ಐಟಿಎಫ್ ವರ್ಲ್ಡ್ ಟೆನ್ನಿಸ್ ಟೂರ್ನಿಗೆ ಚಾಲನೆ ನೀಡಿದ ಅಜರ್ : ಧಾರವಾಡದಲ್ಲಿ ಮಹಿಳೆಯರಿಗೂ ಅವಕಾಶ ಸಿಗಲಿ

ಧಾರವಾಡ: ಧಾರವಾಡ ಜಿಲ್ಲಾ ಟೆನ್ನಿಸ್ ಸಂಸ್ಥೆ (ಡಿಡಿಎಲ್‍ಟಿಎ) ಆಶ್ರಯದಲ್ಲಿ ರಾಜ್ಯಾಧ್ಯಕ್ಷ ಪೆವಿಲಿಯನ್ ಆವರಣದಲ್ಲಿ ಆರಂಭಗೊಂಡಿರುವ ಅಂತಾರಾಷ್ಟ್ರೀಯ ಪುರುಷರ ಟೆನ್ನಿಸ್ ಪಂದ್ಯಾವಳಿಯನ್ನು ಬಲೂನ್ ಹಾರಿ ಬಿಡುವ ಮೂಲಕ ಹಾಗೂ ಸಾಂಕೇತಿಕವಾಗಿ ಟೆನ್ನಿಸ್ ಆಡುವ ಮೂಲಕ ಮಾಜಿ ಸಂಸದ ಹಾಗೂ ಭಾರತೀಯ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್ ಮೊಹಮ್ಮದ್ ಅಜರುದ್ದೀನ್ ಹಾಗೂ ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಅವರು ಪಂದ್ಯಾವಳಿ ಉದ್ಘಾಟಿಸಿದರು.ಧಾರವಾಡದಲ್ಲಿ ಮಹಿಳೆಯರಿಗೂ ಅವಕಾಶ ಸಿಗಲಿ ಎಂದ ಅಜರ್​, ಇಂದಿನಿಂದ ಐದು ದಿನಗಳ ಕಾಲ ನಡೆಯುವ ಐಟಿಎಫ್ ವರ್ಲ್ಡ್ ಟೆನ್ನಿಸ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡದ ಮಾಜಿ‌ ನಾಯಕ ಮಹಮ್ಮದ ಅಜರುದ್ದೀನ್ ಹಾಗೂ ಸಚಿವ ಸಂತೋಷ ಲಾಡ್ ಚಾಲನೆ ನೀಡಿದರು.

ಈ ಪುರುಷರ ಟೆನ್ನಿಸ್ ಪಂದ್ಯಾವಳಿಯಲ್ಲಿ ವಿದೇಶಿ ಆಟಗಾರರು ಸಹ ಪಾಲ್ಗೊಳ್ಳುತ್ತಿರುವುದರಿಂದ ಅವರಿಗೆ ಸ್ಥಳೀಯ ಪ್ರದೇಶದ ಬಗ್ಗೆ ಪರಿಚಯವಾಗುತ್ತದೆ. ಈ ಬಾರಿ ಕೇವಲ ಪುರುಷರಿಗೆ ಈ ಪಂದ್ಯಾವಳಿ ಸೀಮಿತವಾಗಿದ್ದು, ಮುಂದಿನ ಬಾರಿ ಧಾರವಾಡ ಜಿಲ್ಲೆಯಲ್ಲಿ ಮಹಿಳಾ ಟೆನ್ನಿಸ್ ಆಯೋಜಿಸಿದಲ್ಲಿ ಹೆಚ್ಚು ಆಕರ್ಷಣೀಯವಾಗಲಿದೆ ಎಂದರು.

