ಸುಳ್ಯ: ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಸುಳ್ಯದ ಪಾಲಡ್ಕ ಎಂಬಲ್ಲಿ ವರದಿಯಾಗಿದೆ.
ಮೃತ ಬೈಕ್ ಸವಾರನನ್ನು ಸುಳ್ಯ ಕೆವಿಜೆ ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಚಿಕ್ಕಬಳ್ಳಾಪುರ ನಿವಾಸಿ ಸ್ವರೂಪ್ (22) ಎಂದು ಗುರುತಿಸಲಾಗಿದೆ.
ಸ್ವರೂಪ್ ತನ್ನ ಸ್ನೇಹಿತ ಸಂಭ್ರಮ್ ಜೊತೆ ದ್ವಿಚಕ್ರವಾಹದಲ್ಲಿ ತೆರಳುತ್ತಿದ್ದ ವೇಳೆ ವಾಹನವೊಂದನ್ನು ಓವರ್ ಟೇಕ್ ಮಾಡುವ ಸಂದರ್ಭ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಸ್ವರೂಪ್ ನನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗಿದೆ ಅವರು ಮೃತಪಟ್ಟಿದ್ದಾರೆ
ಘಟನೆಯಿಂದ ಗಾಯಗೊಂಡಿರುವ ಸಂಭ್ರಮ್ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.