ಕೋಟ: ಸಮಾಜ ಕಲ್ಯಾಣ ಇಲಾಖೆ ಸಚಿವರ ಊರಲ್ಲೇ ಪೊಲೀಸರ ಅಮಾನವೀಯ ಕೃತ್ಯ

ಕೋಟ: ಕೋಟತಟ್ಟು ಗ್ರಾಮದ ಬಾರಿಕೆರೆ ಎಂಬಲ್ಲಿ ಕೊರಗ ಸಮುದಾಯದ ಮನೆಯಲ್ಲಿ ಸೋಮವಾರ ನಡೆಯುತ್ತಿದ್ದ ಮೆಹಂದಿ ಕಾರ್ಯಕ್ರಮಕ್ಕೆ ಏಕಾಏಕಿ ನುಗ್ಗಿದ ಪೊಲೀಸರು ಮನೆಮಂದಿಗೆ ಲಾಠಿ ಚಾರ್ಜ್ ನಡೆಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪ ಕೇಳಿಬಂದಿದೆ. ದಿಢೀರ್ ಆಗಿ ಮದುವೆ ಮನೆಗೆ ನುಗ್ಗಿದ ಕೋಟ ಪೊಲೀಸರು, ಡಿಜೆ ಹಾಗೂ ಲೈಟ್ ಆಫ್ ಮಾಡಿಸಿದ್ದಾರೆ. ಬಳಿಕ ಮದುಮಗ, ಹೆಣ್ಣುಮಕ್ಕಳೆಂದು ಲೆಕ್ಕಿಸದೇ ಲಾಠಿ ಬೀಸಿದ್ದಾರೆ ಎಂದು ಮನೆಯವರು ಆರೋಪಿದ್ದಾರೆ. ಲಾಠಿ ಚಾರ್ಜ್ ನಿಂದ ಮದುಮಗ, ಮಹಿಳೆಯರು ಸೇರಿದಂತೆ 9 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ […]

ಕೋಟ: ಕೊರಗ ಸಮುದಾಯದ ಮನೆಯ ಮೆಹಂದಿ ಕಾರ್ಯಕ್ರಮಕ್ಕೆ ಪೊಲೀಸರ ದಾಳಿ; ಮಧುಮಗ, ಹೆಣ್ಣುಮಕ್ಕಳೆಂದು ಲೆಕ್ಕಿಸದೆ ಲಾಠಿ ಬೀಸಿದ ಆರೋಪ

ಕೋಟ: ಕೊರಗ ಸಮುದಾಯದ ಮನೆಯೊಂದರಲ್ಲಿ ನಡೆಯುತ್ತಿದ್ದ ಮೆಹಂದಿ ಕಾರ್ಯಕ್ರಮಕ್ಕೆ ಪೊಲೀಸರು ದಾಳಿ ನಡೆಸಿ, ಮನೆಮಂದಿಯ ಮೇಲೆ ಲಾಠಿ ಚಾರ್ಜ್ ನಡೆಸಿರುವ ಆರೋಪಕೇಳಿ ಬಂದಿದೆ. ಕುಂದಾಪುರ ತಾಲೂಕಿನ ಕೋಟತಟ್ಟು ಗ್ರಾಮದ ಕೊರಗ ಸಮುದಾಯದ ಮನೆಯಲ್ಲಿ ನಿನ್ನೆ ರಾತ್ರಿ ಮೆಹಂದಿ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಅಲ್ಲಿಗೆ ಬಂದ ಕೋಟ ಠಾಣಾ ಪೊಲೀಸರು, ಡಿಜೆ, ಲೈಟ್ ಆಫ್ ಮಾಡಿ ಮಧುಮಗ, ಹೆಣ್ಣುಮಕ್ಕಳೆಂದು ಲೆಕ್ಕಿಸದೇ ಲಾಠಿ ಬೀಸಿದ್ದಾರೆ ಎಂದು ಮನೆಯವರು ಆರೋಪಿದ್ದಾರೆ. ಪೊಲೀಸರನ್ನು ಅಮಾನತು ಮಾಡಿ: ಆಗ್ರಹ ಕೋಟಾ ಠಾಣಾಧಿಕಾರಿ ಸಂತೋಷ್ […]