ಪಂಚ ರಾಜ್ಯ ಚುನಾವಣೆ ವಿಚಾರವಾಗಿ ಮಾತನಾಡಿದ ಅಜರುದ್ದೀನ್, ಈ ಸಲ ನಾವೇ ಸರ್ಕಾರ ಮಾಡುತ್ತೇವೆ. ನಮ್ಮ ಪ್ರಯತ್ನ ಹೆಚ್ಚು ವಿಶ್ವಾಸ ಮೂಡಿಸಿದೆ.‌ ಸರ್ಕಾರ ರಚನೆ ಮಾಡುವ ನಿಟ್ಟಿನಲ್ಲಿ ನಮ್ಮ ಪ್ರಯತ್ನ ನಡೆದಿದೆ. ಸದ್ಯ ಕಾಂಗ್ರೆಸ್ ಪರವಾದ ವಾತಾವರಣ ಇದೆ. ಕರ್ನಾಟಕದ ಗ್ಯಾರಂಟಿ ಯೋಜನೆ, ತೆಲಂಗಾಣ ಗ್ಯಾರಂಟಿ ಯೋಜನೆಗಳಲ್ಲಿ ವ್ಯತ್ಯಾಸವಿದೆ ಎಂದರು.

ಭಾರತವೇ ವಿಶ್ವಕಪ್​ ಗೆಲ್ಲುತ್ತದೆ; ಅಜರ್​ ವಿಶ್ವಾಸ: ವಿಶ್ವಕಪ್ ಕ್ರಿಕೆಟ್ ಟೂರ್ನಿ ಹಿನ್ನೆಲೆ ಅಜರುದ್ದೀನ್ ಪ್ರತಿಕ್ರಿಯಿಸಿ, ಭಾರತ ತಂಡವೇ ವಿಶ್ವಕಪ್ ಗೆಲ್ಲುತ್ತದೆ. ನಮ್ಮದು ಒಳ್ಳೆಯ ತಂಡ ಇದೆ. ತಂಡದಲ್ಲಿ ಒಳ್ಳೆಯ ನಾಯಕರಿದ್ದಾರೆ. ಹೀಗಾಗಿ ಕಪ್ ಗೆಲ್ಲುವ ವಿಶ್ವಾಸ ನಮಗೆ ಇದೆ ಎಂದು ಹೇಳಿದರು.

ಅಜರುದ್ದೀನ ಹಾಜರಿ ನಮಗೆಲ್ಲ ಗೌರವ ತಂದಿದೆ – ಲಾಡ್​: ಪಂದ್ಯಾವಳಿ ಉದ್ಘಾಟಿಸಿದ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು, ಧಾರವಾಡದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರರಿರುವ ಮೊಹಮ್ಮದ್ ಅಜರುದ್ದೀನ್ ಪಾಲ್ಗೊಂಡಿರುವುದು ಗೌರವ ತಂದಿದೆ. ಪಂದ್ಯಾವಳಿಗಳನ್ನು ಅತ್ಯುತ್ತಮವಾಗಿ ಅಚ್ಚುಕಟ್ಟಾಗಿ ಆಯೋಜಿಸಿರುವ ಜಿಲ್ಲಾ ಟೆನ್ನಿಸ್ ಅಸೋಸಿಯೇಷನ್ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ವಿಶೇಷ ಕಾಳಜಿ ಹಾಗೂ ಶ್ರಮ ವಹಿಸಿರುವುದು ಸರಕಾರಕ್ಕೆ ಗೌರವ ತಂದಿದೆ ಎಂದರು.

