ಅತ್ಯುತ್ತಮ ನಟಿ ಪ್ರಶಸ್ತಿಗೆ ನಾಮಿನೇಟ್​ ಆದ ಅಕ್ಷತಾ ಪಾಂಡವಪುರ ‘ಮೆಲ್ಬೋರ್ನ್ ಇಂಡಿಯನ್ ಚಿತ್ರೋತ್ಸವ’ಕ್ಕೆ ‘ಕೋಳಿ ಎಸ್ರು’ ಆಯ್ಕೆ .

ಇದೀಗ ನಟಿ ಅಕ್ಷತಾ ಪಾಂಡವಪುರ ಅಭಿನಯದ ಖ್ಯಾತ ಕಥೆಗಾರ ಕಾ.ತಾ ಚಿಕ್ಕಣ್ಣನವರ ಕಥೆಯಾಧಾರಿತ ಚಂಪಾ ಪಿ ಶೆಟ್ಟಿಯವರ ನಿರ್ದೇಶನದ ‘ಕೋಳಿ ಎಸ್ರು’ ಸಿನಿಮಾಗೆ ಪ್ರಶಸ್ತಿಗಳ ಸುರಿಮಳೆ ಆಗಿದೆ. ಇದೇ ಆಗಸ್ಟ್​ನಲ್ಲಿ ಆಸ್ಟ್ರೇಲಿಯಾದ ‘ಮೆಲ್ಬೋರ್ನ್ ಇಂಡಿಯನ್ ಚಿತ್ರೋತ್ಸವ’ದಲ್ಲಿ ನಮ್ಮ ಏಪ್ರಾನ್ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಿಸಿರುವ, ‘ಕೋಳಿ ಎಸ್ರು’ ಸಿನೆಮಾ ಆಯ್ಕೆಗೊಂಡಿದೆ.ಕನ್ನಡ ಚಿತ್ರರಂಗದಲ್ಲಿ ಕಮರ್ಷಿಯಲ್ ಹಾಗೂ ಅದ್ಧೂರಿ ಮೇಕಿಂಗ್ ಸಿನಿಮಾಗಳ ಮಧ್ಯೆ ಪ್ರಯೋಗಾತ್ಮಕ ಚಿತ್ರಗಳು ಆಗಾಗ ಸದ್ದು ಮಾಡುತ್ತವೆ.’ಮೆಲ್ಬೋರ್ನ್ ಇಂಡಿಯನ್ ಚಿತ್ರೋತ್ಸವ’ಕ್ಕೆ ‘ಕೋಳಿ ಎಸ್ರು’ ಸಿನಿಮಾ ಆಯ್ಕೆಯಾಗಿದೆ. ಜೊತೆಗೆ ಅಕ್ಷತಾ […]

ಟೊಮೆಟೊ ಬೆಲೆ ಆಯ್ತು, ಈಗ ಹುಣಸೆಯ ಬೆಲೆಯೂ ಹೆಚ್ಚಳ

ಬೆಂಗಳೂರು: ನೂರರ ಗಡಿಯಲ್ಲಿದ್ದ ಹುಣಸೆ ಬೆಲೆ ಇದೀಗ 200ರ ಗಡಿ ತಲುಪಿದೆ.ಟೊಮೆಟೊ ದರ ಗಗನಕ್ಕೇರಿರುವ ಬೆನ್ನಲ್ಲೇ ಇದೀಗ ಹುಣಸೆ ಹುಳಿ ಬೆಲೆಯೂ ಏಕಾಏಕಿ ಏರಿಕೆಯಾಗುತ್ತಿದೆ. ಇದರಿಂದ ದಿನನಿತ್ಯ ಬಳಕೆ ಮಾಡುವ ಆಹಾರ ಪದಾರ್ಥಗಳು ಒಂದೊಂದಾಗಿ ಜನಸಾಮಾನ್ಯರ ಕೈಗೆಟಕದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಒಂದು ವಾರದಿಂದೀಚೆಗೆ ಕೆಜಿಗೆ 90 ರೂ. ಇದ್ದ ಹುಣಸೆ ಬೆಲೆ ಈಗ 140ರಿಂದ 150 ರೂ.ಗೆ ಮಾರಾಟವಾಗುವ ಮೂಲಕ 50 ರೂ. ಹೆಚ್ಚಳವಾಗಿದೆ. ಇನ್ನು ಅತುಅತ್ತಮ ಗುಣಮಟ್ಟದ ಹುಣಸೆ ದರ 200ರಿಂದ 220 ರೂ ತಲುಪಿದೆ. ವರದಿಗಳ ಪ್ರಕಾರ, ಹುಳಿ ರುಚಿಯನ್ನು ಹೆಚ್ಚು […]

ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಕೆ ಸಿಬ್ಬಂದಿ ಕೈಗೆ ಬಳೆ ತೊಡುವಂತಿಲ್ಲ..!

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿಕೆ ಸಿಬ್ಬಂದಿ ಕೈಗೆ ಬಳೆತೊಡುವಂತಿಲ್ಲ ಎಂದು ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು, ಕಾರ್ಯಕರ್ತೆಯರು ಮತ್ತು ಹಿಂದು ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಮಧ್ಯಾಹ್ನದ ಬಿಸಿಯೂಟ ತಯಾರಿಕೆಯಲ್ಲಿನ ಗುಣಮಟ್ಟ ಸುರಕ್ಷತೆ, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸಿಬ್ಬಂದಿ ಪಾಲಿಸಬೇಕಾದ ನಿಯಮಗಳು ಕುರಿತಂತೆ ನೂತನ ಮಾರ್ಗಸೂಚಿಯಲ್ಲಿ ಶಿಕ್ಷಣ ಇಲಾಖೆ ಈ ನಿಯಮವನ್ನು ಆದೇಶಿಸಿದೆ. ಬಿಸಿಯೂಟ ತಯಾರು ಮಾಡುವ ಅಡುಗೆ ಸಿಬ್ಬಂದಿ ಬಹುತೇಕ ಮಹಿಳೆಯರಿದ್ದು ಹೆಚ್ಚಿನ ಎಲ್ಲರೂ ಬಳೆ ಮತ್ತು ಬಿಂದಿಗೆ ಧರಿಸುತ್ತಾರೆ. ಮಕ್ಕಳ ಮೇಲೆ […]

ಉಜಿರೆ: ರುಡ್ ಸೆಟ್ ವತಿಯಿಂದ ಉಚಿತ ಫೋಟೋಗ್ರಫಿ ಮತ್ತು ವಿಡೀಯೋಗ್ರಫಿ ತರಬೇತಿ

ಉಜಿರೆ: ಧರ್ಮಸ್ಥಳ ಸಮೀಪದ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗಾಕಾಂಕ್ಷಿಗಳಿಗಾಗಿ ಒಂದು ತಿಂಗಳ ಉಚಿತ ಫೋಟೋಗ್ರಫಿ ಮತ್ತು ವಿಡೀಯೋಗ್ರಫಿ ತರಬೇತಿ ನಡೆಸಲಾಗುವುದು. ತರವೇತಿಯು ಆ.7 ರಿಂದ ಸೆ.5 ರವರೆಗೆ ನಡೆಯಲಿದ್ದು, 18 ರಿಂದ 45 ವರ್ಷಗಳವರು ಭಾಗವಹಿಸಬಹುದಾಗಿದ್ದು, ಊಟ ವಸತಿ ಸಮವಸ್ತ್ರ ಮತ್ತು ಟೂಲ್ ಕಿಟ್ ಅನ್ನು ಸಂಸ್ಥೆಯ ವತಿಯಿಂದ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಉಜಿರೆಯ ರುಡ್ ಸೆಟ್ ಸಂಸ್ಥೆಯನ್ನು ಸಂಪರ್ಕಿಸಬಹುದು.

ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಪಂಡಿತ ಪ್ರಶಸ್ತಿಗೆ ರೈತ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ, ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ರೈತರು ಹಾಗೂ ರೈತ ಮಹಿಳೆಯರು ಜುಲೈ 24 ರ ಒಳಗೆ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ […]