ವಾಕ್​ ಇನ್​ ಇಂಟರ್​ವ್ಯೂ :ಶಿವಮೊಗ್ಗದ ಪಶು ವೈದ್ಯಕೀಯ ಕಾಲೇಜಿನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ ;

ಶಿವಮೊಗ್ಗ: ಗುತ್ತಿಗೆ ಆಧಾರದಡಿ ಒಟ್ಟು 12 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.ಪಶು ವೈದ್ಯಕೀಯ ಕಾಲೇಜಿನಲ್ಲಿ ಖಾಲಿ ಇರುವ ವಿವಿಧ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಅಭ್ಯರ್ಥಿಗಳನ್ನು ವಾಕ್​ ಇನ್​ ಇಂಟರ್​ವ್ಯೂ ಮೂಲಕ ಆಯ್ಕೆ ಮಾಡಲಾಗುತ್ತದೆ. ವಿದ್ಯಾರ್ಹತೆ : ಅಭ್ಯರ್ಥಿಗಳು ಬಿಎಸ್ಸಿ ಪದವಿ, ಪಿಎಚ್​ಡಿ ಪದವಿ ಪಡೆದಿರಬೇಕು. ಯಾವುದೇ ವಯೋಮಿತಿ ಇಲ್ಲ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ ಹುದ್ದೆಗಳ ವಿವರ : ಕರ್ನಾಟಕ ಪಶು […]

ಸಿಬಿಐ ಬಂಧಿತ ಮೂವರು ಅಧಿಕಾರಿಗಳು ಸೇರಿ 7 ರೈಲ್ವೆ ನೌಕರರ ಅಮಾನತು: ಒಡಿಶಾ ತ್ರಿವಳಿ ರೈಲು ಅಪಘಾತ ಕೇಸ್​

ಭುವನೇಶ್ವರ(ಒಡಿಶಾ) ತಪ್ಪಾದ ಸಿಗ್ನಲಿಂಗ್​ ಮತ್ತು ಸಿಬ್ಬಂದಿ ಅಚಾತುರ್ಯದಿಂದ ಅಪಘಾತಕ್ಕೆ ಕಾರಣವಾಗಿದ್ದ ಏಳು ಉದ್ಯೋಗಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಆಗ್ನೇಯ ರೈಲ್ವೆ (ಎಸ್‌ಇಆರ್) ಪ್ರಧಾನ ವ್ಯವಸ್ಥಾಪಕ ಅನಿಲ್ ಕುಮಾರ್ ಮಿಶ್ರಾ ಬುಧವಾರ ತಿಳಿಸಿದ್ದಾರೆ.ಜೂನ್ 2 ರಂದು 300 ಜನರನ್ನು ಬಲಿ ಪಡೆದ ಒಡಿಶಾದ ಬಾಲಾಸೋರ್​ ಜಿಲ್ಲೆಯ ಬಹನಾಗ ನಿಲ್ದಾಣದಲ್ಲಿ ನಡೆದ ತ್ರಿವಳಿ ರೈಲು ಅಪಘಾತ ದುರಂತಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿತ ಮೂವರು ಸಿಬ್ಬಂದಿ ಸೇರಿ ಕನಿಷ್ಠ ಏಳು ರೈಲ್ವೆ ಉದ್ಯೋಗಿಗಳನ್ನು ಆಗ್ನೇಯ […]

ನಾಳೆ ಬೆಂಗಳೂರು ನಗರದ ಬಹುತೇಕ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ

ಬೆಂಗಳೂರು: ದುರಸ್ತಿ ಕಾಮಗಾರಿಯ ಹಿನ್ನೆಲೆಯಲ್ಲಿ ಕಾವೇರಿ 1 ಹಾಗೂ 2ನೇ ಹಂತದ ನೀರು ಪೂರೈಕೆಯಾಗುವ ಪ್ರದೇಶಗಳಲ್ಲಿ ನಾಳೆ ಜುಲೈ 13 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ನೇತಾಜಿ ನಗರ, ನಾಗಮ್ಮ ನಗರ, ಕೇಶವ ನಗರ, ಕೆ.ಪಿ. ಅಗ್ರಹಾರ, ರಾಘವೇಂದ್ರ ಕಾಲೋನಿ, ಟಿಪ್ಪು ನಗರ, ಚಾಮರಾಜಪೇಟೆ, ಬ್ಯಾಂಕ್ ಕಾಲೋನಿ, ಗುರುರಾಜ್ ಲೇಔಟ್, ವಿವೇಕಾನಂದ ನಗರ, ಎನ್.ಆರ್. ಕಾಲೋನಿ, ಬನಶಂಕರಿ 1ನೇ ಹಂತ, ಶಾಂತಲಾ ನಗರ, ಶಾಂತಿ ನಗರದ ಸುತ್ತಮುತ್ತ ಸರಬರಾಜು ಸ್ಥಗಿತವಾಗಲಿದೆ ಎಂದು ತಿಳಿಸಿದ್ದಾರೆ.ಬೆಂಗಳೂರು ನಗರದ ಬಹುತೇಕ ಪ್ರದೇಶಗಳಲ್ಲಿ […]

