ಕಂಗನಾ ರಣಾವತ್ ‘ತೇಜಸ್’ ಮತ್ತು ಟೈಗರ್ ಶ್ರಾಫ್ ‘ಗಣಪತ್ ಭಾಗ-1’ ಎರಡು ಸಿನಿಮಾ ಒಂದೇ ದಿನ ತೆರೆಗೆ

ಮುಂಬೈ: ತೇಜಸ್ ಚಿತ್ರದ ಮೂಲಕ ಕಂಗನಾ ರಣಾವತ್ ಮತ್ತೆ ದೊಡ್ಡ ಪರದೆಯ ಮೇಲೆ ಬರಲು ಸಜ್ಜಾಗಿದ್ದಾರೆ. ತಯಾರಕರು ಬುಧವಾರ ತೇಜಸ್‌ನ ಬಿಡುಗಡೆಯ ದಿನಾಂಕವನ್ನು ಘೋಷಿಸಿದರು. ಕಂಗನಾ ವಾಯುಪಡೆಯ ಸೇನಾ ಸಮವಸ್ತ್ರದಲ್ಲಿರುವ ಕೆಲವು ಗ್ಲಿಂಪ್‌ಗಳನ್ನು ಸಹ ಹಂಚಿಕೊಂಡಿದ್ದಾರೆ. ಟೈಗರ್ ಶ್ರಾಫ್ ಮತ್ತು ಕೃತಿ ಸನೋನ್ ಅಭಿನಯದ ಆಕ್ಷನ್ ಥ್ರಿಲ್ಲರ್ ‘ಗಣಪತ್ ಭಾಗ-1’ ಚಿತ್ರದೊಂದಿಗೆ ಕಂಗನಾ ಅವರ ‘ತೇಜಸ್’ ಸಿನಿಮಾ ಒಂದೇ ದಿನ ಬಿಡುಗಡೆಯಾಗಲಿದೆ.ನಟಿ ಕಂಗನಾ ರಣಾವತ್ ಮುಂದಿರುವ ‘ತೇಜಸ್’ ನಿರ್ಮಾಪಕರು ಬುಧವಾರ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ. ಕಂಗನಾ […]

ಕ್ಯಾನ್ಸರ್​ನಿಂದ ಬಳಲುತ್ತಿದ್ದ ಪುಟ್ಟ ಬಾಲಕಿಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ನಟ ಸುದೀಪ್

ಕನ್ನಡ ಚಿತ್ರರಂಗ ಅಲ್ಲದೇ ಭಾರತೀಯ ಸಿನಿಮಾ ರಂಗದಲ್ಲಿ ಗುರುತಿಸಿಕೊಂಡಿರುವ ಕನ್ನಡ ನಟ ಎಂದರೆ ಅದು ಅಭಿನಯ ಚಕ್ರವರ್ತಿ ಸುದೀಪ್.ಬೆಂಗಳೂರಿನ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪುಟ್ಟ ಬಾಲಕಿಯನ್ನು ನಟ ಸುದೀಪ್​ ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಅವರು ಕೇವಲ ತೆರೆ ಮೇಲೆ ಮಾತ್ರವಲ್ಲ, ತೆರೆ ಹಿಂದೆಯೂ ರಿಯಲ್ ಹೀರೋ ಅಂತಾರೆ ಅಭಿಮಾನಿಗಳು. ಕಷ್ಟದಲ್ಲಿದ್ದವರಿಗೆ ಜೊತೆಯಾಗಿ ನಿಲ್ಲುವ ಕಿಚ್ಚನ ಹೃದಯವಂತಿಕೆಗೆ, ಸರಳತೆಗೆ ಅಭಿಮಾನಿಗಳು ಸದಾ ಮೆಚ್ಚುಗೆ ಸೂಚಿಸುತ್ತಾರೆ. ಮೆಚ್ಚಿನ ನಟನನ್ನು […]

