ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಅಡ್ವಾಣಿ ಸಹಿತ 32 ಮಂದಿ ದೋಷಮುಕ್ತ

ಲಖನೌ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ 28 ವರ್ಷದ ಸುದೀರ್ಘ ವಿಚಾರಣೆಯ ನಂತ್ರ ವಿಶೇಷ ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯ ಬುಧವಾರ ತನ್ನ ತೀರ್ಪು ಪ್ರಕಟಿಸಿದ್ದು, ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉಮಾಭಾರತಿ ಸೇರಿ 32 ಜನರಿಗೆ ಕ್ಲೀನ್ ಚೀಟ್ ನೀಡಿದೆ.

ಸಿಬಿಐ ನ್ಯಾಯಾಧೀಶ ಸುರೇಂದ್ರ ಕುಮಾರ್ ಯಾದವ್ ಅವರು ತೀರ್ಪು ಪ್ರಕಟಿಸಿದ್ದು, ಇದು ಪೂರ್ವ ನಿಯೋಜಿತ ಕೃತ್ಯವಲ್ಲ, ಅವರನ್ನು ಆರೋಪಿಗಳು ಎನ್ನಲು ಯಾವುದೇ ಸಾಕ್ಷ್ಯಗಳಿಲ್ಲ. ಎಲ್ಲಾ ಆರೋಪಿಗಳನ್ನು ಆರೋಪ ಮುಕ್ತ ಘೋಷಿಸಿ ಆದೇಶ ಹೊರಡಿಸಿದರು.

ಸುಮಾರು 2000 ಪುಟಗಳ ತೀರ್ಪು ಸಿದ್ಧಪಡಿಸಿದ್ದ ನ್ಯಾಯಾಲಯ ಈ ತೀರ್ಪು ನೀಡಿದೆ.
ಕೊರೊನಾ ಹಿನ್ನೆಲೆಯಲ್ಲಿ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ, ಕೇಂದ್ರದ ಮಾಜಿ ಸಚಿವ ಮುರಳಿ ಮನೋಹರ್ ಜೋಶಿ, ಕೇಂದ್ರದ ಮಾಜಿ ಸಚಿವೆ, ಉಮಾ ಭಾರತಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಸೇರಿದಂತೆ ಪ್ರಮುಖರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು.