ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಯುವ ವಿದ್ಯಾರ್ಥಿ ಸಮ್ಮೇಳನವನ್ನು ಏರ್ಪಡಿಸಲಾಗಿತ್ತು. ಕರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಕೂರ್ಮಾ ರಾವ್, ಸಮಾಜದಲ್ಲಿ ಬದುಕುವ ಪ್ರತಿಯೋರ್ವನೂ ಮೊದಲು ಮಾನವನಾಗುವತ್ತ ಕಾರ್ಯಪ್ರವೃತ್ತನಾದರೆ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ. ಮನುಷ್ಯ ಸದಾ ಕ್ರಿಯಾಶೀಲನಾಗಿರಲು ಬಯಸುತ್ತಾನೆ. ಯಾವುದಾದರೂ ಚಟುವಟಿಕೆಯಲ್ಲಿ ತನ್ನನ್ನೇ ತಾನು ತೊಡಗಿಸಿಕೊಳ್ಳುತ್ತಾನೆ. ಇದು ಮನುಷ್ಯರಲ್ಲಿ ಅಂತರ್ಗತವಾಗಿರುವ ಗುಣ. ವಿದ್ಯಾರ್ಥಿಗಳು ತಮ್ಮ […]

ಹೊಸ ಗರಿಷ್ಠ ದರ ತಲುಪಿದ ಹಳದಿ ಲೋಹ: 10 ಗ್ರಾಂ ಚಿನ್ನಕ್ಕೆ 56,245 ರೂ ಗರಿಷ್ಠ ದರ

ನವದೆಹಲಿ: ಮೃದುವಾದ ಯುಎಸ್ ಗ್ರಾಹಕ ದರ ಸೂಚ್ಯಂಕ ಡೇಟಾ ಮತ್ತು ಡಾಲರ್ ಸೂಚ್ಯಂಕವು 7 ತಿಂಗಳ ಕನಿಷ್ಠಕ್ಕೆ ಜಾರಿದ ನಂತರ, ಫೆಬ್ರವರಿ 2023 ಕ್ಕೆ ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್ (ಎಂಸಿಎಕ್ಸ್) ನಲ್ಲಿ ಚಿನ್ನವು ಹಿಂದಿನ ಗರಿಷ್ಠ ದರ ಪ್ರತಿ 10 ಗ್ರಾಂಗೆ ರೂ 56,191 ಅನ್ನು ಹಿಂದಿಕ್ಕಿ ಶುಕ್ರವಾರದಂದು ರೂ 56,245 ರ ಹೊಸ ಗರಿಷ್ಠವನ್ನು ತಲುಪಿದೆ. ತಜ್ಞರ ಪ್ರಕಾರ ಡಿಸೆಂಬರ್ 2022 ರ ಯುಎಸ್ ಹಣದುಬ್ಬರ ಬೆಳವಣಿಗೆಯು ಅಕ್ಟೋಬರ್ 2021 ರಿಂದ ಕಡಿಮೆ ವಾರ್ಷಿಕ ಬೆಳವಣಿಗೆಯನ್ನು […]

ನಾಳೆ ಮಣಿಪಾಲ ಎಂಡ್ ಪಾಯಿಂಟ್ ನಲ್ಲಿ ಯೋಗಥಾನ್ ಕಾರ್ಯಕ್ರಮ

ಮಣಿಪಾಲ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಮತ್ತು ಡಾ. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಯೋಗಥಾನ್ ಕಾರ್ಯಕ್ರಮವು ಜನವರಿ 15 ರಂದು ಬೆಳಗ್ಗೆ 7 ಗಂಟೆಗೆ ಮಣಿಪಾಲದ ಎಂಡ್ ಪಾಯಿಂಟ್‌ನಲ್ಲಿ ನಡೆಯಲಿದೆ. ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಕೆ.ರಘುಪತಿ ಭಟ್ […]

ಜಿಲ್ಲಾ ಸರಕಾರಿ ನೌಕರರ ವಾರ್ಷಿಕ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

ಉಡುಪಿ: ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಉಡುಪಿ ಜಿಲ್ಲೆಯ ಸರಕಾರಿ ನೌಕರರು ಸರಕಾರಿ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನವಾಗುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದು ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ಸೇವೆ ನೀಡುತ್ತಿದ್ದಾರೆ ಎಂದು ಶಾಸಕ ರಘುಪತಿ ಭಟ್ ಹೇಳಿದರು. ಅವರು ಶುಕ್ರವಾರದಂದು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಸರಕಾರಿ ನೌಕರರ ಸಂಘದ 2022 ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯಲ್ಲಿ 7500 ಕ್ಕೂ ಅಧಿಕ ಸರಕಾರಿ […]