ರಾಮಮಂದಿರ ಭೂಮಿಪೂಜೆ ಹಿನ್ನೆಲೆ: ಉಡುಪಿಯಲ್ಲಿ ಆ.6ರ ವರೆಗೆ ನಿಷೇಧಾಜ್ಞೆ ಜಾರಿ 

ಉಡುಪಿ: ಅಯೋಧ್ಯೆಯಲ್ಲಿ ನಾಳೆ (ಆ.5) ರಾಮಮಂದಿರ ನಿರ್ಮಾಣದ ಭೂಮಿಪೂಜೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಸೆಕ್ಷನ್ 144 ಅಡಿ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.
ಇಂದು ರಾತ್ರಿ 8 ಗಂಟೆಯಿಂದ ಆ. 6ರ ಬೆಳಿಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಅವರು ತಿಳಿಸಿದ್ದಾರೆ.