ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಣ್ಣಾಮಲೈ ಭೇಟಿ.

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕುಟುಂಬ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಕುಕ್ಕೆಯ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿ ಅಣ್ಣಾಮಲೈ ಬಳಿಕ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಉಡುಪಿ: ಗೋವಿನ ರುಂಡ ಪತ್ತೆ ಕೇಸು ಕೋಮು ನಿಗ್ರಹ ದಳಕ್ಕೆ ವಹಿಸಲಿ: ಬಿಜೆಪಿ ಮುಖಂಡ ಶ್ರೀನಿಧಿ ಹೆಗ್ಡೆ ಆಗ್ರಹ

ಉಡುಪಿ: ಬ್ರಹ್ಮಾವರ ಕುಂಜಾಲು ರಸ್ತೆಯಲ್ಲಿ ಗೋವಿನ ರುಂಡ ಪತ್ತೆಯಾಗಿದ್ದು ಈ ಮೂಲಕ ಕೋಮು ಸೌಹಾರ್ದಕ್ಕೆ ಧಕ್ಕೆ ತಂದೊಡ್ದುತ್ತಿರುವ ದುಷ್ಕರ್ಮಿಗಳೇ ದ.ಕ., ಉಡುಪಿ ಹಾಗು ಶಿವಮೊಗ್ಗ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋಮು ನಿಗ್ರಹ ದಳಕ್ಕೆ ಮೊದಲ ಟಾಸ್ಕ್ ನೀಡಿದ್ದಾರೆ ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕ್ ಶ್ರೀನಿಧಿ ಹೆಗ್ಡೆ ಹೇಳಿದ್ದಾರೆ. ಹಿಂದುಗಳನ್ನು ಮಾತ್ರ ದಮನಿಸಲು ಕೋಮು ನಿಗ್ರಹ ದಳವನ್ನು ಸ್ಥಾಪಿಸಲಾಗಿದೆ ಎಂದು ಭಾಜಪಾ ಹೇಳುತ್ತಿದ್ದರೂ, ಕಾಂಗ್ರೆಸ್ ಇದನ್ನು ಅಲ್ಲಗಳೆಯುತ್ತಿತ್ತು. ಆದರೆ ಈಗ ಗೋವಿನ ರುಂಡ ಪತ್ತೆಯಾಗಿದ್ದು, ಗೋ ಹತ್ಯೆ ನಡೆದು, […]
ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

ಉಡುಪಿ: ಕರಾವಳಿಯ ಯಕ್ಷಗಾನಕ್ಕೆ ವೈದ್ಯರು, ಇಂಜಿನಿಯರ್‌ಗಳು, ಶಿಕ್ಷಕರು ಸೇರಿದಂತೆ ಉನ್ನತ ಶಿಕ್ಷಣ ಪಡೆದ ಮಂದಿ ಹೆಚ್ಚಿನ ಸಂಖ್ಯೆಯಲ್ಲಿ ಹವ್ಯಾಸಿ ಕಲಾವಿದರಾಗಿ ಬರುತ್ತಿದ್ದಾರೆ. ಅಲ್ಲದೆ ಉತ್ಸಾಹಿ ಯುವ ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿ ವೃತ್ತಿ ಮೇಳಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವುದರಿಂದ ಇಲ್ಲಿನ ಯಕ್ಷಗಾನ ಕಲೆಗೆ ಉತ್ತಮ ಭವಿಷ್ಯವಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಶುಕ್ರವಾರ ಮಂಗಳೂರು ವಿಶ್ವವಿದ್ಯಾಲಯದ ಡಾ.ಯು.ಆರ್.ರಾವ್ ಸಭಾಂಗಣದಲ್ಲಿ ವಿವಿಯ ಡಾ. ಪಿ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ […]
ಉಡುಪಿ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಒಳಕಾಡು; ಶೌಚಾಲಯದ ಹಸ್ತಾಂತರ ಮತ್ತು ಉದ್ಘಾಟನಾ ಸಮಾರಂಭ.

ಉಡುಪಿ: ಸರಕಾರಿ ಮಾದರಿ. ಹಿರಿಯ ಪ್ರಾಥಮಿಕ ಶಾಲೆ ಒಳಕಾಡು ಶಾಲೆಗೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಇವರ ಶಿಫರಾಸಿನ ಮೇರೆಗೆ ಮಂಜೂರಾದ MRPL ನ CSR ಯೋಜನೆಯ ಅನುದಾನದಲ್ಲಿ ನಿರ್ಮಾಣಗೊಂಡ ಹುಡುಗ ಮತ್ತು ಹುಡುಗಿಯರ ಶೌಚಾಲಯದ ಹಸ್ತಾಂತರ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಉದ್ಘಾಟಿಸಿ ಶುಭ ಹಾರೈಸಿದರು. ಸಮಾರಂಭದಲ್ಲಿ MRPL ಸಂಸ್ಥೆಯ ಸೀನಿಯರ್ ಮ್ಯಾನೇಜರ್ ದಯಾನಂದ ಪ್ರಭು, ನಗರಸಭಾ ಉಪಾಧ್ಯಕ್ಷ ಶ್ರೀಮತಿ ರಜನಿ ಹೆಬ್ಬಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಎಲ್ಲಮ್ಮ, […]
ಕುಂಜಾಲು ಮುಖ್ಯ ರಸ್ತೆಯಲ್ಲಿ ಗೋವಿನ ರುಂಡ ಘಟನೆ ದುಷ್ಕರ್ಮಿಗಳನ್ನು 24 ಗಂಟೆಯೊಳಗೆ ಬಂಧಿಸಿ : ಯಶ್ ಪಾಲ್ ಸುವರ್ಣ ಆಗ್ರಹ

ಬ್ರಹ್ಮಾವರ ಕುಂಜಾಲು ಮುಖ್ಯ ರಸ್ತೆಯಲ್ಲಿ ನಿನ್ನೆ ರಾತ್ರಿ ಗೋವಿನ ರುಂಡ ಹಾಗೂ ದೇಹದ ಭಾಗಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇಂದು ಕುಂಜಾಲು ರಾಮ ಮಂದಿರದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರೊಂದಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಸಭೆ ನಡೆಸಿ ಅಮಾನುಷ ಕೃತ್ಯ ನಡೆಸಿದ ವ್ಯಕ್ತಿಗಳನ್ನು 24 ಗಂಟೆಯೊಳಗೆ ಬಂಧಿಸುವಂತೆ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಈ ಘಟನೆಯ ಮೂಲಕ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದ್ದು, ಪೊಲೀಸ್ ಇಲಾಖೆ […]