ಮೆಸ್ಕಾಂ ನೂತನ ವ್ಯವಸ್ಥಾಪಕ ನಿರ್ದೇಶಕಿಯಾಗಿ ಡಿ.ಪದ್ಮಾವತಿ ನೇಮಕ

ಮಂಗಳೂರು: ಡಿ.ಪದ್ಮಾವತಿ ಅವರು ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್‌ನ (ಮೆಸ್ಕಾಂ) ನೂತನ ವ್ಯವಸ್ಥಾಪಕ ನಿರ್ದೇಶಕಿಯಾಗಿ ಬುಧವಾರದಂದು ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಅವರು ಮೂರು ವರ್ಷಗಳ ಕಾಲ ಮೆಸ್ಕಾಂ ನಿರ್ದೇಶಕರಾಗಿ (ತಾಂತ್ರಿಕ) ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪದ್ಮಾವತಿ ಅವರು ಕಲಬುರಗಿ, ಮೈಸೂರು ಮತ್ತು ದಕ್ಷಿಣ ಕನ್ನಡದ ವಿದ್ಯುತ್ ಸರಬರಾಜು ಕಂಪನಿಗಳ ಸಹಾಯಕ ಇಂಜಿನಿಯರ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಕಾರ್ಯನಿರ್ವಾಹಕ ಇಂಜಿನಿಯರ್, ಸೂಪರಿಂಟೆಂಡಿಂಗ್ ಇಂಜಿನಿಯರ್ ಮತ್ತು ಮುಖ್ಯ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸಿದ್ದಾರೆ ಎಂದು ಮೆಸ್ಕಾಂ […]

ಜುಲೈ 11 ಮತ್ತು 13 ವಿವಿಧೆಡೆ ವಿದ್ಯುತ್ ವ್ಯತ್ಯಯ

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜುಲೈ 11 ಮತ್ತು 13 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 110/33/11 ಕೆ.ವಿ ಹಿರಿಯಡ್ಕ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಪೆರ್ಡೂರು ಫೀಡರ್ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಪುತ್ತಿಗೆ, ಪಕ್ಕಾಲು, ಪೆರ್ಡೂರು ಪೇಟೆ, ಮುತ್ತೂರ್ಮೆ, ಕುಕ್ಕೆಹಳ್ಳಿ, ಪಾಡಿಗಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜುಲೈ 11 ರಂದು ಬೆಳಗ್ಗೆ 9 ರಿಂದ ಸಂಜೆ 5.30 ರ […]

ಅಕ್ರಮ ಆಸ್ತಿ ಗಳಿಸಿದ ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಉಡುಪಿ: ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿಯನ್ನು ಹೊಂದಿದ ಸರಕಾರಿ ಅಧಿಕಾರಿಗೆ ಜಿಲ್ಲಾ ಸತ್ರ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಸರಕಾರಿ ಅಧಿಕಾರಿಯಾದ ಆರೋಪಿ ಅಬ್ದುಲ್ ಅಜೀಜ್ ಅವರು ಕುಂದಾಪುರ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಬಲ್ಲ ಮೂಲಗಳ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿಯನ್ನು ಹೊಂದಿರುವ ಬಗ್ಗೆ ಅಂದಿನ ಪಿ.ಐ ಕೆ.ಯು. ಬೆಳ್ಳಿಯಪ್ಪ ಇವರು ಮಾಹಿತಿಯನ್ನು ಸಂಗ್ರಹಿಸಿ, ಪಿರ್ಯಾದು ನೀಡಿದ ಮೇರೆಗೆ ಅಂದಿನ ಮಂಗಳೂರು ಪೊಲೀಸ್ ವಿಭಾಗದ ಎಸ್.ಪಿ. ಧರ್ಮರಾಜ್ ಎ.ಜಿ. ರವರು ಪ್ರಕರಣ […]

ಕರ್ನಾಟಕದಲ್ಲಿ ಮಂಡನೆಯಾಗಿರುವ ಬಜೆಟ್ ಗಳ ಪೈಕಿ ಶ್ರೇಷ್ಠ ಬಜೆಟ್: ರಮಾನಾಥ ರೈ

ಬಂಟ್ವಾಳ: ಸಿಎಂ ಸಿದ್ದರಾಮಯ್ಯರವರು ಮಂಡಿಸಿದ 2023-24ನೇ ಸಾಲಿನ ಬಜೆಟ್ ಈವರೆಗೆ ಕರ್ನಾಟಕದಲ್ಲಿ ಮಂಡನೆಯಾಗಿರುವ ಬಜೆಟ್’ಗಳ ಪೈಕಿ ಶ್ರೇಷ್ಠ ಬಜೆಟ್. ಈ ಬಜೆಟ್ ಅಪರೂಪದಲ್ಲೇ ಅಪರೂಪದ ಬಜೆಟ್. ಐದು ಗ್ಯಾರಂಟಿ ಯೋಜನೆಗಳಿಗೆ ಅನುದಾನ ಒದಗಿಸುವುದರ ಜೊತೆಗೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳ ಪೈಕಿ 76 ಪ್ರಣಾಳಿಕೆಗಳನ್ನು ಈ ಬಜೆಟ್ ನಲ್ಲಿ ಜಾರಿ ಮಾಡಿ ಘೋಷಣೆ ಮಾಡಲಾಗಿದೆ ಎಂದು ರಮಾನಾಥ್ ರೈ ಹೇಳಿದ್ದಾರೆ. ಈ ಬಜೆಟ್ ಎಲ್ಲಾ ವರ್ಗದ ಜನರ ಪರವಾದ ಬಜೆಟ್ ಆಗಿದ್ದು, ಸಮಾಜ ಸ್ನೇಹಿ, ಮಹಿಳಾ […]

ಕಾಂಗ್ರೆಸ್ ನದ್ದು ನಿರಾಶಾದಾಯಕ ಗೊಂದಲಭರಿತ ಬಜೆಟ್: ನಯನಾ ಗಣೇಶ್

ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಈ ಬಾರಿಯ ಬಜೆಟ್ ನಿರಾಶಾದಾಯಕವಾಗಿದ್ದು, ಬಿಜೆಪಿ ಸರ್ಕಾರದ ಅನೇಕ ಜನಪರ ಯೋಜನೆಗಳಿಗೆ ತಿಲಾಂಜಲಿ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಬಜೆಟ್ ನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೈ ಬಿಡುವ ಮೂಲಕ ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿಸುವ ಕಾರ್ಯ ಮಾಡಿದೆ. ವಿವೇಕ ಶಾಲೆ ಅಭಿವೃದ್ಧಿ ಯೋಜನೆ ರದ್ದು, ಅಗ್ನಿವೀರ್ ತರಬೇತಿ ಯೋಜನೆ, ಸ್ವಾಮಿ ವಿವೇಕಾನಂದರ ಯುವಶಕ್ತಿ ಯೋಜನೆ, ಮಹಿಳಾ ಸ್ತ್ರೀ ಸಾಮರ್ಥ್ಯ ಯೋಜನೆ, […]