ಗೃಹಲಕ್ಷ್ಮಿ ಯೋಜನೆ: ಯಾವುದೇ ಲಿಂಕ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇಲ್ಲ; ನಿಗದಿತ ಕೇಂದ್ರಗಳಲ್ಲೇ ಅರ್ಜಿ ಸಲ್ಲಿಕೆ

ಉಡುಪಿ: ಜು. 22ರಿಂದ ಗೃಹ ಲಕ್ಷ್ಮೀ ಯೋಜನೆಗೆ ನಿಮ್ಮ ಸಮೀಪದ ಯಾವುದೇ ಗ್ರಾಮ ಒನ್ ಸೇವಾ ಕೇಂದ್ರ, ಗ್ರಾಮ ವನ್ ಕೇಂದ್ರಕ್ಕೆ ಹೋಗಿ ಅರ್ಜಿ ಸಲ್ಲಿಸಬಹುದು. ನಿನ್ನೆ ಮೊಬೈಲಿಗೆ ಬಂದ ಮೆಸೇಜಿನಲ್ಲಿ ನಿಗದಿತ ದಿನದಂದು ನಿಗದಿತ ಸಮಯಕ್ಕೆ ಸೂಚಿಸಿದ ಗ್ರಾಮ ಒನ್ ಸೇವಾ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರಕ್ಕೆ ಹೋಗಿ ಅರ್ಜಿ ಸಲ್ಲಿಸಬೇಕು ಎಂದು ಇಲಾಖೆ ಆದೇಶ ಹೊರಡಿಸಿತ್ತು. ಈ ಆದೇಶ ರದ್ದಾಗಿದೆ. ಇನ್ನು ಮುಂದೆ ನಿಮ್ಮ ಜಿಲ್ಲಾ ವ್ಯಾಪ್ತಿಯ ಯಾವುದೇ ಗ್ರಾಮ ಒನ್ ಸೇವಾ […]

ಜು. 25 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜುಲೈ 25 ಮತ್ತು 26 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. ಶಿರಿಯಾರ ಶಾಖಾ ವ್ಯಾಪ್ತಿಯಲ್ಲಿ Structure replacement, additional TC Work, Railway Crossing shifting Work ಮತ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 110/11 ಕೆ.ವಿ ಮಧುವನ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬಿಲ್ಲಾಡಿ, ಮಂದಾರ್ತಿ ಮತ್ತು ಶಿರಿಯಾರ ಫೀಡರ್‌ಗಳ ಶಿರಿಯಾರ, ಶಿರೂರು, ಅಚ್ಲಾಡಿ, ಸೈಬ್ರಕಟ್ಟೆ, […]

ಆಗಸ್ಟ್ 1 ರಿಂದ ನಂದಿನ ಹಾಲಿನ ದರ 3 ರೂ ನಷ್ಟು ಹೆಚ್ಚಳ: ಕೆಎಂಎಫ್ ಪ್ರಸ್ತಾವನೆ

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ಆಗಸ್ಟ್ 1 ರಿಂದ ರಾಜ್ಯಾದ್ಯಂತ ನಂದಿನಿ ಹಾಲಿನ ದರವನ್ನು 3 ರೂ ನಷ್ಟು ಹೆಚ್ಚಿಸಲು ಮುಂದಾಗಿದೆ. ಈ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಕಳುಹಿಸಲಾಗಿದೆ ಮತ್ತು ಸಂಪುಟ ಅನುಮೋದನೆ ನಂತರ ಕರ್ನಾಟಕ ಸರ್ಕಾರವು ನಿರ್ಧಾರವನ್ನು ಪ್ರಕಟಿಸಲಿದೆ. ಶುಕ್ರವಾರ ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ ಕರ್ನಾಟಕ ಸಹಕಾರ ಸಚಿವ ಕೆ ರಂಜಣ್ಣ, ಹಾಲಿನ ಉತ್ಪಾದನಾ ವೆಚ್ಚದ ಏರಿಕೆಯನ್ನು ಪರಿಹರಿಸಲು ಮತ್ತು ಉತ್ಪಾದಕರಿಗೆ ಸಹಾಯ ಮಾಡಲು ಹಾಲಿನ ದರವನ್ನು ಹೆಚ್ಚಿಸುವ ಪ್ರಸ್ತಾಪವಿದೆ. […]

ಅರಣ್ಯ ಇಲಾಖೆಯ ಸಸಿಗಳಿಗೆ ಪರಿಷ್ಕೃತ ದರ ನಿಗದಿ

ಉಡುಪಿ: ಸಾರ್ವಜನಿಕರ ವಿತರಣೆಗಾಗಿ ಅರಣ್ಯ ಇಲಾಖೆಯ ಎಲ್ಲಾ ಯೋಜನೆಗಳ ಅಡಿಯಲ್ಲಿ ಬೆಳೆಸಲಾಗುವ ಸಸಿಗಳು ಹಾಗೂ ಕಸಿ ಮಾಡಿದ ಸಸಿಗಳನ್ನು ಮಾರಾಟ ಮಾಡಲು 5*8 ಗಾತ್ರಕ್ಕೆ 2 ರೂ., 6*9 ಗಾತ್ರಕ್ಕೆ 3 ರೂ ಹಾಗೂ 8*12 ಗಾತ್ರಕ್ಕೆ 6 ರೂ. ನಂತೆ ಪರಿಷ್ಕೃತ ದರವನ್ನು ನಿಗದಿಪಡಿಸಲಾಗಿರುತ್ತದೆ. ಜಿಲ್ಲೆಯ ಸಾಮಾಜಿಕ ಅರಣ್ಯ ವಿಭಾಗದಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಜಾತಿ ಮತ್ತು ಅಳತೆಯ ಗಿಡಗಳನ್ನು ಸಾರ್ವಜನಿಕ ವಿತರಣೆಗಾಗಿ ಕಾರ್ಕಳ, ಕುಂದಾಪುರ ಹಾಗೂ ಉಡುಪಿ ಸಾಮಾಜಿಕ ಅರಣ್ಯ ವಲಯದ ವಿವಿಧ ಸಸ್ಯಕ್ಷೇತ್ರಗಳಲ್ಲಿ […]

ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಕೊರಂಗ್ರಪಾಡಿ ಗ್ರಾಮದ ನಿವಾಸಿ ಪ್ರಸನ್ನ (43) ಎಂಬ ವ್ಯಕ್ತಿಯು 2021 ಅಕ್ಟೋಬರ್ 26 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಸಪೂರ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.