ಉಡುಪಿ: ನವದೆಹಲಿಯ ವಿಜ್ಞಾನ ಭವನ್‌ನಲ್ಲಿ ನಡೆಯುವ ಆಜಾದಿ ಕಾ ಅಮೃತ್ ಮಹೋತ್ಸವ ಐಕಾನಿಕ್ ವೀಕ್ ಸೆಲೆಬ್ರೇಷನ್ ಕಾರ್ಯಕ್ರಮವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೂನ್ 6 ರಂದು ಉದ್ಘಾಟಿಸಲಿದ್ದಾರೆ.
ಭಾರತದ ಹಣಕಾಸು ಸಚಿವಾಲಯ, ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ ಮತ್ತು ಭಾರತ ಸರಕಾರದ ವತಿಯಿಂದ ನಡೆಯುತ್ತಿರುವ ಈ ಕಾರ್ಯಕ್ರಮವನ್ನು ಭಾರತದಾದ್ಯಂತ ಸುಮಾರು 75 ಜಿಲ್ಲೆಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತಿದ್ದು, ಕರ್ನಾಟಕದಿಂದ ಉಡುಪಿ ಜಿಲ್ಲೆಯನ್ನು ಆಯ್ಕೆ ಮಾಡಲಾಗಿದೆ.
ನೇರ ಪ್ರಸಾರ ಕಾರ್ಯಕ್ರಮವನ್ನು ಲೀಡ್ ಬ್ಯಾಂಕ್ ಕೆನರಾ ಬ್ಯಾಂಕ್ ಉಡುಪಿ, ಇವರ ವತಿಯಿಂದ ಜೂನ್ 6 ರಂದು ಬೆಳಗ್ಗೆ 9.30 ಕ್ಕೆ ಮಣಿಪಾಲದ ಕೆನರಾ ಬ್ಯಾಂಕ್ ಸಿಂಡಿಕೇಟ್ ಗೋಲ್ಡನ್ ಜ್ಯೂಬಿಲಿ ಹಾಲ್‌ನಲ್ಲಿ ಆಯೋಜಿಸಲಾಗಿದೆ. ಎಲ್ಲಾ ಬ್ಯಾಂಕ್‌ಗಳ ಗ್ರಾಹಕರು, ಬ್ಯಾಂಕ್ ಅಧಿಕಾರಿಗಳು, ಸಾರ್ವಜನಿಕ ವಿಮಾ ಕಂಪನಿಗಳ ಅಧಿಕಾರಿಗಳು ಮತ್ತು ಕೇಂದ್ರ ಸರ್ಕಾರದ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಐದು ನೂರಕ್ಕೂ ಹೆಚ್ಚಿನ ಸಾರ್ವಜನಿಕರು ಭಾಗವಹಿಸಲಿದ್ದಾರೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಲೀಡ್ ಬ್ಯಾಂಕ್‌ನ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












