ಗೃಹಲಕ್ಷ್ಮಿ ಯೋಜನೆಗಾಗಿ ನೋಂದಣಿ ಕೇಂದ್ರಗಳ ಸ್ಥಾಪನೆ

ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಳ್ಳಲು ಉಡುಪಿ ನಗರಸಭಾ ಕಚೇರಿ ಹಾಗೂ ನಗರಸಭೆಯ ಮಲ್ಪೆ, ಪುತ್ತೂರು, ಮಣಿಪಾಲ ಮತ್ತು ಹೆರ್ಗಾ ಉಪಕಚೇರಿಗಳಲ್ಲಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದ್ದು, ಯೋಜನೆಯಡಿ ನೋಂದಾಯಿಸಿಕೊಳ್ಳಲು ಅರ್ಹರಿರುವ ಉಡುಪಿ ನಗರಸಭಾ ವ್ಯಾಪ್ತಿಯ ಎಲ್ಲಾ ಮಹಿಳಾ ಫಲಾನುಭವಿಗಳು ಸದರಿ ಕೇಂದ್ರಗಳಲ್ಲಿ ನೋಂದಾಯಿಸಿ, ಈ ಯೋಜನೆಯ ಸದುಪಯೋಗಪಡೆದುಕೊಳ್ಳುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಕಲ್ಮಾಡಿ: ಶ್ರೀ ಬಗ್ಗುಪಂಜುರ್ಲಿ ದೈವಸ್ಥಾನದ ಆಡಳಿತ ಸಮಿತಿ ಪದಾಧಿಕಾರಿಗಳ ಆಯ್ಕೆ

ಕಲ್ಮಾಡಿ: ಶ್ರೀ ಬಗ್ಗುಪಂಜುರ್ಲಿ ದೈವಸ್ಥಾನದ ಮುಂದಿನ ಮೂರು ವರ್ಷಗಳ ಅವಧಿಗೆ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಸಾಧು ಸಾಲ್ಯಾನ್ ಪುನರ್ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಚಂದ್ರಶೇಖರ್ ಸೇರಿಗಾರ್ ಬಗ್ಗುಮನೆ ಸಾನಿಕ, ಪ್ರೇಮ್ ನಾಥ್ ಕಲ್ಮಾಡಿ, ಉಪಾಧ್ಯಕ್ಷರಾಗಿ ದಯಾಕರ್.ವಿ. ಸುವರ್ಣ, ಶೇಖರ್ ಎನ್.ಕೋಟ್ಯಾನ್,ಸುಂದರ್ ಜೆ.ಕಲ್ಮಾಡಿ, ಚಂದ್ರಕಾಂತ್ ಕಲ್ಮಾಡಿ, ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಕೊಡವೂರು, ಜತೆ ಕಾರ್ಯದರ್ಶಿಯಾಗಿ ರೋಹಿತ್ ಸುವರ್ಣ, ಕೋಶಾಧಿಕಾರಿಯಾಗಿ ಸುಧಾಕರ್ ವಿ. ಸುವರ್ಣ, ಜತೆ ಕೋಶಾಧಿಕಾರಿಯಾಗಿ ಸಂದೀಪ್ ಸಾಲ್ಯಾನ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮನೋಜ್ ಕಲ್ಮಾಡಿ, ಜತೆ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಅನಿಲ್ […]

ವಾಶ್ ರೂಮಿನಲ್ಲಿ ವೀಡಿಯೋ ಪ್ರಕರಣ: ಭಾರತೀಯ ಜನತಾ ಪಕ್ಷದಿಂದ ಪ್ರತಿಭಟನಾ ಮೆರವಣಿಗೆ

ಉಡುಪಿ: ಖಾಸಗಿ ಕಾಲೇಜಿನ ವಾಶ್ ರೂಮಿನಲ್ಲಿ ರಹಸ್ಯ ಕ್ಯಾಮರಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಕ್ಷವು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿತು. ಶಂಕಿತರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ ಪ್ರತಿಭಟನಾಕಾರರು ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಲಾಗುತ್ತಿದೆ. ಸೂಕ್ತ ತನಿಖೆಗೆ ಆಗ್ರಹಿಸುತ್ತಿದ್ದೇವೆ ಎಂದರು. ಶುಕ್ರವಾರದಂದು ಬೆಳಿಗ್ಗೆ ಬಿಜೆಪಿ ಕಚೇರಿಯಿಂದ ಎಸ್‌ಪಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದ ಪ್ರತಿಭಟನಾ ನಿರತರು ನ್ಯಾಯಕ್ಕಾಗಿ ಒತ್ತಾಯಿಸಿದರು. ಪಕ್ಷದ ಶಾಸಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. […]

ಬ್ರಹ್ಮಾವರ: ಜು.29 ರಂದು ಸೈಬರ್ ಅಪರಾಧ ಜಾಗೃತಿ ಕಾರ್ಯಾಗಾರ

ಬ್ರಹ್ಮಾವರ: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಜತ ಮಹೋತ್ಸವ ಸಮಿತಿ ಇದರ ಆಶ್ರಯದಲ್ಲಿ ಜು.29 ರಂದು ಬ್ರಹ್ಮಾವರದ ಮದರ್ ಪ್ಯಾಲೇಸ್ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ಸೈಬರ್ ಅಪರಾಧ ಜಾಗೃತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಸಂಪನ್ಮೂಲ ವ್ಯಕ್ತಿಯಾಗಿ ಸೆನ್ ಪೊಲೀಸ್ ಠಾಣೆ ಉಡುಪಿ ಇದರ ಪೊಲೀಸ್ ನಿರೀಕ್ಷಕ ಮಂಜುನಾಥ್ ಭಾಗವಹಿಸಲಿದ್ದಾರೆ.

ವಾಶ್‌ರೂಮ್‌ನಲ್ಲಿ ಹಿಡನ್ ಕ್ಯಾಮರಾ ಇಲ್ಲ; ಘಟನೆಗೆ ಕೋಮು ಬಣ್ಣ ಹಚ್ಚಬೇಡಿ: ಖುಷ್ಬು ಸುಂದರ್

ಉಡುಪಿ: ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ಸದಸ್ಯೆ ಮತ್ತು ಬಿಜೆಪಿ ನಾಯಕಿ ಖುಷ್ಬು ಸುಂದರ್ ಗುರುವಾರ ಖಾಸಗಿ ಪ್ಯಾರಾಮೆಡಿಕಲ್ ಕಾಲೇಜಿನ ವಾಶ್‌ರೂಮ್‌ನಲ್ಲಿ ಹಿಡನ್ ಕ್ಯಾಮೆರಾ ಇದ್ದ ವಿಚಾರವನ್ನು ತಳ್ಳಿಹಾಕಿದ್ದು ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಹೇಳಿದ್ದಾರೆ. ಖುಷ್ಬೂ ಪ್ರಕರಣದ ತನಿಖೆಗಾಗಿ ಉಡುಪಿಯ ನೇತ್ರ ಜ್ಯೋತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ಗೆ ಭೇಟಿ ನೀಡಿ ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸಿದ್ದಾರೆ. ಶೌಚಾಲಯಗಳಲ್ಲಿ ಹಿಡನ್‌ ಕ್ಯಾಮೆರಾಗಳಿದ್ದವು ಎಂಬ ಮಾತುಗಳು ಕೇಳಿಬರುತ್ತಿವೆ. ಅದರಲ್ಲಿ ಸತ್ಯಾಂಶವಿಲ್ಲ. ಸುಳ್ಳು ವಿಡಿಯೋಗಳು ಹರಿದಾಡುತ್ತಿವೆ. ಅದೊಂದು […]