ಪ್ರಾಕೃತಿಕ ವಿಕೋಪಗಳಿಗೆ ತಕ್ಷಣ ಸ್ಪಂದಿಸಿ: ರವಿ ಅಂಗಡಿ

ಉಡುಪಿ: ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಉಡುಪಿ ತಾಲೂಕಿನಲ್ಲಿ ವಿಕೋಪಗಳಿಂದ ಜನ ಮತ್ತು ಜಾನುವಾರುಗಳ ಜೀವ ಹಾನಿಯಾಗದಂತೆ, ಅಧಿಕಾರಿಗಳು ತಕ್ಷಣ ಸ್ಪಂದಿಸಿ ಸೂಕ್ತ ರಕ್ಷಣೆ ಒದಗಿಸುವಂತೆ ತಹಸೀಲ್ದಾರ್ ರವಿ ಎಸ್ ಅಂಗಡಿ ಹೇಳಿದರು. ಅವರು ಇಂದು ಉಡುಪಿ ತಾಲೂಕು ಕಚೇರಿಯಲ್ಲಿ ನಡೆದ, ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲೂಕಿನ ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿ ಲಭ್ಯವಿದ್ದು, ಯಾವುದೇ ಸಂದರ್ಭದಲ್ಲಿ ಸಾರ್ವಜನಿಕರ ನೆರವಿಗೆ ಸ್ಪಂದಿಸಬೇಕು. ತಮ್ಮ ಮೊಬೈಲ್‌ಗಳನ್ನು ಸ್ವಿಚ್ ಆಫ್ ಮಾಡದೇ […]

PUBG ಆನ್ ಲೈನ್ ಗೇಮ್ ಪ್ರೇಮ ಪ್ರಕರಣ: ಪಾಕಿಸ್ತಾನಿ ಮಹಿಳೆಯ ನಡೆಯ ಸುತ್ತ ಅನುಮಾನದ ಹುತ್ತ

ನೋಯ್ಡಾ: ಆನ್ಲೈನ್ ಗೇಮಿಂಗ್ PUBG ಮೂಲಕ ಪರಿಚಯವಾಗಿ ಪಾಕಿಸ್ತಾನದಿಂದ ಭಾರತಕ್ಕೆ ತನ್ನ ನಾಲ್ಕು ಮಕ್ಕಳೊಂದಿಗೆ ನೇಪಾಳದ ಮೂಲಕ ಅಕ್ರಮವಾಗಿ ನುಸುಳಿರುವ ಸೀಮಾ ಹೈದರ್ ಸುತ್ತ ಇದೀಗ ಅನುಮಾನದ ಹುತ್ತ ದಟ್ಟವಾಗಿ ಬೆಳೆದಿದೆ. ರಾಷ್ಟ್ರರಾಜಧಾನಿ ದೆಹಲಿಗೆ ಹೊಂದಿಕೊಂಡಿರುವ ಗ್ರೇಟರ್ ನೋಯ್ಡಾದ ರಬುಪುರದ ಸಚಿನ್ ಎಂಬ ವ್ಯಕ್ತಿಯ ಪ್ರೇಮದಲ್ಲಿ ಬಿದ್ದ ಸೀಮಾ ಹೈದರ್ ಇದೀಗ ತನಿಖಾ ಸಂಸ್ಥೆಗಳ ರಾಡಾರ್‌ನಲ್ಲಿದ್ದಾರೆ. ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ ಆರೋಪದಲ್ಲಿ ಬಂಧಿತರಾಗಿರುವ ಸೀಮಾ ಹೈದರ್ ಈಗ ಹಲವು ಏಜೆನ್ಸಿಗಳ ವಿಚಾರಣೆಯನ್ನು ಎದುರಿಸಿದ್ದಾರೆ. ವಾಸ್ತವವಾಗಿ ಸೀಮಾದ ಮಾತನಾಡುವ […]