ಇಮ್ಯುನೊಥೆರಪಿಯಿಂದ ಮೂಲಕ ತೀವ್ರ ಹಂತದ ಯಕೃತ್ತಿನ ಕ್ಯಾನ್ಸರ್​ ಗುಣ

ಹೈದರಾಬಾದ್: ಯಕೃತ್ತಿನ ಕ್ಯಾನ್ಸರ್‌ ಮೂರು ಮತ್ತು ನಾಲ್ಕನೇ ಹಂತಕ್ಕೆ ತಲುಪಿದ ರೋಗಿಗಳಲ್ಲಿ ಇಮ್ಯುನೊಥೆರಪಿ ಮೂಲಕ ರೋಗವನ್ನು ಗುಣಪಡಿಸಬಹುದು ಎಂದು ಅಧ್ಯನವೊಂದು ವಿವರಿಸಿದೆ.ಯಕೃತ್ತಿನ ಕ್ಯಾನ್ಸರ್‌ ಮೂರು ಮತ್ತು ನಾಲ್ಕನೇ ಹಂತಕ್ಕೆ ತಲುಪಿದ ರೋಗಿಗಳಲ್ಲಿ ಇಮ್ಯುನೊಥೆರಪಿ ಮೂಲಕ ರೋಗವನ್ನು ಗುಣಪಡಿಸಬಹುದು ಎಂದು ಅಧ್ಯನವೊಂದರಲ್ಲಿ ಕಂಡುಬಂದಿದೆ. ಈ ಅಧ್ಯಯನದ ವಿವರಗಳನ್ನು INASAL (ಇಂಡಿಯನ್ ನ್ಯಾಷನಲ್ ಅಸೋಸಿಯೇಷನ್ ಫಾರ್ ಸ್ಟಡಿ ಆಫ್ ದಿ ಲಿವರ್) ದಿಂದ ಪ್ರಕಟವಾಗುವ ಜರ್ನಲ್ ಆಫ್ ಕ್ಲಿನಿಕಲ್ ಅಂಡ್ ಎಕ್ಸ್‌ಪೆರಿಮೆಂಟಲ್ ಹೆಪಟಾಲಜಿಯಲ್ಲಿ ಪ್ರಕಟಿಸಲಾಗಿದೆ. ಯಕೃತ್ತಿನ ಕ್ಯಾನ್ಸರ್ ಸಾಮಾನ್ಯವಾಗಿ ನಾಲ್ಕನೇ […]

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಿಡಿಒಗಳ ಹುದ್ದೆಗೆ ಶೀಘ್ರ ನೇಮಕ: ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

ಬೆಂಗಳೂರು :ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಬಸನಗೌಡ ದದ್ದಲ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗ್ರಾಮ ಪಂಚಾಯಿತಿಗಳಿಗೆ 6021 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 5361 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಪಂಚಾಯಿತಿ ಅಭಿವೃದ್ಧಿ (ಪಿಡಿಒ) ಅಧಿಕಾರಿಗಳ ನೇಮಕಾತಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಸಭೆಯಲ್ಲಿ ಇಂದು ಭರವಸೆ ನೀಡಿದರು.ಹೈದರಾಬಾದ್ ಕರ್ನಾಟಕಕ್ಕೆ ಅಗತ್ಯವಿರುವ ಹುದ್ದೆಗಳು ಸೇರಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು […]

ಎಪಿಎಂಸಿ ತಿದ್ದುಪಡಿ ಸೇರಿದಂತೆ ವಿಧಾನಸಭೆಯಲ್ಲಿ 6 ವಿಧೇಯಕಗಳ ಮಂಡನೆ

ಬೆಂಗಳೂರು: ಶಾಸನ ರಚನಾ ಕಲಾಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2023ನೇ ಸಾಲಿನ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ತಿದ್ದುಪಡಿ ವಿಧೇಯಕ ಹಾಗೂ 2023ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು2023ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ವಿಧೇಯಕ ಸೇರಿದಂತೆ 6 ವಿಧೇಯಕಗಳನ್ನು ವಿಧಾನಸಭೆಯಲ್ಲಿ ಬುಧವಾರ ಮಂಡಿಸಲಾಯಿತು.2023ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ತಿದ್ದುಪಡಿ ಸೇರಿದಂತೆ 6 ವಿಧೇಯಕಗಳನ್ನು ವಿಧಾನಸಭೆಯಲ್ಲಿ ಬುಧವಾರ […]