ಮಧ್ವ ವಾದಿರಾಜ ಮಹಾವಿದ್ಯಾಲಯದಲ್ಲಿ ಮಾದಕ ವ್ಯಸನ ಮತ್ತು ಆ್ಯಂಟಿ ರ‍್ಯಾಗಿಂಗ್ ಕುರಿತು ಜಾಗೃತಿ ಕಾರ್ಯಾಗಾರ

ಉಡುಪಿ: ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕೌನ್ಸೆಲಿಂಗ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯು ಜಂಟಿಯಾಗಿ “ಮಾದಕ ವ್ಯಸನ ಮತ್ತು ಆ್ಯಂಟಿ ರ‍್ಯಾಗಿಂಗ್” ಕುರಿತು ಜಾಗೃತಿ ಕಾರ್ಯಾಗಾರವನ್ನು ಇತ್ತೀಚಿಗೆ ಕಾಲೇಜಿನ ಆವರಣದಲ್ಲಿ ಆಯೋಜಿಸಿತ್ತು.

ಮಲ್ಪೆ ಅಪರಾಧ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್ ಪ್ರಮೋದ್ ಕುಮಾರ್, ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ಮಾದಕ ವ್ಯಸನವು ವ್ಯಕ್ತಿಯ ಜೀವನವನ್ನು ಹೇಗೆ ನಾಶಪಡಿಸುತ್ತದೆ ಮತ್ತು ಮಾದಕ ವ್ಯಸನದಿಂದಾಗಿ ವ್ಯಕ್ತಿಗೆ ಮಾತ್ರವಲ್ಲದೆ ಸಮಾಜಕ್ಕೆ ಉಂಟಾಗಬಹುದಾದಂತ ದುಷ್ಪರಿಣಾಮದ ಬಗ್ಗೆ ಮಾಹಿತಿ ನೀಡಿದರು ಮತ್ತು ಮಾದಕ ವಸ್ತುಗಳ ತಯಾರಿಕೆ, ಮಾರಾಟ, ಖರೀದಿ
ಮತ್ತು ಬಳಕೆಗೆ ಸಂಬಂಧಿಸಿದಂತೆ ಕ್ರಮಕೈಗೊಳ್ಳಲು ಭಾರತೀಯ ದಂಡಸಂಹಿತೆ ಅಡಿಯಲ್ಲಿರುವ ಕಾನೂನುಗಳ ಕುರಿತು ಮಾಹಿತಿ ನೀಡಿದರು.

ಸಂಸ್ಥೆಯ ಪ್ರಾಂಶುಪಾಲ ಡಾ. ತಿರುಮಲೇಶ್ವರ ಭಟ್ ಮಾತನಾಡಿ ಕಾರ್ಯಾಗಾರದ ಸಂಕ್ಷಿಪ್ತ ಮಾಹಿತಿಯನ್ನು ನೀಡಿದರು.

ಕಾರ್ಯಾಗಾರದಲ್ಲಿ ಕೌನ್ಸೆಲಿಂಗ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜಕರು ಮತ್ತು ಸದಸ್ಯರು, ಪ್ರಥಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ರವೀಂದ್ರ ಎಚ್ ಜೆ ನಿರೂಪಿಸಿದರು.