ಬಾಲರೋಗ ಮತ್ತು ಪ್ರಸೂತಿ ತಂತ್ರ ಸ್ತ್ರೀ ರೋಗಗಳ ಉಚಿತ ತಪಾಸಣೆ ಹಾಗೂ ಮಾಹಿತಿ ಶಿಬಿರ

ಮಣಿಪಾಲ: ಮಣಿಪಾಲದ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಬಾಲರೋಗ ಮತ್ತು ಪ್ರಸೂತಿ ತಂತ್ರ ಸ್ತ್ರೀ ರೋಗ ವಿಭಾಗದ ವತಿಯಿಂದ ದಿನಾಂಕ 25.04.2022 ರಿಂದ 30.04.2022 ರವರೆಗೆ ಪೂರ್ವಾಹ್ನ 9.00 ರಿಂದ ಅಪರಾಹ್ನ 4.00 ಘಂಟೆಯವರೆಗೆ ಮಕ್ಕಳ ಮತ್ತು ಸ್ತ್ರೀ ರೋಗಗಳ ಉಚಿತ ತಪಾಸಣೆ, ಹಾಗೂ ಮಾಹಿತಿ ಶಿಬಿರ ನಡೆಯಲಿರುವುದು. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕೆಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಕ್ಲಿನಿಕ್, ಆಸ್ಪತ್ರೆಗಳು ನೋಂದಣಿ ಪದ್ಧತಿಯಲ್ಲಿ ಚಿಕಿತ್ಸೆ ನೀಡುವುದು ಕಡ್ಡಾಯ

ಉಡುಪಿ: ಜಿಲ್ಲೆಯಲ್ಲಿ ನೊಂದಾಯಿಸಲ್ಪಟ್ಟ ಕ್ಲಿನಿಕ್ ಹಾಗೂ ಆಸ್ಪತ್ರೆಗಳು ನೋಂದಾವಣೆಯಾದ ಪದ್ಧತಿಯಲ್ಲಿ ನಿಯಮಾನುಸಾರವಾಗಿ ಸೇವೆ ನೀಡಬೇಕು. ಆಯುರ್ವೇದ ಪದ್ಧತಿಯೊಂದಿಗೆ ಇಂಟಿಗ್ರೇಟೆಡ್ ಡಿಪ್ಲೋಮಾ ಕೋರ್ಸ್ಗಳನ್ನು ಮಾಡಿ ಪ್ರಮಾಣ ಪತ್ರ ಹೊಂದಿರುವ ವೈದ್ಯರುಗಳು ಆಧುನಿಕ ವೈದ್ಯ ಪದ್ಧತಿಯಲ್ಲಿ ವೈದ್ಯ ವೃತ್ತಿ ನಡೆಸಲು ಅವಕಾಶವಿದ್ದು, ನೋಂದಾವಣೆ ಹೊಂದಿರುವ ಪದ್ಧತಿಯನ್ನು ಬಿಟ್ಟು ಇನ್ನೊಂದು ಪದ್ಧತಿಯಲ್ಲಿ ಚಿಕಿತ್ಸೆ ನೀಡುತ್ತಿರುವುದು ಕಂಡುಬಂದಲ್ಲಿ ತಾಲೂಕು ಪ್ರಾಧಿಕೃತ ಅಧಿಕಾರಿಗಳು ಕ್ರಮ ವಹಿಸಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಆರ್.ಸಿ.ಎಮ್.ಟಿ: ಮಕ್ಕಳ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡಲು ಹಣ ಸಂಗ್ರಹ

ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ (ಮಾಹೆ), ಮಣಿಪಾಲ ಸಹಯೋಗದೊಂದಿಗೆ ರೋಟರಿ ಕ್ಲಬ್ ಮಣಿಪಾಲ್ ಟೌನ್ (ಆರ್.ಸಿ.ಎಮ್.ಟಿ) ವತಿಯಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಬಡ ಮಕ್ಕಳಿಗೆ ಚಿಕಿತ್ಸೆ ನೀಡಲು ಹಣವನ್ನು ಸಂಗ್ರಹಿಸಲಾಗುತ್ತಿದೆ. ಆರ್.ಸಿ.ಎಮ್.ಟಿಯು ಮೇ 2022 ರಂದು ‘ಗೋಲ್ಡನ್ ಜುಬಿಲಿ’ ಸಭಾಂಗಣ, ಕೆನರಾ ಬ್ಯಾಂಕ್, ಮಣಿಪಾಲದಲ್ಲಿ “ಸಾಂಸ್ಕೃತಿಕ ಸವಾಲು- 2022” ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಸಾಂಪ್ರದಾಯಿಕ ಮತ್ತು ಜಾನಪದ-ನೃತ್ಯ ಶೀರ್ಷಿಕೆಗಾಗಿ ಹಲವಾರು ತಂಡಗಳು ಸ್ಪರ್ಧಿಸಲಿವೆ. ವಿಜೇತರಿಗೆ ಪ್ರಥಮ ಬಹುಮಾನ ರೂ. 1 ಲಕ್ಷ, 2ನೇ ಬಹುಮಾನ ರೂ. 60,000 […]

ಜೀವಜಲ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜೀವಜಲ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹ ವೀರಶೈವ ಲಿಂಗಾಯತ ಸಮಾಜದ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ 1 ರಿಂದ ಗರಿಷ್ಠ 5 ಎಕರೆ ಜಮೀನು ಹೊಂದಿರುವ, ನೀರಾವರಿ ಸೌಲಭ್ಯ ಹೊಂದಿರದ, ವಾರ್ಷಿಕ ವರಮಾನ 40,000 ರೂ. ಒಳಗಿರುವ ರೈತರು ಯೋಜನೆಯ ಸೌಲಭ್ಯ ಪಡೆಯಲು ಮೇ 10 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.dbcdc.karnataka.gov.in ಭೇಟಿ […]

ಏ.29: ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ: ಶಾಂತಾ ಎಲೆಕ್ಟ್ರಿಕಲ್ಸ್ ಮತ್ತು ಇಂಜಿನಿರ್ಸ್ ಪ್ರೈ.ಲಿ, ಶ್ರೀ ವಿನಾಯಕ ಪ್ಲಾಸ್ಟಿಕ್ ಇಂಡಸ್ಟ್ರೀಸ್ ಕಂಪೆನಿ ಮತ್ತು ಕೋಟೆ ಮನೆ ಇಂಟರ್ ನ್ಯಾಷನಲ್ ಸ್ಕೂಲ್ ವತಿಯಿಂದ ಏಪ್ರಿಲ್ 29 ರಂದು ಬೆಳಗ್ಗೆ 9.45 ರಿಂದ ಮಣಿಪಾಲದ ಉದ್ಯೋಗ ವಿನಿಮಯ ಕಛೇರಿಯಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ, ಐ.ಟಿ.ಐ ಡಿಪ್ಲೋಮಾ, ಬಿ.ಎ, ಬಿ.ಎಡ್, ಎನ್.ಟಿ.ಟಿ ಹಾಗೂ ಇತರೆ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅಂಕಪಟ್ಟಿ, ರೆಸ್ಯೂಮ್ ಹಾಗೂ ಆಧಾರ್ ಕಾರ್ಡಿನ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. […]