ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನೀರಿನ ಬಳಕೆ, ಸಂರಕ್ಷಣೆಯ ಬಗ್ಗೆ ಅರಿವು ಕಾರ್ಯಕ್ರಮ ಜರಗಿತು. ನೀರಿಲ್ಲದೆ ಬದುಕಲು ಸಾಧ್ಯವಿಲ್ಲ ಈ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸುವ ಸಲುವಾಗಿ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದಿಂದ “ಪ್ರತಿ ಹನಿಯ ಎಣಿಕೆ “ಎನ್ನುವ ವಿಚಾರದ ಕುರಿತು ಕಾರ್ಯಕ್ರಮ ನಡೆಸಲಾಯಿತು.
ಬ್ರಹ್ಮಾವರ ಕೃಷಿ ಕೇಂದ್ರದ ಸಹಪ್ರಾಧ್ಯಾಪಕ ಡಾ. ವಿನೋದ್ ಎ ಆರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ನೀರಿನ ಮಹತ್ವ, ನೀರಿನ ಮಿತ ಬಳಕೆ, ಜೊತೆಗೆ ನೀರಿನ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಕುರಿತಾಗಿ ಜಾಗೃತಿ ಅರಿವು ಮೂಡಿಸಿದರು.
ಕಾಲೇಜಿನ ಸಂಸ್ಥಾಪಕ ಸುಬ್ರಮಣ್ಯ, ಕಾಲೇಜಿನ ನಿರ್ದೇಶಕಿ ಮಮತಾ ಭಾಗವಹಿಸಿದರು.
ಪ್ರಾಂಶುಪಾಲೆ ಡಾ. ಸೀಮಾ ಜಿ ಭಟ್ ವಿದ್ಯಾರ್ಥಿಗಳಿಗೆ ಜಾಗೃತಿಯ ಕುರಿತು, ದಿನನಿತ್ಯದಲ್ಲಿ ನೀರಿನ ಬಳಕೆ ಸಂರಕ್ಷಿಸುವ ಕುರಿತಾಗಿ ಮಾತನಾಡಿದರು.
ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಮುಖ್ಯಸ್ಥೆ ಗೀತಾ, ಶೈಲಾ ಹಾಗೂ ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಸುಹಾನಾ ಸ್ವಾಗತಿಸಿ, ನಂದಿನಿ ಅತಿಥಿಗಳನ್ನು ಪರಿಚಯಿಸಿದರು. ಸಿದ್ಧಿಕಾ ಹಾಗೂ ಪ್ರತೀಕ್ಷಾ ನಿರೂಪಿಸಿ, ಮಿಥಿಲ್ ವಂದಿಸಿದರು.