ಉಡುಪಿ: ಮೈಸೂರು ವಿಶ್ವವಿದ್ಯಾಲಯ ಸಂಯೋಜಿತ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ ಪ್ರಸಕ್ತ ಸಾಲಿಗೆ ನಾಲ್ಕು ವರ್ಷಗಳ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿವಿಎ) ಪದವಿ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮದ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿದ್ದು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಮೇ 30 ಕೊನೆಯ ದಿನವಾಗಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ htts://uucms.karnataka.gov.in ಅಥವಾ htts://www.cavamysore.karnataka.gov.in ಅಥವಾ ಕಚೇರಿ ದೂರವಾಣಿ ಸಂಖ್ಯೆ 0821-2438931 ಅನ್ನು ಸಂಪರ್ಕಿಸಬಹುದು ಎಂದು ಕಾವಾ ಕಾಲೇಜು ಪ್ರಕಟಣೆ ತಿಳಿಸಿದೆ.

















