ಅಯೋಧ್ಯೆ: ಶ್ರೀರಾಮ ಲಲ್ಲಾನ ದರ್ಶನ ಪಡೆದ ಪೇಜಾವರ ಶ್ರೀ

ಅಯೋಧ್ಯೆ: ಅಯೋದ್ಯೆ ರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರು ಆಗಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಇಂದು (ನ.2) ಅಯೋಧ್ಯೆಯ ರಾಮಮಂದಿರ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದರು. ಅಲ್ಲಿನ ಮೇಲ್ವಿಚಾರಕರಿಂದ ಕಾಮಗಾರಿ ಬಗ್ಗೆ ಮಾಹಿತಿ ಪಡೆದರು.

ಬಳಿಕ ಅಯೋಧ್ಯೆ ರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ಕಾರ್ಯಾಲಯಕ್ಕೂ ಶ್ರೀಗಳು ಭೇಟಿ ನೀಡಿದರು. ಶ್ರೀರಾಮಲಲ್ಲಾ ಮೂರ್ತಿಗೆ ಚಾಮರ ಸೇವೆಗೈದು ದರ್ಶನ ಪಡೆದರು.