ಉಡುಪಿ: ಪ್ರಸಕ್ತ ಸಾಲಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯ ಸಮನ್ವಯ ಶಿಕ್ಷಣ ಮಧ್ಯವರ್ತನ ಚಟುವಟಿಕೆಯನ್ನು ಅನುಷ್ಠಾನಗೊಳಿಸಲು ತಾತ್ಕಾಲಿಕವಾಗಿ ವಿಶೇಷ ಶಿಕ್ಷಕರ ಸೇವೆಯನ್ನು ಪಡೆಯಲು ಪ್ರಾಥಮಿಕ/ಪೌಢಶಾಲಾ ಹಂತದ ಖಾಲಿ ಇರುವ ಬಿ.ಐ.ಇ.ಆರ್.ಟಿ ಹುದ್ದೆಗಳನ್ನು ನೇರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ನಿಗದಿತ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಜೂನ್ 23 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪಯೋಜನಾ ಸಮನ್ವಯಾಧಿಕಾರಿ, ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಕಚೇರಿ ಪ್ರಕಟಣೆ ತಿಳಿಸಿದೆ.

