ಕುಂದಾಪುರ: ಅಕ್ರಮ ಗೋವಧೆಗೆ ಯತ್ನ; ಓರ್ವನ ಬಂಧನ

ಕುಂದಾಪುರ: ಅಕ್ರಮ ಗೋವಧೆ ಮಾಡಲು ಸಿದ್ಧತೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಗಂಗೊಳ್ಳಿ ಪೊಲೀಸರು ಓರ್ವ ಆರೋಪಿಯನ್ನು ವಶಕ್ಕೆ ಪಡೆದಿದ್ದು, ಇನ್ನೋರ್ವ ಆರೋಪಿ ಪರಾರಿಯಾಗಿರುವ ಘಟನೆ ಕುಂದಾಪುರ ತಾಲೂಕು ಗುಜ್ಜಾಡಿ ಗ್ರಾಮದ  ಮಂಕಿ ಕ್ರಾಸ್ ಬಳಿ ಸೋಮವಾರ ನಡೆದಿದೆ. ಗಂಗೊಳ್ಳಿ ಗ್ರಾಮದ ಸುಲ್ತಾನ್ ಮೊಹಲ್ಲಾ ನಿವಾಸಿ 41 ವರ್ಷದ ಮೊಹಮ್ಮದ್ ಇಬ್ರಾಹಿಂ ಬಂಧಿತ ಆರೋಪಿ. ಈತ ಹಾಗೂ ಇನ್ನೋರ್ವ ಆರೋಪಿ ಸೇರಿಕೊಂಡು ಬೀಡಾಡಿ ದನವನ್ನು ಕಳವು ಮಾಡಿ, ಅದನ್ನು ಗುಜ್ಜಾಡಿ ಗ್ರಾಮದ ಗೇರು ಹಾಡಿಯೊಂದರಲ್ಲಿ […]

ಉಡುಪಿ: ಡಿ.28ರಿಂದ ಜಿಲ್ಲೆಯಲ್ಲಿ ನೈಟ್‌ಕರ್ಫ್ಯೂ ಜಾರಿ; ಸಾರ್ವಜನಿಕರ ಓಡಾಟಕ್ಕೆ ಸಂಪೂರ್ಣ ನಿರ್ಬಂಧ

ಉಡುಪಿ: ಓಮಿಕ್ರಾನ್ ನಿಯಂತ್ರಣ ಕುರಿತಂತೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ನೈಟ್‌ಕರ್ಫ್ಯೂ ಮತ್ತು ಹೊಸ ವರ್ಷಾಚರಣೆ ಕುರಿತ ಮಾರ್ಗಸೂಚಿಗಳನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಆನುಷ್ಠಾನಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲೆಯಾದ್ಯಂತ ಡಿಸೆಂಬರ್ 28 ರಿಂದ ಜನವರಿ 7 ರ ವರಗೆ, ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್‌ಕರ್ಫ್ಯೂ ಜಾರಿಗೊಳಿಸಲಾಗುತ್ತಿದ್ದು, ಈ ಅವಧಿಯಲ್ಲಿ ಅಗತ್ಯ ಚಟುವಟಿಕೆ ಹೊರತುಪಡಿಸಿ ಸಾರ್ವಜನಿಕರ ಓಡಾಟವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ವೈದ್ಯಕೀಯ […]

ಇತಿಹಾಸ ಪ್ರಸಿದ್ಧ ಮುಲ್ಕಿ ಸೀಮೆ “ಮೂಡು – ಪಡು” ಜೋಡುಕರೆ ಅರಸು ಕಂಬಳ ಕೂಟದ ಫಲಿತಾಂಶ ಪ್ರಕಟ

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 06 ಜೊತೆ ಅಡ್ಡಹಲಗೆ: 07 ಜೊತೆ ಹಗ್ಗ ಹಿರಿಯ: 13 ಜೊತೆ ನೇಗಿಲು ಹಿರಿಯ: 27 ಜೊತೆ ಹಗ್ಗ ಕಿರಿಯ: 14 ಜೊತೆ ನೇಗಿಲು ಕಿರಿಯ: 70 ಜೊತೆ ಒಟ್ಟು ಕೋಣಗಳ ಸಂಖ್ಯೆ: 141 ಜೊತೆ •••••••••••••••••••••••••••••••••••••••••••••• ಕನೆಹಲಗೆ: ಪ್ರಥಮ: ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ ದ್ವಿತೀಯ: ಬೇಲಾಡಿ ಬಾವ ಅಶೋಕ್ ಶೆಟ್ಟಿ ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ •••••••••••••••••••••••••••••••••••••••••••••• ಅಡ್ಡ […]