ಅಸಮಾನತೆ ನಿವಾರಣೆಗಾಗಿ ಡಾ. ಬಾಬು ಜಗಜೀವನ್ ರಾಂ ಹೋರಾಟ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಸಮಾಜದದಲ್ಲಿನ ವಿವಿಧ ಜಾತಿ ಮತ್ತು ವರ್ಗಗಳ ನಡುವಿನ ಅಸಮಾನತೆಯನ್ನು ತೊಡೆದು ಹಾಕಿ ಸಮಾನತೆಯನ್ನು ಮೂಡಿಸುವಲ್ಲಿ ಡಾ. ಬಾಬು ಜಗಜೀವನ ರಾಂ ಅವಿರತವಾಗಿ ಶ್ರಮಿಸಿದ್ದರು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. ಅವರು ಇಂದು ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರಸಭೆ, ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯ ಹಾಗೂ ಪ.ಜಾತಿ ಮತ್ತು ಪ.ವರ್ಗಗಳ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಡಾ.ಬಾಬು ಜಗಜೀವನ ರಾಂ ಅವರ ಜನ್ಮ ದಿನಾಚರಣೆ […]

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಪುನಾರಂಭಿಸಲು ಸಾಧ್ಯವಿಲ್ಲ: ಸಚಿವ ಮುರುಗೇಶ್ ನಿರಾಣಿ

ಉಡುಪಿ: ಬ್ರಹ್ಮಾವರ ಸಕ್ಕರೆ ಕಾರ್ಖಾನೆಗಾಗಿ ಕಬ್ಬು ಬೆಳೆಸುತ್ತಿದ್ದ ಭೂಮಿಯನ್ನು ಪರಿವರ್ತನೆ ಮಾಡಿ ಅಡಿಕೆ ಬೆಳೆಸಲಾಗುತ್ತಿದೆ. ಉಳಿದ ಭಾಗಕ್ಕೆ ಹೋಲಿಕೆ ಮಾಡಿದರೆ ಇಲ್ಲಿ ಬೆಳೆದ ಕಬ್ಬಿನಲ್ಲಿ ಸಕ್ಕರೆ ಬರುವುದು ಕಡಿಮೆ. ಆದುದರಿಂದ ಈಗಾಗಲೇ ಮುಚ್ಚಿರುವ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯನ್ನು ಮತ್ತೆ ಸಕ್ಕರೆ ಕಾರ್ಖಾನೆಯಾಗಿ ಪುನಾರಂಭಿಸಲು ಸಾಧ್ಯವೇ ಇಲ್ಲ ಎಂದು ರಾಜ್ಯ ಬೃಹತ್ ಹಾಗೂ ಮಾಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಇಂದ್ರಾಳಿಯಲ್ಲಿರುವ ಉಡುಪಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಚೇರಿಯಲ್ಲಿ ಸೋಮವಾರ ನಡೆದ ಕೈಗಾರಿಕೋದ್ಯಮಿಗಳೊಂದಿಗೆ ಸಂವಾದ […]

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಗೆ 14 ಕೋಟಿ ಲಾಭ: ಯಶ್‍ಪಾಲ್ ಎ. ಸುವರ್ಣ

ಕರಾವಳಿ ಭಾಗದ ಪ್ರತಿಷ್ಟಿತ ಪಟ್ಟಣ ಸಹಕಾರಿ ಸಂಸ್ಥೆಗಳಲ್ಲಿ ಒಂದಾದ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ 2021-22ನೇ ಸಾಲಿನಲ್ಲಿ ರೂ. 641.22 ಕೋಟಿ ವ್ಯವಹಾರ ನಡೆಸಿ ರೂ. 14 ಕೋಟಿ ಲಾಭ ದಾಖಲಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ  ಯಶ್‍ಪಾಲ್ ಸುವರ್ಣ ತಿಳಿಸಿದ್ದಾರೆ. ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಸಹಕಾರಿ ಇಲಾಖೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕಿನ ಪರಿವೀಕ್ಷಣೆಗೆ ಒಳಪಟ್ಟು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆಗಳ ಮೂಲಕ ವ್ಯವಹಾರ ನಡೆಸುತ್ತಿದೆ. ಬ್ಯಾಂಕ್ 2021-22ನೇ ಸಾಲಿನಲ್ಲಿ 368 ಕೋಟಿ ಠೇವಣಿ, […]

ಬ್ರಹ್ಮಾವರ: ಮಹಿಳೆ ನಾಪತ್ತೆ

ಬ್ರಹ್ಮಾವರ: ಮನೆಯಿಂದ ಹೊರಗೆ ಹೋದ ಮಹಿಳೆಯೊಬ್ಬರು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಬ್ರಹ್ಮಾವರ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ. ಹೊಸೂರು ಗ್ರಾಮದ 28 ವರ್ಷದ ನಿವಾಸಿ ರೇವತಿ ನಾಪತ್ತೆಯಾದ ಮಹಿಳೆ. ಇವರು ಮಾ.27ರ ರಾತ್ರಿಯಿಂದ ಮಾ.28ರ ಬೆಳಿಗ್ಗೆ 6.30ರ ಮಧ್ಯಾವಧಿಯಲ್ಲಿ ಮನೆಯಿಂದ ಹೊರಗೆ ಹೋದವರು ವಾಪಾಸ್ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಮನೆಯವರು ಎಲ್ಲ ಕಡೆ ಹುಡುಕಾಟ ನಡೆಸಿದರೂ ಈವರೆಗೂ ರೇವತಿ ಪತ್ತೆಯಾಗಿಲ್ಲ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

ವಿವಿಧ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ರಾಷ್ಟ್ರೀಯ ಏಡ್ಸ್ ನಿಯಂತ್ರಣ ಕಾರ್ಯಕ್ರಮದ ರಸ್ತೆ ಸುರಕ್ಷತೆ ಅಡಿಯಲ್ಲಿ, ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರದಲ್ಲಿ ಆಪ್ತ ಸಮಾಲೋಚಕರು ಹಾಗೂ ಪ್ರಯೋಗ ಶಾಲಾ ತಂತ್ರಜ್ಞರ ತಲಾ 1 ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ  Udupi.nic.in ಅಥವಾ ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಉಡುಪಿ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.