1937 ರಲ್ಲಿ ಆರಂಭಗೊಂಡಿರುವ ಈ ಟೆನ್ನಿಸ್ ಕೋರ್ಟ್‍ನಲ್ಲಿ 5 ಸೌರಚಾಲಿತ ಹಸಿರು ಕೋರ್ಟ್‍ಗಳನ್ನು ಅಭಿವೃದ್ಧಿಗೊಳಿಸಲಾಗಿದೆ. ಈ ಪಂದ್ಯಾವಳಿ ಇಡೀ ಉತ್ತರ ಕರ್ನಾಟಕಕ್ಕೆ ಮನ್ನಣೆ ತಂದಿದೆ. ಸದ್ಯ ಕ್ರಿಕೆಟ್ ಹೆಚ್ಚಾಗಿ ಬೆಳೆದಿದೆ. ಉಳಿದ ಕ್ರೀಡೆಗಳಿಗೂ ಮನ್ನಣೆ ದೊರೆಯಬೇಕಿದೆ. ಮುಂದಿನ ದಿನಗಳಲ್ಲಿ ಇನ್ನೂ ಉನ್ನತ ಮಟ್ಟದ ಪಂದ್ಯಗಳು ಧಾರವಾಡದಲ್ಲಿ ನಡೆಯಲಿ ಎಂದು ಸಚಿವ ಸಂತೋಷ ಲಾಡ್ ಅವರು ಹಾರೈಸಿದರು. ಈ ಸಂದರ್ಭದಲ್ಲಿ ಮೊಹಮ್ಮದ್ ಅಜರುದ್ದೀನ್ ಅವರಿಗೆ ಧಾರವಾಡ ಪೇಡಾ ಕಾಣಿಕೆಯಾಗಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ.ಸಂತೋಷಕುಮಾರ ಬಿರಾದಾರ ಉಪಸ್ಥಿತರಿದ್ದರು. ಟೆನ್ನಿಸ್ ಅಸೋಸಿಯೇಷನ್ ಕಾರ್ಯದರ್ಶಿ ಸಂದೀಪ ಬಣವಿ ವಂದಿಸಿದರು.
ಎರಡರಲ್ಲಿಯೂ ಬಹಳಷ್ಟು ವ್ಯತ್ಯಾಸವಿದೆ. ಎರಡಕ್ಕೂ ಹೋಲಿಕೆ ಮಾಡಲು ಆಗುವುದಿಲ್ಲ. ಕರ್ನಾಟಕದಲ್ಲಿ ಒಳ್ಳೆ ಯೋಜನೆ ಕೊಟ್ಟಿದ್ದಾರೆ. ಇಲ್ಲಿನ ಜನ ಕಾಂಗ್ರೆಸ್‌ಗೆ ಅವಕಾಶ ಕೊಟ್ಟಿದೆ. ಹೀಗಾಗಿ ಇಲ್ಲಿ ಅಭಿವೃದ್ಧಿ ಕಾರ್ಯಗಳು ಚೆನ್ನಾಗಿ ಆಗುತ್ತಿವೆ ಎಂದು ಅಜರುದ್ದೀನ್ ಹೇಳಿದರು.ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮೊಹಮ್ಮದ ಅಜರುದ್ಧಿನ್​​​​, ಧಾರವಾಡದಲ್ಲಿ ಮಹಿಳಾ ಟೆನ್ನಿಸ್ ಪಂದ್ಯಾವಳಿಗಳು ಸಹ ಮುಂದಿನ ದಿನಮಾನಗಳಲ್ಲಿ ಆಯೋಜನೆಗೊಳ್ಳಲಿ ಎಂದರು. ತಮಗೆ ಹೆಚ್ಚಾಗಿ ಕ್ರಿಕೆಟ್ ಉದ್ಘಾಟನೆಗೆ ಆಹ್ವಾನವಿರುತ್ತದೆ. ಕ್ರಿಕೆಟ್‍ಗೆ ವಿಶ್ವದಲ್ಲೆಡೆ ಹೆಚ್ಚು ಪ್ರೋತ್ಸಾಹ ದೊರೆತಂತೆ ಉಳಿದ ಆಟಗಳಿಗೂ ಹೆಚ್ಚೆಚ್ಚು ಉತ್ತೇಜನ, ಪ್ರೋತ್ಸಾಹ ದೊರೆಯಬೇಕೆಂಬ ಉದ್ದೇಶದಿಂದ ನಾನು ಟೆನ್ನಿಸ್ ಪಂದ್ಯಾವಳಿಗೆ ಬಂದಿರುವುದಾಗಿ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮಾತನಾಡಿ, 17 ವರ್ಷದ ನಂತರ ಧಾರವಾಡದಲ್ಲಿ ಅಂತಾರಾಷ್ಟ್ರೀಯ ಟೆನ್ನಿಸ್ ಪಂದ್ಯಾವಳಿ ಜರುಗುತ್ತಿದ್ದು, 12 ದೇಶಗಳ 45 ಆಟಗಾರರು ಭಾಗವಹಿಸಲಿದ್ದಾರೆ. ಫೈನಲ್​ ಡಬಲ್ಸ್ ಪಂದ್ಯ 21 ರಂದು ಹಾಗೂ ಸಿಂಗಲ್ಸ್ ಪಂದ್ಯ 22 ರಂದು ಜರುಗಲಿವೆ ಎಂದರು.